ಮಂಗಳೂರು: ಕೆಎಸ್ಆರ್ಟಿಸಿ ಬಸ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು
Team Udayavani, Dec 8, 2019, 1:32 PM IST
ಮಂಗಳೂರು: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ನಲ್ಲಿ ಭಾನುವಾರದಂದು ನಡೆದಿದೆ.
ಮೃತಪಟ್ಟ ಸ್ಕೂಟರ್ ಸವಾರರನ್ನು ಅಡ್ಡೂರು ನಿವಾಸಿ ಹಮೀದ್ (50) ಎಂದು ಗುರುತಿಸಲಾಗಿದೆ. ಇವರು ಅರ್ಕುಳದ ಹಾಲ್ವೊಂದರಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳಿ ವಾಪಸಾಗುತ್ತಿದ್ದಾಗ ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ ಇವರಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.