ಕೆರೆ-ಕಾಲುವೆ ನೀರು ಪರೀಕ್ಷೆಗೆ ರವಾನೆ


Team Udayavani, Jan 15, 2018, 3:50 PM IST

mandya.jpg

ಮಂಡ್ಯ/ಭಾರತೀನಗರ: ಇಲ್ಲಿಗೆ ಸಮೀಪದ ಮಾದರಹಳ್ಳಿ ಸುತ್ತಮುತ್ತ ಪೆಲಿಕಾನ್‌ ಹಕ್ಕಿಗಳ ಸಾವು ಮುಂದುವರಿದಿದೆ. ಪಕ್ಷಿಗಳ ಸಾವು ಪಶು ವೈದ್ಯಾಧಿಕಾರಿಗಳಿಗೆ ತಲೆಬಿಸಿ ಉಂಟು ಮಾಡಿದೆ. ಇದರೊಂದಿಗೆ ಹಕ್ಕಿಜ್ವರದ ಭೀತಿ ಪಕ್ಷಿಪ್ರಿಯರಲ್ಲಿ ಆತಂಕ ಹೆಚ್ಚಿಸಿದೆ.

ಕೊಕ್ಕರೆ ಬೆಳ್ಳೂರಿನಲ್ಲಿ ಇದುವರೆಗೆ 11 ಪೆಲಿಕಾನ್‌ ಹಕ್ಕಿಗಳು ಮೃತಪಟ್ಟಿವೆ. ಪಕ್ಷಿಗಳು ಸಾವಿಗೆ ಹಕ್ಕಿಜ್ವರ ಕಾರಣವಿರಬಹುದೆಂದು ಶಂಕೆ ವ್ಯಕ್ತಪಡಿಸಿ ಅರಣ್ಯ ಇಲಾಖೆಯವರು ಮರದ ಬುಡಕ್ಕೆ ಔಷಧ ಸಿಂಪಡಣೆ ಮಾಡಿದ್ದಾರೆ. ಅಲ್ಲೀಗ ಪಕ್ಷಿಗಳು ಸುರಕ್ಷಿತವಾಗಿವೆ ಎನ್ನಲಾಗಿದೆ.

ಅಲ್ಲಿಂದ 14 ಕಿ.ಮೀ. ದೂರದಲ್ಲಿರುವ ಮಾದರ ಹಳ್ಳಿ ಸಮೀಪದ ಸೂಳೆಕೆರೆಯಲ್ಲಿ ಪೆಲಿಕಾನ್‌ ಹಕ್ಕಿಗಳ ಸಾವು ಮುಂದುವರಿದಿದೆ. ಹದಿನೈದು ದಿನಗಳ ಅಂತರದಲ್ಲಿ ನಾಲ್ಕು ಪೆಲಿಕಾನ್‌ ಪಕ್ಷಿಗಳು ಮೃತ ಪಟ್ಟಿವೆ. ಈ ಪಕ್ಷಿಗಳ ಸಾವಿಗೆ ನಿಖರ ಕಾರಣ ಇನ್ನೂ ನಿಗೂಢವಾಗಿದೆ.

ಎರಡು ಅಸ್ವಸ್ಥ: ಶನಿವಾರ ಮತ್ತೆ ಎರಡು ಪೆಲಿಕಾನ್‌ ಪಕ್ಷಿಗಳು ಅಸ್ವಸ್ಥಗೊಂಡು ಕೆಳಗೆ ಬಿದ್ದಿವೆ. ಅವುಗಳಿಗೆ ಹಾರಲು ಶಕ್ತಿ ಇಲ್ಲ. ಊಟವನ್ನೂ ಸೇವಿಸುತ್ತಿಲ್ಲ. ಸ್ಥಳ ಪರಿಶೀಲನೆಗೆ ಭೇಟಿ ನೀಡುವ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಪಕ್ಷಿಗಳ ಅಂತ್ಯಸಂಸ್ಕಾರ ನೆರವೇರಿಸಿ ವಾಪಸ್‌ ತೆರಳು ತ್ತಿದ್ದಾರೆಯೇ ಹೊರತು ಪಕ್ಷಿಗಳ ಸಾವಿಗೆ ನಿಖರ ಕಾರಣವನ್ನು ಪತ್ತೆ ಹಚ್ಚುವಲ್ಲಿ ವಿಫ‌ಲರಾಗಿದ್ದಾರೆ. 

