ಸಾಹಿತ್ಯ ಪ್ರಜ್ಞೆಯಿಂದ ಶುದ್ಧ ನಡತೆ

„ ಮುಂಬರುವ ದಿನಗಳಲ್ಲಿ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜನೆ: ಹಿರೇಮಠ

Team Udayavani, Nov 28, 2019, 5:47 PM IST

28-November-25

ಮಾನ್ವಿ: ಮಕ್ಕಳು ಸೃಜನಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಾಹಿತ್ಯ ಪ್ರೇರೇಪಿಸುತ್ತದೆ. ಸಾಹಿತ್ಯದಿಂದ ಶುದ್ಧ ನಡತೆ, ಸುಂದರ ಬದುಕು ರೂಪಿಸಿಕೊಳ್ಳಬಹುದು ಎಂದು ಬೆಳಕು ಸಂಸ್ಥೆ ರಾಜ್ಯ ಉಪಾಧ್ಯಕ್ಷ ಎಸ್‌. ಮಹಾಂತಪ್ಪಗೌಡ ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದಿಂದ ಪಟ್ಟಣದ ಕಲ್ಮಠ ಪ್ರೌಢಶಾಲೆ ಆವರಣದಲ್ಲಿ ನಡೆದ ಸ್ವಪ್ನ ಆರ್‌.ಎ ಅವರ ಭಾವಲಹರಿ ಕವನ ಸಂಕಲನ ಅವಲೋಕನ ಹಾಗೂ ಮಕ್ಕಳ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಪ್ರಜ್ಞೆಯನ್ನು ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನ ಮಾಡಬೇಕಿದೆ. ಅತಿಯಾದ ತಂತ್ರಜ್ಞಾನದಿಂದ ಇಂದಿನ ಯುಗದಲ್ಲಿ ಮಕ್ಕಳು ಸೃಜನಾತ್ಮಕತೆ ಕಳೆದುಕೊಳ್ಳುತ್ತಿದ್ದಾರೆ. ಕಥೆ, ಕವನ, ಕವಿತೆಗಳು ಮಕ್ಕಳಿಗೆ ನೈಜ ಬದುಕನ್ನು ಕಟ್ಟಿಕೊಡುತ್ತವೆ ಎಂದರು.

ಮಕ್ಕಳ ಸಾಹಿತ್ಯ ಪರಿಷತ್‌ ಜಿಲ್ಲಾ ಅಧ್ಯಕ್ಷ ಶಂಕರದೇವರು ಹಿರೇಮಠ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿ ತಿಂಗಳು ಮಕ್ಕಳ ಸಾಹಿತ್ಯ ಪರಿಷತ್‌ ವತಿಯಿಂದ ಮಕ್ಕಳ ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದ್ದೇವೆ. ಮಕ್ಕಳಿಗೆ ವೇದಿಕೆಗಳು ಸಿಗುವುದು ಅಪರೂಪವಾಗಿದೆ. ಮಕ್ಕಳಲ್ಲಿ ಸಾಹಿತ್ಯ ಪ್ರೇಮ ಬೆಳೆಸಲು ಮುಂದಿನ ದಿನಗಳಲ್ಲಿ ಮಕ್ಕಳ ಜಿಲ್ಲಾ ಸಾಹಿತ್ಯ ಸಮ್ಮೇಳನ ಮಾಡುವ ಉದ್ದೇಶವಿದೆ. ಮಕ್ಕಳಿಗಾಗಿಯೇ ಚೆಲುವ ಚಿನ್ನಾರಿ ಎನ್ನುವ ಮಾಸ ಪತ್ರಿಕೆ ಹೊರತರಲಾಗುವುದು. ಹೀಗಾಗಿ ಇವೆಲ್ಲವನ್ನು ಮಕ್ಕಳು ಸದುಪಯೋಗಪಡಿಸಿಕೊಂಡು ಸಾಹಿತ್ಯವನ್ನು ಉಳಿಸಿ ಬೆಳೆಸಿ ನಾಡಿನ ಕೀರ್ತಿ ಹೆಚ್ಚಿಸಬೇಕು ಎಂದರು.

ಸ್ವಪ್ನ ಆರ್‌.ಎ. ಅವರ ಭಾವಲಹರಿ ಕವನ ಸಂಕಲನ ಪುಸ್ತಕ ಕುರಿತು ನಿವೃತ್ತ ಶಿಕ್ಷಕ ಹುಸೇನಪ್ಪ ಕುರ್ಡಿ ಮಾತನಾಡಿದರು. ನಂತರ ಚೆಲುವ ಚಿನ್ನಾರಿ ಮಾಸ ಪತ್ರಿಕೆಯನ್ನು ಅನಾವರಣಗೊಳಿಸಿದರು. ಹಿರಿಯ ಸಾಹಿತಿ ವೀರೇಶ ಹಾಗೂ ಕಲ್ಮಠ ಪ್ರೌಢಶಾಲೆ ಮುಖ್ಯೋಪಾಧ್ಯಯರಾದ ಪ್ರಭಯ್ಯಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷೆ ಅಂಬಮ್ಮ, ಚುಟುಕು ಸಾಹಿತ್ಯ ಪರಿಷತ್‌ನ ತಾಜುದ್ದೀನ್‌, ಯಲ್ಲಪ್ಪ ನಿಲೋಗಲ್‌, ಬೆಳಕು ಸಂಸ್ಥೆ ಜಿಲ್ಲಾ ಅಧ್ಯಕ್ಷ ನರಸಿಂಹ ವಡವಾಟಿ, ಕೃತಿ ಲೇಖಕರಾದ ಸ್ವಪ್ನ ಆರ್‌.ಎ., ಹಿರಿಯ ಸಾಹಿತಿ ಶರಣೇಗೌಡ ಯರದೊಡ್ಡಿ, ಪಕ್ಷಿ ಪ್ರೇಮಿ ಸಲ್ಲಾವುದ್ದೀನ್‌, ಗೋಪಾಲ ನಾಯಕ ಜೂಕೂರು, ಸಂಗಮೇಶ ಮುಧೋಳ ಇದ್ದರು. ಡಾ|
ಸೈಯ್ಯದ್‌ ಮುಜೀಬ್‌ ನಿರೂಪಿಸಿದರು. ಸಾಹಿತಿ ಉಮರ್‌ ಸ್ವಾಗತಿಸಿದರು. ಕುಮಾರಿ ಪ್ರಾರ್ಥಿಸಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.