ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿ

ಮಕ್ಕಳ ವಿಜ್ಞಾನ ಹಬ್ಬ ಕಾರ್ಯಕ್ರಮ „ ಚಟುವಟಿಕೆ-ಪ್ರಯೋಗಗಳ ಮೂಲಕ ವಿಜ್ಞಾನ ವಿಷಯ ಬೋಧಿಸಲು ಸಲಹೆ

Team Udayavani, Dec 6, 2019, 4:00 PM IST

6-December-19

ಮಾನ್ವಿ: ಗ್ರಾಮೀಣ ಮಕ್ಕಳಿಗೆ ಮೂಲ ವಿಜ್ಞಾನ ಪರಿಚಯಿಸುವ ಮೂಲಕ ಅವರಲ್ಲಿ ವೈಜ್ಞಾನಿಕ ಮನೋಭಾವ ಬೆಳಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡ್ಯಾಳ ಹೇಳಿದರು.

ತಾಲೂಕಿನ ಕೊರವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ವಿಜ್ಞಾನ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ಶಾಲೆಗಳಲ್ಲಿ ಸರಳವಾಗಿ ಮೂಲ ವಿಜ್ಞಾನವನ್ನು ಚಟುವಟಿಕೆ ಮೂಲಕ ಬೋಧಿಸಿ ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಬೆಳೆಸಬೇಕು. ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನ ವಿಷಯ ಆಯ್ಕೆ ಮಾಡಿಕೊಳ್ಳುವುದು ತುಂಬ ವಿರಳ. ಈ ಕಾರಣಕ್ಕಾಗಿಯೇ ಇಂದು ಶಾಲೆ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಬಗ್ಗೆ ಆಸಕ್ತಿ ಮೂಡಿಸುವ ಮೂಲಕ ಅವರು ಮುಂದೆ ವಿಜ್ಞಾನ ವಿಷಯ ಅಧ್ಯಯನ ಮಾಡುವಂತೆ ಮಾಡಬೇಕಿದೆ ಎಂದರು.

ವಿಜ್ಞಾನ ವಿಷಯ ತುಂಬ ಕಠಿಣ ಎಂಬ ಅಭಿಪ್ರಾಯವನ್ನು ಮಕ್ಕಳಿಂದ ದೂರ ಮಾಡಬೇಕು. ವಿಜ್ಞಾನವು ಸರಳ ಮತ್ತು ಆಸಕ್ತಿದಾಯಕ ವಿಷಯವಾಗಿದೆ ಎಂಬ ಮನೋಭಾವನೆಯನ್ನು ಗ್ರಾಮೀಣ ಮಕ್ಕಳಲ್ಲಿ ಬೆಳೆಸಬೇಕು. ಅ ಮೂಲಕ ಮುಂದಿನ ದಿನಗಳಲ್ಲಿ ವಿಜ್ಞಾನಕ್ಕೆ ಸಂಬಂಧಿ ಸಿದ ವಿಷಯಗಳಾದ ಜೀವಶಾಸ್ತ್ರ, ಭೌತಶಾಸ್ತ್ರ, ರಸಾಯನ ಶಾಸ್ತ್ರ, ವೈದ್ಯಕೀಯ ವಿಷಯಗಳನ್ನು ಆಯ್ಕೆ ಮಾಡಿಕೊಂಡು ವಿಜ್ಞಾನ ಸಂಶೋಧನೆಯಲ್ಲಿ ಮಕ್ಕಳು ತೊಡಗಿಕೋಳ್ಳಬೇಕಾಗಿದೆ ಎಂದರು.

ವಿಜ್ಞಾನ ಹಬ್ಬದ ಅಂಗವಾಗಿ ಶಾಲೆಯಲ್ಲಿ ಬಾಟಲ್‌ ರಾಕೆಟ್‌, ತ್ರಿಡಿ ಡ್ರಾÂಗನ್‌, ತ್ರಿಡಿ ಕನ್ನಡಕ, ಸೋಡ್ಲ್ಸ್ಕೋಪ್‌ ಹಾಗೂ ನೀರಿನ ಸಂರಕ್ಷಣೆ ಪ್ರಯೋಗ, ಕೆಮಿಕಲ್‌ನಿಂದ ನೊರೆ ಹೇಗೆ ಬರುತ್ತೆ ಎಂಬ ಕುರಿತು ಹಲವು ವಿಜ್ಞಾನ ಚಟುವಟಿಕೆಗಳನ್ನು ಮಾಡಿಸಲಾಯಿತು. ಅಲ್ಲದೆ ವಿವಿಧ ವೇಷ ಧರಿಸಿದ ವಿದ್ಯಾರ್ಥಿಗಳ ಮೆರವಣಿಗೆ ಗಮನ ಸೆಳೆಯಿತು. ಕೊರವಿ ಗ್ರಾಮದಿಂದ ಶಾಲೆವರೆಗೆ ಡೊಳ್ಳು ಕುಣಿತದೊಂದಿಗೆ ಎತ್ತಿನ ಬಂಡಿಯಲ್ಲಿ ವಿದ್ಯಾರ್ಥಿಗಳ ಮೆರವಣಿಗೆ ಮಾಡಲಾಯಿತು.

ನಂತರ ಕಾರ್ಯಕ್ರಮದಲ್ಲಿ ಕ್ರೀಡಾ ವಿಭಾಗದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಗ್ರಾಮದ 12 ವಿದ್ಯಾರ್ಥಿಗಳನ್ನು ಹಾಗೂ ಸರ್ಕಾರಿ ಉದ್ಯೋಗ ಪಡೆದವರನ್ನು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಗ್ರಾಮದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತಾಪಂ ಸದಸ್ಯೆ ಅಯ್ಯಮ್ಮ, ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ವೆಂಕಟೇಶ ನಾಯಕ, ಕ್ಷೇತ್ರ ಸಮನ್ವಯ ಅಧಿಕಾರಿ, ಪ್ರಭಾಕರ, ಶಿಕ್ಷಣ ಸಂಯೋಜಕ ಯೂನೂಸ್‌, ಬಿಆರ್‌ಪಿ ಮಹೇಶ, ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ ಜಲ್ದಾರ್‌, ಶಿಕ್ಷಕರಾದ ಶ್ರೀಶೈಲಗೌಡ, ಹನುಮಂತಪ್ಪ ಭಂಡಾರಿ, ಸುರೇಶ ಕುರ್ಡಿ, ಹಂಪಣ್ಣ ಚಂಡೂರು, ಸುರೇಶ, ಬಿಆರ್‌ಸಿ ಶರಣಪ್ಪ, ನಾಗರಾಜ, ಹಂಪಮ್ಮ, ಬಸಲಿಂಗಮ್ಮ, ಮೋಹನಕುಮಾರ, ಅಶ್ವಿ‌ನಿ, ಎಂ.ಡಿ. ಜಾವೇದ ಸೇರಿ ಗ್ರಾಮಸ್ಥರಿದ್ದರು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.