ಕೊಕ್ಕರೆ ಬೆಳ್ಳೂರಿನಲ್ಲಿ ಅಸ್ವಸ್ಥಗೊಂಡಿದ್ದ ಹಕ್ಕಿ ಗಳೇನಾದರೂ ಆಹಾರವನ್ನು ಅರಸುತ್ತಾ ಇಲ್ಲಿಗೆ ಬಂದು ಕೊನೆಗೆ ತೀವ್ರ ಅಸ್ವಸ್ಥಗೊಂಡು ಹಾರಲು ಶಕ್ತಿಯಿಲ್ಲದೆ ಕೆರೆಗೆ ಬಿದ್ದು ಸಾವನ್ನಪ್ಪಿರಬಹುದೇ ಎಂಬ ಅನುಮಾನಗಳನ್ನೂ ಪಶು ವೈದ್ಯಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಕಳೇಬರಹ ಈಗ ಪತ್ತೆ: ಈ ಪಕ್ಷಿಗಳು ಸತ್ತು ಹಲವು ದಿನಗಳಾಗಿದ್ದು, ಈಗ ಅವುಗಳ ಕಳೇಬರ ಪತ್ತೆ ಯಾಗಿದೆ. ಈ ಪ್ರದೇಶ ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರಿರುವುದರಿಂದ ಅವರು ಇದರ ಬಗ್ಗೆ ನಿಗಾವಹಿಸಬೇಕಿತ್ತು. ಪಕ್ಷಿಗಳು ಸಾವನ್ನಪ್ಪಿರುವುದು ಯಾರ ಅರಿವಿಗೂ ಬಂದಿಲ್ಲವಾದ್ದರಿಂದ ಈಗ ಅವುಗಳ ಮೃತದೇಹ ಪತ್ತೆಯಾಗಿದೆ ಎನ್ನುವುದು ಪಶು ವೈದ್ಯಾಧಿಕಾರಿಗಳು ಹೇಳುವ ಮಾತು. 

ಈಗ ಎರಡು ಪೆಲಿಕಾನ್‌ಗಳು ಅಸ್ವಸ್ಥಗೊಂಡಿರುವುದಕ್ಕೆ ಕಾರಣ ತಿಳಿದುಬಂದಿಲ್ಲ. ಅವುಗಳನ್ನು ಸಂರಕ್ಷಣೆ ಮಾಡಿ ಆರೈಕೆ ಮಾಡಲಾಗುತ್ತಿದೆ. ಆದರೂ ಅವುಗಳು ಸೂಕ್ತವಾಗಿ ಚಿಕಿತ್ಸೆಗೆ ಸ್ಪಂದಿ ಸುತ್ತಿಲ್ಲ. ಇದುವರೆಗೆ ಅಸ್ವಸ್ಥಗೊಂಡಿರುವ ಯಾವುದೇ ಪೆಲಿಕಾನ್‌ ಹಕ್ಕಿಗಳು ಬದುಕುಳಿದಿಲ್ಲ.

ನೀರಿನ ಪರೀಕ್ಷೆ: ಕೊಕ್ಕರೆ ಬೆಳ್ಳೂರಿನಲ್ಲಿ ಪೆಲಿಕಾನ್‌ ಪಕ್ಷಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ನೀರು ಕಲುಷಿತಗೊಂಡಿರುವ ಸಂಶಯದ ಮೇರೆಗೆ ಸುತ್ತಮುತ್ತಲ ಕೆರೆಗಳಲ್ಲಿನ ನೀರು, ಶಿಂಷಾ ನದಿ ನೀರನ್ನು ಈಗಾಗಲೇ ಪರೀಕ್ಷೆಗೆ ಒಳಪಡಿಸ
ಲಾಗಿದೆ. ಆದರೆ, ನೀರು ಕಲ್ಮಶಗೊಂಡಿರುವುದು ಮಾತ್ರ ಪತ್ತೆಯಾಗಿಲ್ಲ. ಸಣ್ಣ ಪ್ರಮಾಣದ ಹಕ್ಕಿ ಜ್ವರದಿಂದಲೇ ಪಕ್ಷಿಗಳು ಸಾವನ್ನಪ್ಪಿರುವ ಬಗೆಗಿನ ಸಂಶಯವೇ ಹೆಚ್ಚಾಗಿರುವಂತೆ ಕಂಡು ಬರುತ್ತಿದೆ. 

