Udayavni Special

ಮೂರು ಪುರಸಭೆಗಳಿಗೆ ನಾಡಿದ್ದು ಮತದಾನ

ಪ್ರತಿ ಮತಕೇಂದ್ರಕ್ಕೆ ಅಧ್ಯಕ್ಷಾಧಿಕಾರಿ, ಸಹಾಯಕ ಅಧ್ಯಕ್ಷಾಧಿಕಾರಿ, ಇಬ್ಬರು ಮತಗಟ್ಟೆ ಸಿಬ್ಬಂದಿ ನೇಮಕ

Team Udayavani, May 27, 2019, 9:36 AM IST

Udayavani Kannada Newspaper

ಮಂಡ್ಯ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಮಳವಳ್ಳಿ, ಶ್ರೀರಂಗಪಟ್ಟಣ ಹಾಗೂ ಕೆ.ಆರ್‌.ಪೇಟೆ ಪುರ ಸಭೆಗಳಿಗೆ ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮತ ಎಣಿಕೆ ಕಾರ್ಯ ಆಯಾ ತಾಲ್ಲೂಕು ಕೇಂದ್ರದಲ್ಲಿ ಮೇ 31ರಂದು ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ.

ಈ ಚುನಾವಣೆಯಲ್ಲಿ ಪ್ರತಿ ಮತಕೇಂದ್ರಕ್ಕೆ ಒಬ್ಬ ಅಧ್ಯಕ್ಷಾಧಿಕಾರಿ, ಒಬ್ಬ ಸಹಾಯಕ ಅಧ್ಯಕ್ಷಾಧಿಕಾರಿ ಹಾಗೂ ಇಬ್ಬರು ಮತಗಟ್ಟೆ ಸಿಬ್ಬಂದಿ ನೇಮಕ ಮಾಡಲಾಗಿದೆ. ಸದರಿ ಚುನಾವಣೆಯಲ್ಲಿ ಮತದಾರರ ಎಡಗೈ ಉಂಗುರದ ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗುವುದು.

ಒಣ ದಿನ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದ ರೀತ್ಯಾ ಚುನಾವಣೆ ನಡೆಯ ಲಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಯಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಗಡಿಯಿಂದ 3 ಕಿ.ಮೀ. ಪರಿಧಿಯಲ್ಲಿ ಮೇ 28ರಂದು ಬೆಳಗ್ಗೆ 7 ಗಂಟೆಯಿಂದ ಮೇ 29 ರಂದು ಮಧ್ಯರಾತ್ರಿಯವರೆಗೆ ಒಣ ದಿನಗಳನ್ನು ಘೋಷಿಸಲಾಗಿದೆ.

ಮತ ಎಣಿಕೆ ನಡೆಯಲಿರುವ ಮೇ 31ರಂದು ಮೂರು ಪುರಸಭೆಗಳ ವ್ಯಾಪ್ತಿಯಲ್ಲಿ ಎಲ್ಲಾ ತರಹದ ಮದ್ಯದ ಅಂಗಡಿ, ಬಾರ್‌ ರೆಸ್ಟೊರೆಂಟ್ ಕ್ಲಬ್‌ ಗಳಲ್ಲಿ ಮದ್ಯ ಮಾರಾಟ ವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಮೇಲ್ಕಾಣಿಸಿದ ಅವಧಿಯಲ್ಲಿ ಮದ್ಯ ಮಾರಾಟ, ಹಂಚಿಕೆ, ಸಾಗಾಣಿಕೆ ಮತ್ತು ಶೇಖರಣೆಯನ್ನು ನಿಷೇಧಿಸಿ ಪಾನ ನಿರೋಧ (ಒಣ) ದಿನವೆಂದು ಘೋಷಿಸಲಾಗಿದೆ.

ಸಭೆ-ಸಮಾರಂಭ ನಿಷೇಧ: ಕರ್ನಾಟಕ ಪೌರ ನಿಗಮಗಳ ಅಧಿನಿಯಮ 1976 ರ ಪ್ರಕರಣ 41 ರಂತೆ ಹಾಗೂ ರಾಜ್ಯ ಚುನಾ ವಣಾ ಆಯೋಗದ ಮೇ 15ರ ಆದೇಶದ ರೀತ್ಯಾ ಚುನಾವಣೆ ನಡೆಯಲಿರುವ ಮೇಲ್ಕಂಡ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮತದಾನದ ದಿನಾಂಕದಂದು ಮತದಾನ ಪ್ರಾರಂಭವಾಗುವ ಮುಂಚಿನ 48 ಗಂಟೆಯೊಳಗೆ ಅಂದರೆ ಮೇ 27ರ ಬೆಳಗ್ಗೆ 7 ಗಂಟೆಯೊಳಗೆ ಬಹಿರಂಗ ಪ್ರಚಾರ ನಿಲ್ಲಿಸಲು ಆದೇಶಿಸಲಾಗಿದೆ. ಯಾವುದೇ ವ್ಯಕ್ತಿಯು ಮತದಾನ ನಡೆಯುವ ದಿನದಂದು ಆ ಮತ ಕೇಂದ್ರದೊಳಗೆ ಅಥವಾ ಅಲ್ಲಿಂದ ನೂರು ಗಜದೊಳಗಿನ ಸಾರ್ವಜನಿಕ ಅಥವಾ ಖಾಸಗಿ ಸ್ಥಳದಲ್ಲಿ ಮತ ಪ್ರಚಾರ ನಡೆಸುವಂತಿಲ್ಲ. ಯಾವುದೇ ನಿರ್ದಿಷ್ಟ ಅಭ್ಯರ್ಥಿಗೆ ಮತ ನೀಡದಿರುವಂತೆ ಮತದಾರರ ಮನವೊಲಿ ಸುವುದು, ಚುನಾವಣೆಗೆ ಸಂಬಂಧಪಟ್ಟ ಯಾವುದೇ ಸೂಚನೆ ಅಥವಾ ಚಿಹ್ನೆಯನ್ನು (ಸರ್ಕಾರಿ ನೋಟೀಸನ್ನು ಹೊರತುಪಡಿಸಿ) ಪ್ರದರ್ಶಿಸುವಂತಿಲ್ಲ. ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡನೆಗೆ ಒಳಗಾಗಬೇ ಕಾಗುತ್ತದೆ ಎಂದು ಎಚ್ಚರಿಸಲಾಗಿದೆ.

ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಬೇಕಿರುವುದರಿಂದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಬೆಂಬಲಕ್ಕೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಹೊರಗಿನಿಂದ ಚುನಾವಣಾ ಪ್ರಚಾರಕ್ಕಾಗಿ ತಾರಾ ಪ್ರಚಾರಕರು ಮತ್ತು ಇತರೆ ವ್ಯಕ್ತಿಗಳು ಆಗಮಿಸಿದ್ದರೆ ಅಂತಹವರು ಮೇ 27ರ ಬೆಳಗ್ಗೆ 7 ಗಂಟೆಯೊಳಗೆ ಚುನಾವಣೆ ನಡೆಯುತ್ತಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯನ್ನು ಕಡ್ಡಾಯವಾಗಿ ಬಿಡುವಂತೆ ಸೂಚಿಸಲಾಗಿದೆ.

ಸಂತೆ ಜಾತ್ರೆ, ಉತ್ಸವ ನಿಷೇಧ: ಚುನಾವಣೆ ನಡೆಯುವ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಮೇ 29ರಂದು ನಡೆಯುವ ಎಲ್ಲಾ ಸಂತೆ, ಜಾತ್ರೆ ಹಾಗೂ ಉತ್ಸವಗಳನ್ನು ನಿಷೇಧಿಸಿದೆ.

ಮತ ಚಲಾಯಿಸಲು ಗುರುತಿನ ಚೀಟಿ: ಮತದಾರರು ಮತದಾನ ಮಾಡಲು ಮತಗಟ್ಟೆಗೆ ತೆರಳಿದಾಗ ಭಾರತ ಚುನಾವಣಾ ಆಯೋಗ ನೀಡಿರುವ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿಯನ್ನು ಗುರುತಿಗಾಗಿ ಹಾಜರು ಪಡಿಸುವುದು ಅಥವಾ ಅದರ ಬದಲು ಆಧಾರ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌, ಪಾಸ್‌ಪೋರ್ಟ್‌, ಪಡಿತರ ಚೀಟಿ ಸೇರಿದಂತೆ 22 ದಾಖಲೆಗಳು ಹಾಗೂ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿ ನೀಡಲಾಗಿರುವ ದಾಖಲೆಯನ್ನು ಆ ಕುಟುಂಬದ ಇನ್ನಿತರ ಸದಸ್ಯರ ಗುರುತಿಗಾಗಿ ಬಳಸಬಹುದು.

ಟಾಪ್ ನ್ಯೂಸ್

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಉ.ಪ್ರ.ದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಿಂಧು

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಿಂಧು

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ಫಸಲ್‌ ಬಿಮಾ ಯೋಜನೆ ಅನುಷ್ಠಾನ

4 feet of KRS filling

ಕೆಆರ್‌ಎಸ್‌ ಭರ್ತಿಗೆ 4 ಅಡಿ ಬಾಕಿ

Untitled-1

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ವಾಹನ ಢಿಕ್ಕಿ: ಯುವಕ ಸಾವು

madya news

ಪ್ರವಾಸಿ ತಾಣಗಳಿಗೆ ಹರಿದು ಬಂದ ಜನಸಾಗರ

ಸರಕಾರಿ ಆಸ್ತಿ ಉಳಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಆರಂಭ

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಆರಂಭ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭ: ವಿದ್ಯಾರ್ಥಿಗಳ ಸಂಭ್ರಮ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭ: ವಿದ್ಯಾರ್ಥಿಗಳ ಸಂಭ್ರಮ

ಹೆದ್ದಾರಿಯಿಂದ ನಗರಕ್ಕೆ ಪ್ರವೇಶ: ಸಮಿತಿ ರಚನೆ

ಹೆದ್ದಾರಿಯಿಂದ ನಗರಕ್ಕೆ ಪ್ರವೇಶ: ಸಮಿತಿ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.