ಬೀಳುವ ಹಂತದಲ್ಲಿ ಸ್ವಾಗತ ಕಮಾನು

ಪ್ರವಾಸಿಗರ ಅನುಕೂಲಕ್ಕಾಗಿ ನಿರ್ಮಿಸಿರುವ ಮಾರ್ಗಸೂಚಿ ಫ‌ಲಕ

Team Udayavani, Aug 23, 2019, 3:18 PM IST

mandya-tdy-1

ಬೀಳುವ ಸ್ಥಿತಿಯಲ್ಲಿ ಪ್ರವಾಸಿ ತಾಣಗಳ ಮಾರ್ಗ ಸೂಚಿಸುವ ಕಬ್ಬಿಣದ ಕಮಾನು ಗೇಟು.

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ಪ್ರಸಿದ್ಧ ಪ್ರವಾಸಿ ಕೇಂದ್ರ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ವಿವಿಧೆಡೆಗಳಿಂದ ಬರುವ ಪ್ರವಾಸಿಗರ ಅನುಕೂಲಕ್ಕೆ ಶ್ರೀರಂಗಪಟ್ಟಣದಲ್ಲಿ ಕೆಲ ಪ್ರವಾಸಿ ತಾಣಗಳ ಸ್ವಾಗತ ಕಮಾನುಗಳನ್ನು ನಿರ್ಮಿಸಲಾಗಿತ್ತು. ಬಹುತೇಕ ಸ್ವಾಗತ ಕಮಾನುಗಳು ನಿರ್ವಹಣೆ ಕೊರತೆಯಿಂದ ಕುಸಿದು ಬೀಳುವ ಹಂತದಲ್ಲಿವೆ.

ಮೈಸೂರು – ಬೆಂಗಳೂರು ಹೆದ್ದಾರಿಗೆ ಹೊಂದಿಕೊಂಡಿರುವ ಶ್ರೀರಂಗಪಟ್ಟಣದ ಸುತ್ತಲೂ ಕಾವೇರಿ ನದಿ ಸುತ್ತಲೂ ಹರಿಯುವುದರಿಂದ ಇದೊಂದು ದ್ವೀಪವೆಂದೇ ಹೇಳಬಹುದು. ಪ್ರತಿದಿನ ದೇಶ ವಿದೇಶಗಳಿಂದ ಸಹಸ್ರಾರು ಪ್ರವಾಸಿಗರು ಆಗಮಿಸುತ್ತಾರೆ.

ಪ್ರವಾಸಿಗರ ಅನುಕೂಲಕ್ಕೆಂದು ಕಳೆದ 15 ವರ್ಷಗಳ ಹಿಂದೆ ಆಯಾ ಪ್ರವಾಸಿ ತಾಣಗಳ ರಸ್ತೆ ಸಮೀಪ ಪ್ರವಾಸೋದ್ಯಮ ಹಾಗೂ ಪುರಸಭೆ ಕಬ್ಬಿಣದ ಸ್ವಾಗತ ಕಮಾನುಗಳನ್ನು ನಿರ್ಮಿಸಿ ಪ್ರವಾಸಿ ತಾಣಗಳಿಗೆ ಹೋಗುವ ಮಾರ್ಗ ಸೂಚನೆಗಳ ಹೆಸರುಗಳನ್ನೂ ಬರೆಯಲಾಗಿತ್ತು.

ಯಾವ್ಯಾವ ಫ‌ಲಕಗಳು: ಮೈಸೂರು – ಬೆಂಗಳೂರು ಹೆದ್ದಾರಿಯ ಕಿರಂಗೂರು ವೃತ್ತ, ಪಟ್ಟಣದ ಕೋಟೆ ಬಾಗಿಲು ವೃತ್ತ, ಗಂಜಾಂ ರಸ್ತೆ, ಪಿಎಂಸಿ ಗೇಟ್‌ನ ಆನೆಕೋಟೆ ರಸ್ತೆ ಹಾಗೂ ಪಶ್ಚಿಮವಾಹಿನಿ ಬಳಿ ಮಾರ್ಗ ಸೂಚಿ ಫ‌ಲಕಗಳು ಹಾಗೂ ಸ್ವಾಗತ ಕಮಾನುಗಳನ್ನು ನಿರ್ಮಿಸಲಾಗಿತ್ತು.