ಇದೀಗ ಮತ್ತೆ ನೀರಿನ ಪರೀಕ್ಷೆ: ಮಾದರಹಳ್ಳಿ ಸಮೀಪದ ಸೂಳೆಕರೆ ವ್ಯಾಪ್ತಿಯಲ್ಲಿ ಪೆಲಿಕಾನ್‌ ಹಕ್ಕಿಗಳ ಸಾವು ಹೆಚ್ಚಾಗಿ ಕಂಡುಬಂದಿರುವುದು ಪಶು ವೈದ್ಯಾಧಿಕಾರಿಗಳಿಗೆ ಇನ್ನಷ್ಟು ತಲೆಬಿಸಿ ಉಂಟು ಮಾಡಿದೆ. ಶನಿವಾರ ಮದ್ದೂರು ಪಶು ವೈದ್ಯಾಧಿಕಾರಿ ಡಾ.ಹನುಮೇಗೌಡ ಹಾಗೂ ಇತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾದರಹಳ್ಳಿ ಕೆರೆ, ಸೂಳೆಕೆರೆ ಹಾಗೂ ಕಾಲುವೆಯಲ್ಲಿ ಹರಿಯುವ ನೀರನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಅದೇ ರೀತಿ ಹಕ್ಕಿಗಳ ಹಿಕ್ಕೆಯನ್ನೂ ಸಂಗ್ರಹಿಸಿ ಬೆಂಗಳೂರಿನ ಹೆಬ್ಟಾಳದಲ್ಲಿರುವ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಅಲ್ಲಿಂದ ವರದಿ ಬಂದ ನಂತರ ನಿಖರ ಕಾರಣ ತಿಳಿದುಬರ ಲಿದೆ ಎಂದು ಪಶು ವೈದ್ಯಾಧಿಕಾರಿಗಳು ಹೇಳುತ್ತಾರೆ.

ರಂಗನತಿಟ್ಟು, ಗೆಂಡೆಹೊಸಹಳ್ಳಿಯಲ್ಲಿ ಭಯವಿಲ್ಲ: ಕೊಕ್ಕರೆ ಬೆಳ್ಳೂರಿನಲ್ಲಿ ಹಕ್ಕಿಜ್ವರದ ಭೀತಿ ಮನೆ ಮಾಡಿದ್ದರೆ, ಇದೇ ವಾತಾವರಣ ರಂಗನತಿಟ್ಟು ಹಾಗೂ ಗೆಂಡೆಹೊಸಹಳ್ಳಿ ಪಕ್ಷಿಧಾಮದಲ್ಲಿ ಕಂಡು ಬರುತ್ತಿಲ್ಲ. ಅಲ್ಲಿ ಪಕ್ಷಿಗಳೆಲ್ಲವೂ ಆರೋಗ್ಯದಿಂದಿವೆ. ಕೆ.ಆರ್‌.ಪೇಟೆಯ ಕಾವೇರಿ ನೀರಾವರಿ ನಿಗಮದ ಕಚೇರಿ ಆವರಣದ ಸುತ್ತಲಿನ ಮರಗಳಲ್ಲಿ ಸಾವಿರಾರು ಪಕ್ಷಿಗಳು ನೆಲೆಸಿದ್ದರೂ ಅಲ್ಲಿಯೂ ಯಾವುದೇ ಭೀತಿ ಕಂಡು ಬಂದಿರಲಿಲ್ಲ. ಪೆಲಿಕಾನ್‌ ಹಕ್ಕಿಗಳ ಸಾವು ಕೊಕ್ಕರೆ ಬೆಳ್ಳೂರು ಹಾಗೂ ಸುತ್ತ ಮುತ್ತಲ ಪ್ರದೇಶಕ್ಕಷ್ಟೇ ಸೀಮಿತವಾಗಿರುವುದು ಕುತೂಹಲ ಕೆರಳಿಸುತ್ತಿದೆ.

ಮುಂಜಾಗ್ರತಾ ಕ್ರಮ: ಈಗಾಗಲೇ ಹಕ್ಕಿಜ್ವರದ ಭೀತಿ ಇರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ ಎಲ್ಲಾ ತಾಲೂಕಿನ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ತಾಲೂಕು ಮಟ್ಟದಲ್ಲೂ ಸಭೆಗಳು ನಡೆದು ಪೌಲಿಫಾರಂ ಮಾಲಿಕರಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಮಂಡ್ಯ ಮಂಜುನಾಥ್‌/ಅಣ್ಣೂರು ಸತೀಶ್‌

ಟಾಪ್ ನ್ಯೂಸ್

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿCongress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

sumalatha

LS polls: ಇಂದು ಸುಮಲತಾ ಬಿಜೆಪಿಗೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.