ಅಘೋಷಿತ ಬಂದ್, ಬಿಗಿ ಬಂದೋಬಸ್ತ್
Team Udayavani, Nov 26, 2018, 6:00 AM IST
ಮಂಡ್ಯ: ಅಂಬರೀಶ್ ಸಾವಿನ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಾದ್ಯಂತ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದ್ದು, ವರ್ತಕರು ಭಾನುವಾರ ಸ್ವಯಂಪ್ರೇರಿತರಾಗಿ ಅಂಗಡಿ ಬಾಗಿಲು ಮುಚ್ಚಿದ್ದರು.
ಜತೆಗೆ, ನೆಚ್ಚಿನ ನಾಯಕನ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ಕರೆ ತರುವಂತೆ, ಸ್ವಗ್ರಾಮ ದೊಡ್ಡರಸಿನಕೆರೆಯಲ್ಲಿ ಅಂತ್ಯಕ್ರಿಯೆ ನಡೆಸುವಂತೆ ಅಭಿಮಾನಿಗಳು ಅಲ್ಲಲ್ಲಿ ರಸ್ತೆ ತಡೆ ನಡೆಸಿದರು. ಚಿತ್ರಮಂದಿರಗಳಲ್ಲಿ ಪ್ರದರ್ಶನ ರದ್ದು ಪಡಿಸಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ವಿರಳವಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
ಅಂಬರೀಶ್ ಪಾರ್ಥಿವ ಶರೀರದ ದರ್ಶನಕ್ಕಾಗಿ ಜಿಲ್ಲೆಯ ಜನರನ್ನು ಕರೆದೊಯ್ಯಲು ಬೆಂಗಳೂರಿಗೆ ಸಾರಿಗೆ ಬಸ್ಗಳನ್ನು ಬಿಡಲಾಗಿತ್ತು. ಬಹುತೇಕ ಖಾಸಗಿ ಬಸ್ಗಳು ಸಂಚಾರವನ್ನು ಸ್ಥಗಿತಗೊಳಿಸಿದ್ದವು. ಇದರ ಪರಿಣಾಮ ಬಸ್ಗಳ ಕೊರತೆಯಿಂದ ಪ್ರಯಾಣಿಕರು ದೂರದ ಊರುಗಳಿಗೆ ತೆರಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಈ ಮಧ್ಯೆ, ಅಂಬರೀಶ್ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತರುವಂತೆ ಒತ್ತಾಯಿಸಿ ಅಭಿಮಾನಿಗಳು ಮಂಡ್ಯ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು