ಕಾಯಂ ನೌಕರರ ವೇತನ ಶ್ರೇಣಿ ಗುತ್ತಿಗೆ ನೌಕರರಿಗೂ ನೀಡಿ

Team Udayavani, Feb 10, 2020, 4:01 PM IST

ಮಂಡ್ಯ: ಕಾಯಂ ನೌಕರರಿಗೆ ನೀಡುವ ವೇತನಶ್ರೇಣಿಯನ್ನು ಗುತ್ತಿಗೆ ನೌಕರರಿಗೂ ನೀಡುವಂತೆ ಸರ್ವೋತ್ಛ ನ್ಯಾಯಾಲಯ ಪಂಜಾಬ್‌ ಸರ್ಕಾರಕ್ಕೆ ತೀರ್ಪು ನೀಡಿರುವಂತೆ ಕರ್ನಾಟಕದಲ್ಲೂ ಜಾರಿಗೆ ತರಬೇಕು ಎಂದು ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಸಂಘದ ಮಹಾ ಮಂಡಲದ ಜಿಲ್ಲಾಧ್ಯಕ್ಷ ಬಿ.ಎಂ. ಅಪ್ಪಾಜಪ್ಪ ಒತ್ತಾಯಿಸಿದರು.

ನಗರದ ಸೇವಾಕಿರಣ ವೃದ್ಧಾಶ್ರಮ ಸಭಾಂಗಣದಲ್ಲಿ ನಡೆದ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಂಡ್ಯ ಜಿಲ್ಲಾ ಘಟಕ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರನ್ನು ಸೇವೆಯಲ್ಲಿ ಮುಂದುವರಿಸಬೇಕು. ಎಲ್ಲಾ ಇಲಾಖೆಗಳಲ್ಲಿ ಸರಿ ಸಮಾನವಾಗಿ ವೇತನ ಪಾವತಿಸಬೇಕು. ಇಎಸ್‌ಐ, ಪಿಎಫ್‌ಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲೇ ಎರಡೂವರೆ ಲಕ್ಷ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ನೌಕರರಿಗೂ ಆದ್ಯತೆ ನೀಡಬೇಕು. ರಾಜ್ಯದಲ್ಲಿ ಮೂರು ವರ್ಗದಲ್ಲಿ ನೌಕರರು ಕೆಲಸ ಮಾಡುತ್ತಿದ್ದು, ಅವರೆಲ್ಲರಿಗೂ ಕನಿಷ್ಟ ವೇತನ ನೀಡಲಾಗುತ್ತಿದೆ. ನಮ್ಮಲ್ಲಿರುವ ಹೊರ ಗುತ್ತಿಗೆ ನೌಕರರು ಒಗ್ಗಟ್ಟಿನಿಂದ ಸಂಘಟಿತರಾಗಬೇಕು. ಆಗ ಮಾತ್ರ ಹೋರಾಟಕ್ಕೆ ಅರ್ಥ ಬರುತ್ತದೆ ಎಂದು ಹೇಳಿದರು.

ಮೂರು ಹಂತಗಳಲ್ಲಿ ನೌಕರರ ಬಗ್ಗೆ ಹೋರಾಟ ಮಾಡುತ್ತಿದ್ದೇವೆ. ಹೋರಾಟ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿದ್ದು, ದಿನಗೂಲಿ ನೌಕರರು ಭಾಗವಹಿಸುತ್ತಿದ್ದಾರೆ. ಕಾವೇರಿ ನೀರಾವರಿ ನಿಗಮ, ಸಣ್ಣ ನೀರಾವರಿ, ಪಶು ಸಂಗೋಪನೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ. ರಂಗೇಗೌಡ ಅವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ರಾಮನಗರ ಜಿಲ್ಲಾಧ್ಯಕ್ಷ ಸುರೇಶ್‌ಕುಮಾರ್‌, ಮಂಡ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ. ನರಸೇಗೌಡ, ಮೈಸೂರು ಜಿಲ್ಲಾಧ್ಯಕ್ಷ ಗಂಗಾಧರ್‌, ಚಾಮರಾಜನಗರ ಜಿಲ್ಲಾಧ್ಯಕ್ಷ ಜೈಶಂಕರ್‌, ಟಾಸ್ಕ್ವರ್ಕ್‌ ನೌಕರರ ಸಂಘದ ಅಧ್ಯಕ್ಷ ಶಿವಲಿಂಗಯ್ಯ, ಕೆ.ಆರ್‌. ಪೇಟೆ ಅಧ್ಯಕ್ಷ ಕೃಷ್ಣ, ಜಿಲ್ಲಾ ಸಂಚಾಲಕ ಗ್ರಂಥಾಲಯ ಇಲಾಖೆ ಮಹ ದೇವು, ನೌಕರರ ಪ್ರತಿನಿಧಿಗಳಾದ ನಾಗೇಶ್‌, ಕೃಷ್ಣ ಮೂರ್ತಿ, ವಕೀಲ ಗುರುಪ್ರಸಾದ್‌ ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಪಾಂಡವಪುರ: ಟೊಮೆಟೋ ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದ ಕಂಪನಿ ನಿಗದಿತ ಸಮಯಕ್ಕೆ ಖರೀದಿಸಲಿಲ್ಲವೆಂಬ ಕಾರಣಕ್ಕೆ ಕೆರೆಗೆ ಟೊಮೆಟೋ ಸುರಿದು ರೈತನೊಬ್ಬ ಆಕ್ರೋಶ...

  • ಮಂಡ್ಯ: ಕೋವಿಡ್ 19 ಸೋಂಕು ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಸೇರಿದಂತೆ ಇತರೆಡೆ ಬೆಳೆದಿರುವ ದ್ರಾಕ್ಷಿ ಬೆಳೆ ಕಟಾವು ಮಾಡಿ, ಮಾರಾಟ ಮಾಡಲು...

  • ಮಂಡ್ಯ: ಜಿಲ್ಲೆಯಲ್ಲಿ 9 ಕಡೆ ಜ್ವರ ತಪಾಸಣೆ ಕೇಂದ್ರಗಳನ್ನು ಗುರುತಿಸಲಾಗಿದ್ದು, ಜ್ವರಕ್ಕೆ ಸಂಬಂಧಿಸಿದಂತೆ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ...

  • ಮಂಡ್ಯ: ರಾಜ್ಯದಲ್ಲಿ ಕೋವಿಡ್ 19 ವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನೂ ಲೆಕ್ಕಿಸದೆ ನಗರದೊಳಗೆ...

  • ನಾಗಮಂಗಲ: ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕು ತೀವ್ರವಾಗಿ ಹರಡುತ್ತಾ ಜನರನ್ನು ಆತಂಕ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ 144 ನೇ ಸೆಕ್ಷನ್‌...

ಹೊಸ ಸೇರ್ಪಡೆ