ವೇತನ ವಿಳಂಬ: ಮಹಿಳಾ ನೌಕರರ ಧರಣಿ

ಸರ್ಕಾರಿ ಆಸ್ಪತ್ರೆ ಸ್ವಚ್ಛತೆಗೆ ಗುತ್ತಿಗೆ ಪಡೆದಿರುವ ಕಂಪನಿ ವಿರುದ್ಧ ಆಕ್ರೋಶ

Team Udayavani, Jun 6, 2019, 3:49 PM IST

ಪಾಂಡವಪುರದ ಸಾರ್ವಜನಿಕ ಆಸ್ಪತ್ರೆಯ ನಾನ್‌ ಕ್ಲಿನಿಕ್‌ ನೌಕರರು ಸಂಬಳಕ್ಕಾಗಿ ಆಸ್ಪತ್ರೆ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

ಪಾಂಡವಪುರ: ಸಂಬಳ ನೀಡದೆ ಬೇಜವಾಬ್ದಾರಿತನ ಪ್ರದರ್ಶಿಸುತ್ತಿರುವ ಆಸ್ಪತ್ರೆ ಮೇಲ್ವಿಚಾರಕಿ ಶುಭಾ ಹಾಗೂ ಗುತ್ತಿಗೆದಾರರ ವಿರುದ್ಧ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ನಾನ್‌ ಕ್ಲಿನಿಕ್‌ ನೌಕರರು ಪ್ರತಿಭಟನೆ ನಡೆಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಆಸ್ಪತ್ರೆಯ ನಾನ್‌ ಕ್ಲಿನಿಕ್‌ ನೌಕರರು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಸರ್ಕಾರದಿಂದ ಗುತ್ತಿಗೆ ಪಡೆದುಕೊಂಡಿರುವ ಸ್ಪಟಿಕ ಕಂಪನಿಯವರು ಕಳೆದ 7 ತಿಂಗಳಿನಿಂದ ಸಂಬಳ ನೀಡಿಲ್ಲ. ಅದನ್ನು ಪ್ರಶ್ನಿಸಲು ಹೋದರೆ ಈ ತಿಂಗಳು, ಮುಂದಿನ ತಿಂಗಳು ಎಂದು ಸಬೂಬು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

ವೇತನ ನೀಡದಿದ್ದರೆ ಸ್ವಚ್ಛ ಮಾಡಲ್ಲ: ನಾನ್‌ ಕ್ಲಿನಿಕ್‌ ನೌಕರರು ಸಂಬಳವನ್ನೇ ನಂಬಿಕೊಂಡು ಜೀವನ ಮಾಡುತ್ತಿದ್ದೇವೆ. ಸಂಬಳದಿಂದಲೇ ಮನೆ ಸಂಸಾರ, ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಇಡಿ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ನಾವು ಮಾಡಿರುವ ಕೆಲಸಕ್ಕೆ ಸಂಬಳ ಕೇಳಿದರೆ ಗುತ್ತಿಗೆದಾರ ವಾಸು ಸರ್ಕಾರದಲ್ಲಿ ಅನುದಾನದ ಕೊರತೆ ಇದೆ‌. ಹಾಗಾಗಿ ಇನ್ನೂ ಹಣ ಬಂದಿಲ್ಲ. ಆದ್ದರಿಂದ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ. ಮುಂದಿನ ತಿಂಗಳು ಕೊಡಿಸುತ್ತೇವೆ ಎಂದು ಹರಿಕೆ ಉತ್ತರ ನೀಡುತ್ತಾರೆ. ಈ ಬಗ್ಗೆ ಆಸ್ಪತ್ರೆಯ ಮೇಲಧಿಕಾರಿಗಳು ಕೇಳಿದರೆ ಅವರೂ ಕೂಡ ನಮಗೆ ಸ್ಪಂದಿಸುತ್ತಿಲ್ಲ. ಸಂಬಳ ನೀಡುವವರಿಗೂ ಆಸ್ಪತ್ರೆಯಲ್ಲಿ ಯಾವುದೇ ಸ್ವಚ್ಛತೆ ಕೆಲಸ ಮಾಡುವುದಿಲ್ಲ ಎಂದು ಎಚ್ಚರಿಸಿದರು.

ಮೇಲ್ವಿಚಾರಕರ ನಿರ್ಲಕ್ಷ್ಯ: ಸಂಬಳದ ಬಗ್ಗೆ ಕೇಳಿದರೆ ಮೇಲ್ವಿಚಾರಕಿ ಶುಭಾ ಅವರು ನೌಕರರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ. ನಿಮ್ಮ ಸಂಬಳ ನೀಡಲು ನಾನು ನನ್ನ ಆಸ್ತಿ ಮಾರಾಟ ಮಾಡಿಕೊಡ್ಲಾ? ಕೆಲಸ ಮಾಡಿದ್ರೆ ಮಾಡಿ ಇಲ್ಲ ಅಂದ್ರೆ ಬಿಟ್ಟು ಹೋಗಿ ಎಂದು ಉಡಾಫೆಯಾಗಿ ಮಾತನಾಡುತ್ತಾರೆ. ನಮ್ಮ ಕೆಲಸಕ್ಕೆ ಪಡೆಯುವ ಸಂಬಳಕ್ಕೂ ನಾವು ಶುಭಾ ಅವರಿಗೆ ಲಂಚ ಕೊಡಬೇಕಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಆಸ್ಪತ್ರೆಯ ನಾನ್‌ ಕ್ಲಿನಿಕ್‌ ನೌಕರರಾದ ರತ್ನಮ್ಮ, ರಾಜಮ್ಮ, ಮಂಗಳಮ್ಮ, ಸಗಾಯಿಮೇರಿ, ಸರೋಜ, ಎಲಿಜಬತ್‌ ರಾಣಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ತಾಪಂ ಉಪಾಧ್ಯಕ್ಷೆ ಭೇಟಿ: ಪ್ರತಿಭಟನಾ ಸ್ಥಳಕ್ಕೆ ತಾಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ ರಂಗಸ್ವಾಮಿ ಭೇಟಿ ನೀಡಿ ನೌಕರರ ಸಮಸ್ಯೆ ಆಲಿಸಿದ ಅವರು, ನೌಕರರಿಂದ ದೂರುಗಳನ್ನು ಪಡೆದು ಗುತ್ತಿಗೆ ಪಡೆದ ಕಂಪನಿ ಹಾಗೂ ಮೇಲ್ವಿಚಾರಕಿ ಶುಭಾ ಅವರಿಗೆ ದೂರವಾಣಿ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ನಾನ್‌ ಕ್ಲಿನಿಕ್‌ ನೌಕರರ ಪ್ರತಿಭಟನೆಗೆ ಬಿಜೆಪಿ ಮುಖಂಡ ನವೀನ್‌ಕುಮಾರ್‌ ಸಾಥ್‌ ನೀಡಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಕೆ.ಆರ್‌.ಪೇಟೆ: ತಾಲೂಕಿನ ಹೊಸಹೊಳಲು ಮೇಲ್ಗಾಲುವೆ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಹೇಮಾವತಿ ನೀರಾವರಿ ಅಧಿಕಾರಿಗಳು ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ...

  • ಮಂಡ್ಯ: ಇನ್ನು ಮುಂದೆ ಸರ್ವರ್‌ ಸಮಸ್ಯೆಯಾದರೆ ಪಡಿತರ ಚೀಟಿದಾರರು ಪಡಿತರ ಪದಾರ್ಥಗಳು ಸಿಗುವುದಿಲ್ಲವೆಂಬ ಆತಂಕಪಡಬೇಕಿಲ್ಲ. ಜಿಲ್ಲಾಧಿಕಾರಿಗಳ ಮೌಖೀಕ ಸೂಚನೆಯಂತೆ...

  • ಶ್ರೀರಂಗಪಟ್ಟಣ: ಪಟ್ಟಣದ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿರುವ ಅವ್ಯವಸ್ಥೆಗಳ ಬಗ್ಗೆ ವಿದ್ಯಾರ್ಥಿಗಳ ಪೋಷಕರು ವಾಟ್ಸ್‌ ಆಪ್‌ನಲ್ಲಿ ಸಮಸ್ಯೆಗಳ...

  • ಮಂಡ್ಯ: ಸಾರ್ವಜನಿಕ ರಸ್ತೆ ಅತಿಕ್ರಮಿಸಿದ್ದಲ್ಲದೆ, ಪ್ರಶ್ನಿಸಿದ್ದಕ್ಕೆ ಜಾತಿನಿಂದನೆ ಪ್ರಕರಣ ದಾಖಲು ಮಾಡುವುದಾಗಿ ಬೆದರಿಕೆ ಹಾಕಿರುವವರ ವಿರುದ್ಧ ಕ್ರಮಕ್ಕೆ...

  • ಮದ್ದೂರು: ಕೇಂದ್ರ -ರಾಜ್ಯ ಸರ್ಕಾರಗಳು ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಕ್ರಮ ವಹಿಸಿ ನೌಕರರ ಹಿತ ಕಾಯಬೇಕೆಂದು ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ...

ಹೊಸ ಸೇರ್ಪಡೆ