ಮೊಸಳೆಗಳಿಗೆ ವ್ಯಕ್ತಿ ಆಹುತಿ

Team Udayavani, May 28, 2018, 7:10 AM IST

crocodile-man.jpg

ಕನಕಪುರ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಭಾನುವಾರ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ವ್ಯಕ್ತಿಯೊಬ್ಬ ಮೊಸಳೆಗಳಿಗೆ ಆಹುತಿಯಾಗಿದ್ದಾನೆ.

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮೋಟಗಾನಹಳ್ಳಿ ಗ್ರಾಮದ ವೆಂಕಟೇಶ್‌ (52)ಮೃತ ದುರ್ದೈವಿ. ಮೋಟಗಾನಹಳ್ಳಿಯ ಜಯಣ್ಣ ಎಂಬುವರು ತಮ್ಮ ಮನೆಯ ದೇವರಾದ ಮುತ್ತತ್ತಿಯ ಮುತ್ತತ್ತಿ ರಾಯಸ್ವಾಮಿಗೆ ಸೇವೆ ಸಲ್ಲಿಸಲು ಶನಿವಾರ ಸಂಜೆ ಇಲ್ಲಿಗೆ ಬಂದಿದ್ದರು. 

450ಕ್ಕೂ ಹೆಚ್ಚು ಮಂದಿ ವಿವಿಧ ವಾಹನದಲ್ಲಿ ಆಗಮಿಸಿದ್ದರು. ಭಾನುವಾರ ಬೆಳಗ್ಗೆ ದೇವರ ಸೇವೆಗೆ ಸಿದ್ಧತೆ ನಡೆದಿತ್ತು. ಬೆಳಗ್ಗೆ 8 ಗಂಟೆ ವೇಳೆಗೆ, ವೆಂಕಟೇಶ್‌ ಅವರು ದೇವಾಲಯದ ಸಮೀಪ ಇರುವ ಕಾವೇರಿ ನದಿ ನೀರಿನಲ್ಲಿ ಈಜಾಡುತ್ತಿದ್ದರು. ಏಕಾಏಕಿ 3 ಮೊಸಳೆಗಳು ಕಾಣಿಸಿಕೊಂಡು, ವೆಂಕಟೇಶ್‌ನನ್ನು ಒಂದು ದಡದಿಂದ ಮತ್ತೂಂದು ದಡಕ್ಕೆ ಎಳೆದುಕೊಂಡು ಹೋದವು. ಇದನ್ನು ಕಂಡು ಮೋಟಗಾನಹಳ್ಳಿ ಗ್ರಾಮಸ್ಥರು ಹಾಗೂ ಸ್ಥಳದಲ್ಲಿದ್ದವರು ಕೂಗಾಡತೊಡಗಿದರು.

ಆಗ ಮೊಸಳೆಗಳು ವೆಂಕಟೇಶ್‌ನನ್ನು ನೀರಿನ ಒಳಗೆ ಎಳೆದುಕೊಂಡು ಹೋದವು. ಮುತ್ತತ್ತಿಯಲ್ಲಿ ಇದ್ದ ಸ್ಥಳೀಯ ಈಜುಗಾರರು ಹಾಗೂ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಸಿಬ್ಬಂದಿಗಳು ಸೇರಿ ನಾಡದೋಣಿಯಲ್ಲಿ ವೆಂಕಟೇಶ್‌ನನ್ನು ಹುಡುಕಲಾರಂಭಿಸಿದರು. ನದಿಯ ಬಲದಂಡೆಯ ಬಳಿ ಅವರ ದೇಹ ಕಾಣಿಸಿತು. ಮೊಸಳೆಗಳಿಂದ ಬಿಡಿಸಿ, ವೆಂಕಟೇಶ್‌ನನ್ನು ನೀರಿನಿಂದ ಹೊರತರುವಷ್ಟರಲ್ಲಿ ಅವರು ಉಸಿರುಗಟ್ಟಿ ಮೃತಪಟ್ಟಿದ್ದರು. ಮೊಸಳೆಗಳು ಅವರ ಎಡಗಾಲಿನ ಪಾದ ತಿಂದಿದ್ದು, ಬಲಗೈ ಮೂಳೆ ಮುರಿದು ಹಾಕಿವೆ.

ಹಲಗೂರು ಪೊಲೀಸರು ಮೃತ ವ್ಯಕ್ತಿಯ ಪತ್ನಿ, ಗಂಗಮ್ಮನವರಿಂದ ದೂರು ದಾಖಲಿಸಿಕೊಂಡು,ಮಳವಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ರಾತ್ರಿ 7.30ಕ್ಕೆ ಮೃತನ ಸ್ವಗ್ರಾಮವಾದ ಮೋಟಗಾನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.