ಕೋಟೆ ಬಾಗಿಲ ವೃತ್ತದಲ್ಲಿ ಕಳೆದ 5 ವರ್ಷಗಳ ಹಿಂದ ತುಕ್ಕು ಹಿಡಿದ್ದಿದ್ದ ಕಂಬಗಳು ಗಾಳಿ, ಮಳೆಗೆ ನೆಲಕ್ಕುರುಳಿವೆ. ಉಳಿದಿರುವ ಕಮಾನು ಗೇಟುಗಳು ಅಧಿಕಾರಿಗಳ ನಿರ್ವಹಣೆ ಕೊರತೆಯಿಂದ ಶಿಥಿಲ ಗೊಂಡು ಯಾವುದೇ ಸಂದರ್ಭದಲ್ಲಾದರೂ ಬೀಳುವ ಹಂತ ತಲುಪಿವೆ.

ಅಧಿಕಾರಿಗಳ ನಿರ್ಲಕ್ಷ್ಯ: ರಸ್ತೆಯ ಎರಡೂ ಬದಿಯಲ್ಲಿ ಕಬ್ಬಿಣದ ಕಮಾನುಗಳನ್ನು ನೆಟ್ಟು ನಿರ್ಮಿಸಲಾಗಿತ್ತು. ಈಗ ಈ ಕಬ್ಬಿಣದ ಕಂಬಗಳು ತುಕ್ಕು ಹಿಡಿದು ಯಾವ ಸಂದರ್ಭದಲ್ಲಾದರೂ ಮುರಿದು ಬೀಳುವ ಅಪಾಯದ ಅಂಚಿನಲ್ಲಿವೆ. ಆದರೂ, ಪ್ರವಾಸೋದ್ಯಮ ಹಾಗೂ ಪುರಸಭೆ ಗಮನಹರಿಸುತ್ತಿಲ್ಲ.

ಈಗಾಗಲೇ ಪುರಸಭೆಯ ಅಧಿಕಾರಿಗಳಿಗೆ ಹಲವಾರು ಬಾರಿ ಪ್ರಗತಿಪರ ಸಂಘಟನೆಗಳ ಮುಖಂಡರು ದೂರು ನೀಡಿದ್ದರು ಅಧಿಕಾರಿಗಳು ಕಂಡೂ ಕಾಣದಂತೆ ಜಾಣ ಕುರುಡು ಪ್ರದರ್ಶಿಸಿ ನಿರ್ಲಕ್ಷಿಸುತ್ತಿದ್ದಾರೆ.

ಬೀಳುವ ಹಂತದಲ್ಲಿ: ಪ್ರತಿನಿತ್ಯ ಇದೇ ರಸ್ತೆಯಲ್ಲಿ ಸಾವಿರಾರು ಪ್ರವಾಸಿಗರು ಇಲ್ಲಿನ ಬೇಸಿಗೆ ಅರಮನೆ, ಗುಂಬಸ್‌, ಶ್ರೀನಿಮಿಷಾಂಬ ದೇವಾಲಯ, ಗೋಸಾಯಿ ಘಾಟ್ ಹಾಗೂ ಸಂಗಮಕ್ಕೆ ಹೋಗಬೇಕಿದ್ದು, ಇದೀಗ ಕಮಾನು ಗೇಟಿರುವ ಬಳಿಯಲ್ಲಿ ಆಟೋ ನಿಲ್ದಾಣಗಳಿವೆ.

ಆಟೋ ಚಾಲಕರು ಪ್ರಯಾಣಿಕರು ಆ ಸ್ಥಳದಲ್ಲೇ ಯಾವಾಗಲು ಇರುವುದರಿಂದ ಜನನಿಬಿಡದ ಪ್ರದೇಶವಾಗಿದೆ. ಅಕಸ್ಮಾತ್‌ ತುಕ್ಕು ಹಿಡಿದಿರುವ ಕಂಬಗಳು ಗಾಳಿ ಮಳೆಗೆ ಯಾವಾಗ ಬೇಕಾದರೂ ಬೀಳಬಹುದು. ಈಗಲಾದರೂ ಪುರಸಭೆ, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.