ಅಂಬೇಡ್ಕರ್ ಭವನಕ್ಕೆ ಆವರಿಸಿದೆ ಕತ್ತಲು

ವಿದ್ಯುತ್‌ ಕಡಿತದಿಂದ ಭವನಕ್ಕೆ ಬೀಗ „ ಸಮರ್ಪಕ ನಿರ್ವಹಣೆಗೆ ಅಧಿಕಾರಿಗಳ ನಿರ್ಲಕ್ಷ್ಯ

Team Udayavani, Nov 13, 2021, 2:26 PM IST

ಅಂಬೇಡ್ಕರ್ ಭವನಕ್ಕೆ ಆವರಿಸಿದೆ ಕತ್ತಲು

ಮಂಡ್ಯ: ಸರಿಯಾದ ನಿರ್ವಹಣೆ ಇಲ್ಲದಿರುವುದರಿಂದ ನಗರದ ಹೃದಯಭಾಗದಲ್ಲಿರುವ ಸುಸಜ್ಜಿತ ಅಂಬೇಡ್ಕರ್‌ ಭವನಕ್ಕೆ ವಿದ್ಯುತ್‌ ಇಲ್ಲದೆ ಕತ್ತಲು ಆವರಿಸಿದೆ. ಇದರಿಂದ ಕಳೆದ ಮೂರ್‍ನಾಲ್ಕು ತಿಂಗಳಿನಿಂದ ಬೀಗ ಜಡಿಯಲಾಗಿದೆ. ಕಳೆದ ಮೂರು ವರ್ಷಗಳಿಂದ ವಿದ್ಯುತ್‌ ಬಿಲ್‌ ಪಾವತಿಸದ ಹಿನ್ನೆಲೆಯಲ್ಲಿ ಸೆಸ್ಕ್ ಇಲಾಖೆ ವಿದ್ಯುತ್‌ ಕಡಿತಗೊಳಿಸಿದೆ. ಅಂಬೇಡ್ಕರ್‌ ಭವನ ಸಮಿತಿ ಸಭೆಯಲ್ಲಿ ವಿದ್ಯುತ್‌ ಬಿಲ್‌ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ, ಇದುವರೆಗೂ ಪಾವತಿಸಿಲ್ಲ.

5.60 ಲಕ್ಷ ರೂ. ವಿದ್ಯುತ್‌ ಬಿಲ್‌ ಬಾಕಿ: 2019ರಿಂದ ಇದುವ ರೆಗೂ ವಿದ್ಯುತ್‌ ಬಿಲ್‌ ಪಾವತಿಸಿಲ್ಲ. ಇದುವ ರೆಗೂ ಸುಮಾರು 5.60 ಲಕ್ಷ ರೂ. ವಿದ್ಯುತ್‌ ಬಿಲ್‌ ಬಾಕಿ ಇದೆ. ಅಧಿಕಾರಿಗಳ ನಿರ್ಲ ಕ್ಷ್ಯ ಹೆಚ್ಚಾಗಿರುವುದು ಸಮಸ್ಯೆಗೆ ಕಾರಣ ವಾಗಿ ದೆ. ಅಂಬೇಡ್ಕರ್‌ ಭವನ ನಿರ್ಮಾಣದ ಅನು ದಾನ ದಲ್ಲಿ ಉಳಿದಿರುವ 50 ಸಾವಿರ ರೂ. ಹಣವನ್ನು ಸಣ್ಣ ಪುಟ್ಟ ಖರ್ಚುಗಳಿಗೆ ಬಳಸಲಾಗಿದೆ.

ನಿರ್ವಹಣೆ ಅಸಮರ್ಪಕ: ಅಂಬೇಡ್ಕರ್‌ ಭವನ ಸಮಿತಿಯಲ್ಲಿ ಮಂಡ್ಯ ಉಪವಿಭಾಗಾಧಿ ಕಾರಿ ಸೇರಿದಂತೆ ಸೆಸ್ಕ್, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಸಂಘ-ಸಂಸ್ಥೆಗಳ ಮುಖಂಡರಿದ್ದಾರೆ. ಸಮಾಜ ಕಲ್ಯಾಣ ಇಲಾಖೆಗೆ ನಿರ್ವಹಣೆ ಜವಾಬ್ದಾರಿ ವಹಿಸಲಾಗಿದೆ. ಆದರೆ, ಸಮಿತಿ ಸೇರಿದಂತೆ ಇಲಾಖೆಯೂ ಸರಿ ಯಾದ ನಿರ್ವಹಣೆ ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಉಚಿತ ಕಾರ್ಯಕ್ರಮಕ್ಕೆ ಹೆಚ್ಚು ಮನ್ನಣೆ: ಇದುವರೆಗೂ ಅಂಬೇಡ್ಕರ್‌ ಭವನದಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಬಹುತೇಕ ಹೆಚ್ಚು ಉಚಿತವಾಗಿ ನೀಡಿರುವುದು ಸಂಪನ್ಮೂಲ ಕ್ರೂಢೀಕರಣವಾಗದ ಹಿನ್ನೆಲೆಯಲ್ಲಿ ಆರ್ಥಿಕ ಹೊರೆ ಬಿದ್ದಿದೆ. ಸಂಘ- ಸಂಸ್ಥೆಗಳು, ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ವರ್ಗದವರಿಗೆ ಇಂತಿಷ್ಟು ಎಂಬ ಬಾಡಿಗೆ ನಿಗದಿ ಮಾಡಲಾಗಿದೆ. ಆದರೆ, ಇದುವರೆಗೂ ಸರಿಯಾಗಿ ಆಯೋಜಕರಿಂದ ಬಾಡಿಗೆ ಪಾವತಿ ಮಾಡಿಸಿಕೊಳ್ಳದಿರುವುದು ಸಮಸ್ಯೆಗೆ ಕಾರಣವಾಗಿದೆ.

