ಕಾರು,ಟ್ರ್ಯಾಕ್ಟರ್ ನಡುವೆ ಅಪಘಾತ; ಓರ್ವ ಸಾವು, ಇಬ್ಬರು ಗಂಭೀರ
Team Udayavani, Apr 30, 2019, 10:43 AM IST
ಮಂಡ್ಯ: ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಟ್ರ್ಯಾಕ್ಟರ್ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಅವಘಡ ಮಂಗಳವಾರ ಬೆಳಗ್ಗೆ ನಾಗಮಂಗಲದ ಬೆಳ್ಳರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.
ಬೆಂಗಳೂರಿನಿಂದ ಹಾಸನದೆಡೆಗೆ ತೆರಳುತ್ತಿದ್ದ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಬಳಿಕ ಟ್ರ್ಯಾಕ್ಟರ್ ಚಾಲಕಸ್ಥಳದಿಂದ ಪರಾರಿಯಾಗಿದ್ದಾನೆ. ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.