ಮಸ್ಕಿ ಹಳ್ಳ ಸ್ವಚ್ಛತೆಗೆ ಗಚ್ಚಿನಮಠ ಶ್ರೀ ಸಂಕಲ್ಪ

ಶೀಘ್ರದಲ್ಲೇ ಸಂಘ-ಸಂಸ್ಥೆಗಳ ಮುಖಂಡರು-ಪುರಸಭೆ ಸದಸ್ಯರ ಸಭೆ

Team Udayavani, May 10, 2019, 3:48 PM IST

10-May-28

ಮಸ್ಕಿ: ಗಚ್ಚಿನಮಠದ ಶ್ರೀ ವರರುದ್ರಮುನಿ ಶಿವಾಚಾರ್ಯರ ನೇತೃತ್ವದಲ್ಲಿ ಮುಖಂಡರು ಹಳ್ಳಕ್ಕೆ ಭೇಟಿ ನೀಡಿ ಸ್ವಚ್ಛತೆ ಕೈಗೊಳ್ಳುವ ಕುರಿತು ಪರಿಶೀಲಿಸಿದರು.

ಮಸ್ಕಿ: ಪಟ್ಟಣದಲ್ಲಿ ಹರಿದಿರುವ ಐತಿಹಾಸಿಕ ಪ್ರಸಿದ್ಧ ಹಳ್ಳದ ಸ್ವಚ್ಛತೆಗೆ ಸಂಕಲ್ಪ ಮಾಡಿದ ಗಚ್ಚಿನಮಠದ ಶ್ರೀ ವರರುದ್ರಮುನಿ ಶಿವಾಚಾರ್ಯರು ಗುರುವಾರ ಬೆಳಗ್ಗೆ ಹಳ್ಳಕ್ಕೆ ಭೇಟಿ ನೀಡಿ ಅಲ್ಲಿನ ಪರಿಸರ ಪರಿಶೀಲಿಸಿದರು.

ಹಳದ ಸ್ವಚ್ಛತೆಗಾಗಿ ಶೀಘ್ರದಲ್ಲಿ ಸ್ಥಳೀಯ ಮುಖಂಡರು, ಸಂಘ-ಸಂಸ್ಥೆ ಪದಾಧಿಕಾರಿಗಳು ಪುರಸಭೆ ಸದಸ್ಯರ ಸಭೆ ಕರೆಯಲಾಗುವುದು ಎಂದು ಶ್ರೀಗಳು ತಿಳಿಸಿದರು.

ಹಳ್ಳದಲ್ಲಿ ಹಾಪು, ಜಾಲಿಗಿಡಗಳು ಅಪಾರ ಪ್ರಮಾಣದಲ್ಲಿ ಬೆಳೆದು ನಿಂತಿವೆ. ಪಟ್ಟಣದಲ್ಲಿನ ಬಹುತೇಕ ಚರಂಡಿ ನೀರು ಹಳ್ಳ ಸೇರುತ್ತಿದೆ. ಇದರಿಂದ ಅಲ್ಲಿನ ಪರಿಸರ ಹಾಳಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಮುನ್ಸೂಚನೆ ಇದೆ. ಆದ್ದರಿಂದ ಶ್ರಮದಾನದ ಮೂಲಕ ಹಳ್ಳದ ಸ್ವಚ್ಛತಾ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ. ಶೀಘ್ರದಲ್ಲಿ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಪುರಸಭೆ ಸದಸ್ಯರ ಸಭೆ ನಡೆಸಿ ಹಳ್ಳದ ಸ್ವಚ್ಛತೆ ಕುರಿತು ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಹೇಳಿದರು.

ಹಳ್ಳದ ದಂಡೆ ಮೇಲೆ ಬರುವ ಗ್ರಾಮಗಳ ಜನತೆ, ಮುಖಂಡರ ಮನವೊಲಿಸಿ ಆಯಾ ಗ್ರಾಮಗಳಲ್ಲೂ ಹಳ್ಳದ ಸ್ವಚ್ಛತೆ ಮಾಡುವಂತೆ ಕೋರಲಾಗುವುದು ಎಂದು ಹೇಳಿದರು.

ಡಾ| ಶಿವಶರಣಪ್ಪ ಇತ್ಲಿ, ಪುರಸಭೆ ಸದಸ್ಯರಾದ ದೇವಣ್ಣ ನಾಯಕ, ಕಸಾಪ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ಮಸ್ಕಿ, ವೀರೇಶ ಪಾಟೀಲ, ಡಾ| ಮಲ್ಲಿಕಾರ್ಜುನ ಇತ್ಲಿ, ವೀರೇಶ ಸೌದ್ರಿ, ಅಮರೇಶ ಬ್ಯಾಳಿ, ಶಿಕ್ಷಕ ಲಕ್ಷ್ಮಣ ಮೋಚಿ ಇತರರು ಇದ್ದರು.

ಜಿಲ್ಲಾಧಿಕಾರಿಗೆ ಮನವಿ: ಹಳ್ಳದ ಸ್ವಚ್ಛತೆಗೆ ಕ್ರಮ ವಹಿಸುವಂತೆ ಪುರಸಭೆ ಸದಸ್ಯ ಎಂ. ಅಮರೇಶ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಮಸ್ಕಿಯ ಹೃದಯ ಭಾಗದಲ್ಲಿರುವ ಹಳ್ಳದಲ್ಲಿ ಗಿಡಗಂಟಿಗಳು ಬೆಳೆದಿದ್ದು, ಕಲುಷಿತಗೊಂಡಿದೆ. ಪಟ್ಟಣದ ಎಲ್ಲ ವಾರ್ಡ್‌ಗಳ ಕೊಳಚೆ ನೀರನ್ನು ಮಸ್ಕಿ ಹಳ್ಳಕ್ಕೆ ಹರಿಬಿಟ್ಟಿರುತ್ತಾರೆ. ಇದರಿಂದ ಹಳ್ಳ ಮಾಲಿನ್ಯಗೊಂಡಿದೆ. ಈ ಬಗ್ಗೆ ಪುರಸಭೆ ಸಾಮಾನ್ಯ ಸಭೆಯಲ್ಲಿ ಸಾಕಷ್ಟು ಬಾರಿ ಚರ್ಚಿಸಿದ್ದರೂ ಸ್ವಚ್ಛತೆ ಕಾರ್ಯ ರೂಪಕ್ಕೆ ಬಂದಿಲ್ಲ. ಹಳ್ಳದ ಸುತ್ತಮುತ್ತ ವಾಸಿಸುವ ಜನರು ಸೊಳ್ಳೆ, ಕ್ರಿಮಿಕೀಟಗಳ ಹಾವಳಿಗೆ ಕಾಯಿಲೆಗೆ ತುತ್ತಾಗುವಂತಾಗಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಹಳ್ಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಹಳ್ಳದ ಸ್ವಚ್ಛತೆಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಬೇಕೆಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.