ಮೂರು ತಿಂಗಳಿನಿಂದ ಬೀಗ: ವಿದ್ಯುತ್‌ ಕಡಿತವಾದ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಅಂಬೇಡ್ಕರ್‌ ಭವನಕ್ಕೆ ಬೀಗ ಜಡಿಯಲಾಗಿದೆ. ಇದರಿಂದ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಆದರೂ, ಇದುವರೆಗೂ ಸಮಾಜ ಕಲ್ಯಾಣ ಇಲಾಖೆಯವರಾಗಲೀ ಅಥವಾ ಸಮಿತಿಯೂ ಯಾವುದೇ ತಲೆಕೆಡಿಸಿಕೊಂಡಿಲ್ಲ. ಇದರಿಂದ ಸಾರ್ವಜನಿಕ ಕಾರ್ಯಕ್ರಮಗಳ ನಡೆಸಲು ತೊಂದರೆಯಾಗಿದೆ ಎಂಬುದು ಸಂಘಟಕರು ಹಾಗೂ ಸಾರ್ವಜನಿಕರ ಆರೋಪವಾಗಿದೆ.

 ಸಮುದಾಯ ಭವನಗಳತ್ತ ಆಯೋಜಕರು- 

ನಗರದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್‌ ಕಲಾ ಮಂದಿರ, ರೈತ ಸಭಾಂಗಣ, ಗುರು ಭವನಗಳು ಹಳೆಯದಾಗಿದ್ದು, ಕುರ್ಚಿಗಳು, ಸೌಂಡ್‌ ಸಿಸ್ಟಂಗಳು ದುರಸ್ತಿಯಲ್ಲಿವೆ. ಇದರಿಂದ ಸಮರ್ಪಕ ಸಭಾಂಗಣಗಳು ಕಾರ್ಯಕ್ರಮ ಆಯೋಜಕರಿಗೆ ಸಿಗುತ್ತಿಲ್ಲ.

ಕರ್ನಾಟಕ ಸಂಘದ ಕೆವಿಎಸ್‌ ಭವನ ಸುಸಜ್ಜಿತವಾಗಿದ್ದರೂ ಹೆಚ್ಚು ಮಂದಿ ಸೇರಲು ಸಾಧ್ಯವಾಗುವುದಿಲ್ಲ. ಆದ್ದರಿಂದ ರಾಜಕೀಯ ಪಕ್ಷಗಳು, ಸಂಘ- ಸಂಸ್ಥೆಗಳು, ಖಾಸಗಿ ಕಂಪ ನಿಗಳು ಕಾರ್ಯಕ್ರಮಗಳು ಸಹ ಸಮುದಾಯ ಭವನ, ಕಲ್ಯಾಣ ಮಂಟಪಗಳ ಮೋರೆ ಹೋಗುವಂತಾಗಿದೆ

ಇದನ್ನೂ ಓದಿ:- ವಿಧಾನ ಪರಿಷತ್ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ

ಸಮಿತಿ ಸಭೆಯಲ್ಲೂ ಚರ್ಚೆ ಅಂಬೇಡ್ಕರ್‌ ಭವನ ಸಮಿತಿಗೆ ಮಂಡ್ಯ ಉಪವಿಭಾಗಾಧಿಕಾರಿಯವರೇ ಅಧ್ಯಕ್ಷರಾಗಿದ್ದಾರೆ. ನಿರ್ವಹಣೆಯ ಮೇಲ್ವಿಚಾರಣೆ ಅವರ ಜವಾಬ್ದಾರಿಯಾಗಿದೆ. ಕಳೆದ ಸಮಿತಿ ಸಭೆಯಲ್ಲೂ ವಿದ್ಯುತ್‌ ಬಿಲ್‌ ಪಾವತಿ ಸಂಬಂಧ ಚರ್ಚೆ ನಡೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

