ಜೆಡಿಎಸ್‌ ಶಾಸಕರಿಗೆ ಶಹಬ್ಟಾಸ್‌ಗಿರಿಯೋ? ತಲೆದಂಡವೋ?

ತುದಿಗಾಲಲ್ಲಿ ನಿಲ್ಲಿಸಿರುವ ಮಂಡ್ಯ ಕ್ಷೇತ್ರದ ಫ‌ಲಿತಾಂಶ • ಜೆಡಿಎಸ್‌ ಶಕ್ತಿಕೇಂದ್ರದೊಳಗೆ ಶಾಸಕರಿಗೆ ಅಗ್ನಿಪರೀಕ್ಷೆ

Team Udayavani, May 20, 2019, 1:28 PM IST

mandya-tdy-1

ಮಂಡ್ಯ: ಇಡೀ ರಾಜ್ಯದಲ್ಲೇ ಅತ್ಯಂತ ಪ್ರತಿಷ್ಠಿತ ಕ್ಷೇತ್ರವೆಂದು ಬಿಂಬಿತವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಫ‌ಲಿತಾಂಶ ಜಿಲ್ಲೆಯ ಜೆಡಿಎಸ್‌ ನಾಯಕರನ್ನು ಅಗ್ನಿಪರೀಕ್ಷೆಗೆ ಗುರಿಪಡಿಸಿದೆ. ಜೆಡಿಎಸ್‌ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ವರಿಷ್ಠರ ಶಹಬ್ಟಾಸ್‌ಗಿರಿಯೊಂದಿಗೆ ಗೆಲುವಿನ ರೂವಾರಿಗಳಾಗಬಹುದು. ಒಮ್ಮೆ ಸೋತರೆ ತಲೆದಂಡದ ಭೀತಿ ಎದುರಾಗಲಿದೆ.

ಫ‌ಲಿತಾಂಶಕ್ಕೆ ಎದುರು ನೋಡುತ್ತಿರುವ ಜನ: ಹೈವೋಲ್ಟಾಜ್ ಕ್ಷೇತ್ರವಾಗಿರುವ ಮಂಡ್ಯ ಲೋಕಸಭಾ ಕಣ ಚುನಾವಣಾ ಆರಂಭದಿಂದಲೂ ರಾಜಕೀಯ ಕಾವನ್ನು ಕಾಯ್ದುಕೊಂಡೇ ಬಂದಿದೆ. ಸಮ್ಮಿಶ್ರ ಸರ್ಕಾರದ ಉಳಿವು ಸಕ್ಕರೆ ನಾಡಿನ ಫ‌ಲಿತಾಂಶದ ಮೇಲೆ ಅವಲಂಬಿತವಾಗಿರುವಂತೆ ಬಿಂಬಿಸಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಮಂಡ್ಯ ಫ‌ಲಿತಾಂಶವನ್ನು ಎಲ್ಲರೂ ತುದಿಗಾಲಲ್ಲಿ ನಿಂತು ಕುತೂಹಲದಿಂದ ಎದುರುನೋಡುತ್ತಿದ್ದಾರೆ.

ಭವಿಷ್ಯದ ದೃಷ್ಟಿಯಿಂದ ಗೆಲುವು ಅನಿವಾರ್ಯ: ಮಂಡ್ಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಅಸ್ತಿತ್ವವನ್ನು ಕಾಯ್ದುಕೊಂಡಿರುವ ಜೆಡಿಎಸ್‌ ಶಾಸಕರು ಕ್ಷೇತ್ರದ ಜೊತೆಗೆ ಸ್ಥಳೀಯ ಸಂಸ್ಥೆಗಳಲ್ಲೂ ಅಧಿಪತ್ಯ ಸಾಧಿಸಿದ್ದಾರೆ. ಜೆಡಿಎಸ್‌ ಶಕ್ತಿಕೇಂದ್ರದೊಳಗೆ ಸೋಲನ್ನು ಅರಗಿಸಿಕೊಳ್ಳುವ ಶಕ್ತಿ ಪಕ್ಷದವರಿಗಿಲ್ಲ. ಅದಕ್ಕಾಗಿ ಜೆಡಿಎಸ್‌ ಶಾಸಕರ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಪಕ್ಷದ ಗೆಲುವು ಅನಿವಾರ್ಯವಾಗಿದೆ.

