ಎಲ್ಲಾ ರೈತರಿಗೂ ಬ್ಯಾಂಕ್‌ ಸೌಲಭ್ಯ ಕಲ್ಪಿಸುವೆ

Team Udayavani, Jul 20, 2019, 5:29 PM IST

ಕೆ.ಆರ್‌.ಪೇಟೆ ತಾಲೂಕು ಪಿಕಾರ್ಡ್‌ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಕಬ್ಬಲಗೆರೆಪುರ ಪುಟ್ಟಸ್ವಾಮೀಗೌಡ ಅವರನ್ನು ಬ್ಯಾಂಕಿನ ನಿರ್ದೇಶಕರು ಮತ್ತು ಸದಸ್ಯರು ಅಭಿನಂದಿಸಿದರು.

ಕೆ.ಆರ್‌.ಪೇಟೆ: ತಾಲೂಕು ಪಿಕಾರ್ಡ್‌ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಕಬ್ಬಲಗೆರೆಪುರ ಪುಟ್ಟಸ್ವಾಮಿಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದಿನ ಅಧ್ಯಕ್ಷ ಬಂಡಿಹೊಳೆ ನಾಗೇಶ್‌ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬ್ಯಾಂಕಿನ ಸಭಾಂಗಣದಲ್ಲಿ ಶುಕ್ರವಾರ ಚುನಾವಣೆ ನಿಗದಿ ಮಾಡಲಾಗಿತ್ತು. ಅಧ್ಯಕ್ಷ ಸ್ಥಾನ ಬಯಸಿ ಪುಟ್ಟಸ್ವಾಮೀಗೌಡ ಅವರನ್ನು ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಆದಕಾರಣ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ರವಿ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ನೂತನ ಅಧ್ಯಕ್ಷರ ಘೋಷಣೆಯಾಗುತ್ತಿ ದ್ದಂತೆಯೇ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಪುಟ್ಟಸ್ವಾಮಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ವಿತರಣೆ ಮಾಡಿ ವಿಜಯೋತ್ಸವ ಆಚರಣೆ ಮಾಡಿದರು.

ಬ್ಯಾಂಕ್‌ ಪ್ರಗತಿಗೆ ಶ್ರಮಿಸುವೆ: ನೂತನ ಅಧ್ಯಕ್ಷ ಕಬ್ಬಲಗೆರೆಪುರ ಪುಟ್ಟಸ್ವಾಮೀಗೌಡ, ನಿರ್ಗಮಿತ ಅಧ್ಯಕ್ಷ ನಾಗೇಶ್‌ ಅವರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿ, ಬ್ಯಾಂಕಿನ ಸರ್ವಾಂಗೀಣ ಅಭಿವೃದ್ಧಿಗೆ ನನಗೆ ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ಪ್ರಾಮಾಣಿಕ ವಾಗಿ ಕೆಲಸ ಮಾಡುತ್ತೇನೆ ಎಂದರು.

ಬ್ಯಾಂಕಿನ ಎಲ್ಲಾ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೈತರಿಗೆ ಹಾಗೂ ಗ್ರಾಹಕರಿಗೆ ಬ್ಯಾಂಕಿನ ಸೌಲಭ್ಯಗಳನ್ನು ತಲುಪಿಸಲು ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಇದೇ ವೇಳೆ ನೂತನ ಅಧ್ಯಕ್ಷ ಕಬ್ಬಲಗೆರೆ ಪುಟ್ಟಸ್ವಾಮಿಗೌಡ ಅವರನ್ನು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌, ಕೆಯುಐಡಿ ಎಫ್ಸಿ ನಿಗಮದ ಮಾಜಿ ರಾಜ್ಯಾಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯ ಕೋಡಿಮಾನಹಳ್ಳಿ ದೇವರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಿಕ್ಕೇರಿಸುರೇಶ್‌, ನಿರ್ದೇಶಕರಾದ ಕೆ.ಬಿ.ರಕುಮಾರ್‌, ಎಚ್.ಎಸ್‌.ವಿಶ್ವನಾಥ್‌, ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

  • ಕೆ.ಆರ್‌.ಪೇಟೆ: ತಾಲೂಕಿನಲ್ಲಿ 9 ದೇವಾಲಯಗಳ ತೆರವುಗೊಳಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿದ್ದರೂ ಜನರ ವಿರೋಧದ ನಡುವೆ ದೇವಾಲಯಗಳನ್ನು ತೆರವುಗೊಳಿಸುವುದು ಅಧಿಕಾರಿಗಳಿಗೆ...

  • ಕೆ.ಆರ್‌.ಪೇಟೆ: ಪುರಾಣ ಪ್ರಸಿದ್ಧ ಗೋವುಗಳ ರಕ್ಷಕ ಬಿಲ್ಲೇನಹಳ್ಳಿ ಶ್ರೀ ಗವಿರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ...

  • ಮಂಡ್ಯ: ಸಮೃದ್ಧ ಮಳೆ ಸುರಿದ ವೇಳೆ ಜಲಪಾತದಲ್ಲಿ ಜಲಧಾರೆ ಉಕ್ಕಿ ಹರಿಯುವ ಸೊಬಗನ್ನು ನೋಡುವುದೇ ನಯನ ಮನೋಹರ. ಆದರೆ, ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಹರಿಸಿ...

  • ಶ್ರೀರಂಗಪಟ್ಟಣ: ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುವ ರೈತರ ಸಹಾಯಧನ, ವ್ಯದ್ಧಾಪ್ಯ, ವಿಧವಾ ವೇತನಗಳನ್ನೂ ಬ್ಯಾಂಕುಗಳಲ್ಲಿ ರೈತರು ಪಡೆದ ಸಾಲಕ್ಕೆ ಜಮೆ ಮಾಡಿಕೊಳ್ಳುವ...

  • ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ದಿನಗೂಲಿ ನೌಕರರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಒಂದು ದಿನದ ಧರಣಿ ನಡೆಸಿ ಜಿಲ್ಲಾಧಿಕಾರಿಗಳ...

ಹೊಸ ಸೇರ್ಪಡೆ