ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಹೋಗಿದ್ದು ಕಾಂಗ್ರೆಸ್ : ರಾಜನಾಥ್ ಸಿಂಗ್
Team Udayavani, Jan 27, 2020, 7:26 PM IST
ಮಂಗಳೂರು: ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಹೋಗಿದ್ದು ಕಾಂಗ್ರೆಸ್. ಬಿಜೆಪಿ ದೇಶದ ರಕ್ಷಣೆಗೆ ಕೆಲಸ ಮಾಡುತ್ತಿದೆ. ಒಂದು ದೇಶದಲ್ಲಿ ಎರಡು ಸಂವಿಧಾನ, ಎರಡು ಧ್ವಜ ಇರಬಾರದು. ಭಾರತಕ್ಕೆ ಇರುವುದು ಒಂದೇ ತ್ರಿವರ್ಣ ಧ್ವಜ. ಪೌರತ್ವ ತಿದ್ದುಪಡಿ ಕಾಯ್ದೆ ಮಹಾತ್ಮ ಗಾಂಧಿ ಕನಸಾಗಿತ್ತು. ಗಾಂಧಿ ಕನಸನ್ನು ಬಿಜೆಪಿ ಪೂರೈಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಮಂಗಳೂರಿನ ಬಂಗ್ರಕೂಳೂರಿನಲ್ಲಿ ಸೋಮವಾರ ನಡೆದ ಸಿಎಎ ಪರವಾದ ಬಿಜೆಪಿ ಜನಜಾಗೃತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ನಾವು ಪ್ರಣಾಳಿಕೆಯಲ್ಲಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ. ರಾಮಮಂದಿರ ನಿರ್ಮಾಣ, ಜಮ್ಮು ಕಾಶ್ಮೀರದ 370 ವಿಧಿ ರದ್ದತಿ ಮಾಡಿದ್ದೇವೆ. ಶೀಘ್ರವೇ ಅಯೋಧ್ಯೆಯಲ್ಲಿ ರಾಮಂದಿರ ನಿರ್ಮಿಸಲಿದ್ದೇವೆ, ನೀವು ಇನ್ನು ಪ್ರಾರ್ಥನೆ ಸಲ್ಲಿಸಬಹುದು. ಈ ಹಿಂದೆ ತಲಾಖ್ ಮೂಲಕ ಮುಸ್ಲಿಂ ಹೆಣ್ಮಕ್ಕಳು ತೊಂದರೆ ಅನುಭವಿಸುತ್ತಿದ್ದರು. ನಾವು ಅಧಿಕಾರಕ್ಕೆ ಬಂದ ನಂತರ ತ್ರಿಪಲ್ ತಲಾಖ್ ರದ್ದು ಮಾಡಿದ್ದೇವೆ ಎಂದು ಹೇಳಿದರು.
ಎನ್‌ಪಿಆರ್ ನಿಂದ ಏನು ತೊಂದರೆ ಇದೆ..? ದೇಶದ ಜನರ ಬಗ್ಗೆ ಲೆಕ್ಕ ಇಟ್ಟುಕೊಳ್ಳಬಾರದೇ..? ಎನ್‌ಆರ್‌ಸಿ ಬಗ್ಗೆ ಇವಾಗ ಏನೂ ಚರ್ಚೆಯಾಗಿಲ್ಲ. ಆದರೆ ದೇಶದ ಮುಸ್ಲಿಮರಲ್ಲಿ ಭಯ ಮೂಡಿಸಲಾಗುತ್ತಿದೆ. ಭಾರತದ ಮುಸ್ಲಿಮರಿಗೆ ಯಾರೂ ಏನೂ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಮುಸ್ಲಿಮರೇ ಕೇಂದ್ರ ಸರ್ಕಾರ ನಿಮಗೆ ರಕ್ಷಣೆ ನೀಡುತ್ತದೆ. ನಮ್ಮದು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಆಗಿದೆ. ಪೌರತ್ವ ಕಾಯ್ದೆಯಿಂದ ದೇಶದ ಜನರಿಗೆ ಏನೂ ತೊಂದರೆ ಆಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