ಆತಂಕ ಸೃಷ್ಟಿಸಿದ ಸಮೀಕ್ಷಾ ವರದಿಗಳು: ಲೋಕಸಭಾ ಚುನಾವಣೆಯಲ್ಲಿ ಆಗಿರುವ ಹೆಚ್ಚುವರಿ ಮತದಾನ, ಗುಪ್ತಚರ ಇಲಾಖೆ ಸಲ್ಲಿಸಿರುವ ನಾಲ್ಕು ಸಮೀಕ್ಷಾ ವರದಿಗಳು ಜೆಡಿಎಸ್‌ನವರಲ್ಲಿ ಆತಂಕ ಸೃಷ್ಟಿಸಿದೆ. ಚುನಾವಣಾ ಫ‌ಲಿತಾಂಶ ವ್ಯತಿರಿಕ್ತ ವಾಗಿ ಬಂದಲ್ಲಿ ಪರಿಸ್ಥಿತಿಯನ್ನು ಎದುರಿಸುವುದು ಹೇಗೆ, ವರಿಷ್ಠರ ಕೆಂಗಣ್ಣಿಗೆ ಗುರಿಯಾಗದಂತೆ ಪಾರಾಗುವ ಬಗೆ ಹೇಗೆ ಎಂಬ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಅದಕ್ಕಾಗಿ ಎಲ್ಲರೂ ಪಕ್ಷದ ಗೆಲುವನ್ನೇ ಧ್ಯಾನ ಮಾಡುತ್ತಿದ್ದಾರೆ.

ಚಾಣಾಕ್ಷ ನಡೆ ಪ್ರದರ್ಶಿಸಿರುವ ಕಾಂಗ್ರೆಸ್‌: ಕಾಂಗ್ರೆಸ್‌ನ ಪರಾಜಿತ ಶಾಸಕರ ಅಸ್ತಿತ್ವದ ಉಳಿವಿಗೆ ಸುಮಲತಾ ಗೆಲುವು ಅನಿವಾರ್ಯವಾಗಿದೆ. ವರ್ಚಸ್ಸನ್ನು ಕಳೆದುಕೊಂಡಿರುವ ಕ್ಷೇತ್ರದೊಳಗೆ ಮತ್ತೆ ತಮ್ಮ ಪ್ರಾಬಲ್ಯ ಸಾಧಿಸಲು ಪಕ್ಷೇತರ ಅಭ್ಯರ್ಥಿಯ ಗೆಲುವನ್ನೇ ಎದುರುನೋಡುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ಜೊತೆ ಪ್ರಚಾರದ ಅಖಾಡದಲ್ಲೆಲ್ಲೂ ಕಾಣಿಸಿಕೊಳ್ಳದೆ ಬೆಂಬಲಿಗರನ್ನಷ್ಟೇ ಮುಂದೆ ಬಿಟ್ಟು ಚುನಾವಣಾ ಚಾಣಾಕ್ಷ ನಡೆ ಪ್ರದರ್ಶಿಸಿರುವ ಕಾಂಗ್ರೆಸ್‌ ಮಾಜಿ ಶಾಸಕರು, ಸುಮಲತಾ ಗೆಲುವಿನೊಂದಿಗೆ ರಾಜಕೀಯ ಅಧಿಕಾರದ ಹೋರಾಟಕ್ಕೆ ಸನ್ನದ್ಧರಾಗುವ ಕನಸು ಕಾಣುತ್ತಿದ್ದಾರೆ.

ಮೇ 23ರಂದು ಉತ್ತರ ಸಿಗಲಿದೆ: ಅಧಿಕಾರ ವಂಚಿತರಾಗಿರುವ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರೂ ಸಹ ಸುಮಲತಾ ಗೆಲುವನ್ನೇ ಕಾತರದಿಂದ ಎದುರುನೋಡುತ್ತಿದ್ದಾರೆ. ಸರ್ಕಾರದ ನಾಮ ನಿರ್ದೇಶನ ಸೇರಿದಂತೆ ನಿಗಮ-ಮಂಡಳಿ ಅಧಿಕಾರವನ್ನೂ ಜೆಡಿಎಸ್‌ ಕಪಿಮುಷ್ಠಿಯಲ್ಲಿಟ್ಟುಕೊಂಡಿರುವುದರಿಂದ ಜೆಡಿಎಸ್‌ಗೆ ಶಾಕ್‌ ನೀಡಬೇಕಾದರೆ ಸುಮಲತಾ ಅವರನ್ನು ಕಾಂಗ್ರೆಸ್ಸಿಗರು ಪ್ರಬಲ ಅಸ್ತ್ರವಾಗಿ ಪ್ರಯೋಗಿಸಿದ್ದಾರೆ. ಅದು ಉತ್ತಮ ಪರಿಣಾಮ ಬೀರಿರುವ ಆಶಾಭಾವನೆಯಲ್ಲೂ ಕಾಂಗ್ರೆಸ್ಸಿಗರಿದ್ದಾರೆ. ಎಲ್ಲದಕ್ಕೂ ಮೇ 23ರಂದು ಉತ್ತರ ಸಿಗಲಿದೆ.

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.