“ಈಗಾಗಲೇ ಒಂದು ಅಂಬೇಡ್ಕರ್‌ ಭವನ ಸಮಿತಿಯ ಸಭೆ ನಡೆಸಲಾಗಿದ್ದು, ಕಾರ್ಯಕ್ರಮಗಳ ಆಯೋಜನೆಗೆ ಬಾಡಿಗೆ ದರ ನಿಗದಿ ಮಾಡಲಾಗಿದೆ. ಕೆಪಿಟಿ ಕಾಯ್ದೆಯಂತೆ ದರ ನಿಗದಿಪಡಿಸಲಾಗಿದೆ. ಬಾಕಿ ವಿದ್ಯುತ್‌ ಬಿಲ್‌ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಅಲ್ಲದೆ, ಜಿಲ್ಲಾಧಿಕಾರಿಯವರಿಗೂ ಮಾಹಿತಿ ನೀಡಿದ್ದು, ಸೆಸ್ಕಾಂಗೆ ತಿಳಿಸಲಾಗಿತ್ತು. ಸರ್ಕಾರದಿಂದ ಇನ್ನೂ ಅನುದಾನ ಬರಬೇಕಾಗಿದ್ದು, ಅದು ಬಂದರೆ ಸಮಸ್ಯೆ ಬಗೆಹರಿಯಲಿದೆ. ಸಮಿತಿಗೆ ಅಧ್ಯಕ್ಷರಾಗಿ ಎಸಿ ಅವರಿಗೆ ತಾತ್ಕಾಲಿಕವಾಗಿ ನೇಮಕ ಮಾಡಲಾಗಿದೆ. ಉಳಿದ ನಿರ್ವಹಣೆ, ಖರ್ಚು-ವೆಚ್ಚಗಳನ್ನು ಸಮಾಜ ಕಲ್ಯಾಣ ಇಲಾಖೆಯವರೇ ನಿರ್ವಹಿಸಲಿದ್ದಾರೆ.” – ಐಶ್ವರ್ಯ, ಉಪವಿಭಾಗಾಧಿಕಾರಿ, ಸಮಿತಿ ಅಧ್ಯಕ್ಷರು, ಮಂಡ್ಯ.

“ವಿದ್ಯುತ್‌ ಬಿಲ್‌ ಪಾವತಿಸದ ಹಿನ್ನೆಲೆಯಲ್ಲಿ ಸೆಸ್ಕ್ ವಿದ್ಯುತ್‌ ಕಡಿತಗೊಳಿಸಿದ್ದಾರೆ. ಉಚಿತ ಕಾರ್ಯಕ್ರಮಗಳು ಹಾಗೂ ಸರಿಯಾಗಿ ಬಾಡಿಗೆ ಪಾವತಿಸಿಕೊಳ್ಳದ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ತೊಂದರೆಯಾಗಿದೆ. ಶೀಘ್ರ 15 ದಿನದೊಳಗೆ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಲಾಗುವುದು.” – ರಂಗೇಗೌಡ, ಉಪನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ ಹಾಗೂ ಸಮಿತಿ ಸದಸ್ಯರು.

“ಕಳೆದ ಸಮಿತಿ ಸಭೆಯಲ್ಲಿ ವಿದ್ಯುತ್‌ ಬಿಲ್‌ ಪಾವತಿಸುವ ಸಂಬಂಧ ಚರ್ಚೆ ನಡೆಸಲಾಗಿದೆ. ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಸೆಸ್ಕ್ ಕಿರಿಯ ಎಂಜಿನಿಯರ್‌ರೊಬ್ಬರು ವಿದ್ಯುತ್‌ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಭರವಸೆ ನೀಡಿದ್ದರೂ, ಇದುವರೆಗೂ ಆಗಿಲ್ಲ. ಕೂಡಲೇ ಅಧಿಕಾರಿಗಳು ಕ್ರಮ ವಹಿಸಬೇಕು.” -ಆರ್‌.ಮಹೇಶ್‌ ಕೃಷ್ಣ, ಸದಸ್ಯರು, ಅಂಬೇಡ್ಕರ್‌ ಭವನ ಸಮಿತಿ

“ವಿದ್ಯುತ್‌ ಕಡಿತ ಮಾಡಿರುವು ದರಿಂದ ಯಾವುದೇ ಕಾರ್ಯ ಕ್ರಮಗಳು ನಡೆಯುತ್ತಿಲ್ಲ. ನಗರದ ಸುಸಜ್ಜಿತ ಭವನ ಇದಾಗಿದ್ದು, ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳುವ ಮೂಲಕ ಭವನವನ್ನು ಸಾರ್ವಜನಿಕರಿಗೆ ಅನುವು ಮಾಡಿಕೊಡಬೇಕು. ಮುಂದೆ ಈ ರೀತಿ ತೊಂದರೆಯಾಗದಂತೆ ಕ್ರಮ ವಹಿಸಬೇಕು.” – ಬಿ.ಪಿ.ಪ್ರಕಾಶ್‌, ಮಾಜಿ ಸದಸ್ಯರು, ನಗರಸಭೆ

 – ಎಚ್‌.ಶಿವರಾಜು

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.