ಕಾಮಗಾರಿ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಆಕ್ರೋಶ


Team Udayavani, Feb 27, 2021, 1:58 PM IST

ಕಾಮಗಾರಿ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಆಕ್ರೋಶ

ಮದ್ದೂರು: ಸರ್ಕಾರದಿಂದ ಬಿಡುಗಡೆಗೊಂಡಿರುವ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವ ಲೋಕೋಪಯೋಗಿ (ಪಿಡಬ್ಲ್ಯುಡಿ ) ಇಲಾಖೆ ಅಧಿಕಾರಿಗಳ ಕ್ರಮ ಖಂಡಿಸಿ ಕೆಲ ಜಿಪಂ ಸದಸ್ಯರು, ಮುಖಂಡರು ಪ್ರತಿಭಟನೆ ನಡೆಸಿದರು.

ಮದ್ದೂರು ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಆಗಮಿಸಿದ ಸೋಮನಹಳ್ಳಿ ಜಿಪಂ ಸದಸ್ಯ ಬೋರಯ್ಯ, ಬೆಸಗರಹಳ್ಳಿ ಜಿಪಂ ಸದಸ್ಯ ಮರಿಹೆಗಡೆ ಹಾಗೂ ಚಿಕ್ಕಅರಸಿನಕೆರೆ ಮತ್ತುಕೆಸ್ತೂರು ಜಿಪಂ ವ್ಯಾಪ್ತಿಯ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಅಭಿವೃದ್ಧಿ ಕುಂಠಿತ: ಸಮ್ಮಿಶ್ರ ಸರ್ಕಾರದಲ್ಲಿ ಎಚ್‌ .ಡಿ. ಕುಮಾರಸ್ವಾಮಿ ಅವರುಮುಖ್ಯಮಂತ್ರಿಯಾಗಿದ್ದ ವೇಳೆ ರೇವಣ್ಣ ಅವರು41 ಮಂದಿ ಜಿಪಂ ಸದಸ್ಯರ ಪ್ರತಿ ಕ್ಷೇತ್ರಕ್ಕೆ ತಲಾ ಒಂದು ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಆದರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬಿಡುಗಡೆಯಾದ ಹಣ ಸರ್ಕಾರಕ್ಕೆ ವಾಪಸ್ಸಾಗಿ ಅಭಿವೃದ್ಧಿ ಕುಂಠಿತಗೊಳ್ಳಲು ಕಾರಣವಾಗಿದ್ದಾರೆಂದು ದೂರಿದರು.

ರಾಜಕೀಯ ಕೈವಾಡ: ಸಚಿವ ಗೋವಿಂದ ಕಾರಜೋಳ ಅವರನ್ನು ಜಿಪಂ ಸದಸ್ಯರ ನೇತೃತ್ವದತಂಡ ಭೇಟಿಯಾಗಿ ವಾಪಸ್ಸಾದ ಹಣವನ್ನು ಮತ್ತೆಇಲಾಖೆಗೆ ಕಳುಹಿಸಿದ್ದರೂ ಕೆಲ ಅಧಿಕಾರಿಗಳು 2ವರ್ಷಗಳಿಂದಲೂ ಅಭಿವೃದ್ಧಿ ಕಾರ್ಯ ಕೈಗೊಳ್ಳದೆ ನಿರ್ಲಕ್ಷ್ಯವಹಿಸಿದ್ದಾರೆ. ಇದರ ಹಿಂದೆ ರಾಜಕೀಯ ಕೈವಾಡ ಅಡಗಿದೆ ಎಂದು ಆರೋಪಿಸಿದರು.

ತಮ್ಮ ಅವಧಿ ಮುಗಿಯುವ ಹಂತದಲ್ಲಿದ್ದು ಅಷ್ಟರೊಳಗಾಗಿ ಚಾಮನಹಳ್ಳಿ, ಸೋಮನಹಳ್ಳಿ ಜಿಪಂ ಕ್ಷೇತ್ರಗಳಿಗೆ ಬಿಡುಗಡೆಯಾಗಿರುವ ತಲಾ ಒಂದು ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಕೈಗೊಳ್ಳುವಂತೆ ಒತ್ತಾಯಿಸಿದರಲ್ಲದೇ ಕೆಲಸ ಆರಂಭಿಸದಿದ್ದಲ್ಲಿ ಸಚಿವರ ಮನೆ ಎದುರು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

ಧರಣಿ ಎಚ್ಚರಿಕೆ: ಸೋಮನಹಳ್ಳಿ ಜಿಪಂ ವ್ಯಾಪ್ತಿಯ ತೈಲೂರು, ಹುಣಸೆಮರದದೊಡ್ಡಿ, ತಿಪ್ಪೂರು, ತೊಪ್ಪನಹಳ್ಳಿ, ನೀಲಕಂಠನಹಳ್ಳಿ, ಕೂಳಗೆರೆಗ್ರಾಮಗಳನ್ನು ಆಯ್ಕೆಮಾಡಿದ್ದು ಅಭಿವೃದ್ಧಿಕಾರ್ಯಗಳಿಗೆ ಅಧಿಕಾರಿಗಳು ಮುಂದಾಗದಿದ್ದಲ್ಲಿಸದಸ್ಯರ ನೇತೃತ್ವದಲ್ಲಿ ನಿರಂತರ ಧರಣಿ ಕೈಗೊಳ್ಳಲಾಗುವುದೆಂದರು.

ತರಾಟೆ: ಗ್ರಾಮಗಳಲ್ಲಿ ಕೈಗೊಳ್ಳುವ ಗುದ್ದಲಿ ಪೂಜೆ ಕಾರ್ಯಕ್ರಮದ ವೇಳೆ ಜಿಪಂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಚುನಾಯಿತ ಪ್ರತಿನಿಧಿಗಳನ್ನು ಶಿಷ್ಟಾಚಾರ ಉಲ್ಲಂಘಿಸಿ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗುತ್ತಿರುವ ಬಗ್ಗೆ ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪ್ರತಿಭಟನಾ ಸ್ಥಳಕ್ಕಾಗಮಿಸಿದ ಇಇ ಮಹದೇವಪ್ಪ ಮಾತನಾಡಿ, ಕೆಲ ಗುತ್ತಿಗೆದಾರರ ವಿಳಂಬದಿಂದಾಗಿ ಕಾಮಗಾರಿಗಳು ನನೆಗುದಿಗೆ ಬೀಳಲು ಕಾರಣವಾಗಿದೆ. ಅವರ ಜತೆ ಚರ್ಚಿಸಿ ಫೆ.27ರಂದು ತಮ್ಮಗಳ ಸಮ್ಮುಖದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಿರುವುದಾಗಿ ತಿಳಿಸಿದ ಬಳಿಕ ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆ ವೇಳೆ ಮುಖಂಡರಾದ ಹನುಮಂತೇಗೌಡ, ಮನುಕುಮಾರ್‌, ಮಾದೇಶ ಮತ್ತಿತರರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.