- Monday 16 Dec 2019
ಬೇಡಿಕೆ ಈಡೇರಿಕೆಗೆ ಆಗ್ರಹ
ತಾಲೂಕು ಕಚೇರಿ ಮುಂದೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
Team Udayavani, Jul 6, 2019, 4:38 PM IST
ಮೂಡಿಗೆರೆ: ಪಟ್ಟಣದ ತಾಲೂಕು ಕಚೇರಿ ಮುಂದೆ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಮೂಡಿಗೆರೆ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಕಾರ್ಯಕರ್ತೆಯರು ಪಟ್ಟಣದ ತಾಲೂಕು ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಫೆಡರೇಷನ್‌ನ ಅಧ್ಯಕ್ಷೆ ಬಲ್ಕಿಸ್ ಬಾನು, ರಾಜ್ಯ ಸರಕಾರ ಪ್ರಸಕ್ತ ಸಾಲಿನಿಂದ 276 ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಆದೇಶಿಸಿದ್ದು, ಈಗಾಗಲೇ ಪ್ರವೇಶ ಪ್ರಕ್ರಿಯೆ ನಡೆಯುತ್ತಿದೆ. ಹಾಗಾಗಿ, ಅಂಗನವಾಡಿ ಕೇಂದ್ರಗಳಿಗೆ ಬರುವ ಮಕ್ಕಳು ಸರಕಾರಿ ಪಬ್ಲಿಕ್ ಶಾಲೆಗಳಿಗೆ ತೆರಳುತ್ತಿದ್ದಾರೆ. ಇದರಿಂದ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ. ಆದ್ದರಿಂದ, ಅಂಗನವಾಡಿ ಕೇಂದ್ರಗಳು ಮುಚ್ಚುವ ಸ್ಥಿತಿಗೆ ತಲುಪಲಿದೆ. ಅಲ್ಲದೇ, ಐಸಿಡಿಎಸ್ ಯೋಜನೆಯಲ್ಲಿ ಕಳೆದ ಮೂರ್‍ನಾಲ್ಕು ದಶಕದಿಂದ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತೆಯರು, ಸಹಾಯಕಿಯರು ಬೀದಿ ಪಾಲಾಗುವ ಭೀತಿ ಉಂಟಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು.
ಕಾರ್ಯದರ್ಶಿ ಅನುಸೂಯಾ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ನಡೆಸಬೇಕು. ಅದಕ್ಕಾಗಿ ಕಾರ್ಯಕರ್ತೆಯರಿಗೆ ತರಬೇತಿ ನೀಡಿ, ಮಕ್ಕಳಿಗೆ ಪಠ್ಯ ಪುಸ್ತಕ ಸಹಿತ ಮೂಲ ಸೌಕರ್ಯ ಒದಗಿಸಬೇಕು. ಸರಕಾರಿ ಆದೇಶದಂತೆ ಶಿಕ್ಷಕರ ವೃತ್ತಿಗೆ ಅಂಗನವಾಡಿ ಸಹಾಯಕಿಯರನ್ನೇ ನೇಮಕ ಮಾಡಬೇಕು. ಅವರಿಗೆ ಕ್ರಮವಾಗಿ 7,500 ಮತ್ತು 5,000 ರೂ. ಮಾಸಿಕ ಗೌರವಧನ ಹೆಚ್ಚುವರಿಯಾಗಿ ನೀಡಬೇಕು. ಯುಕೆಜಿ ಮುಗಿದ ಬಳಿಕ, ಮಕ್ಕಳಿಗೆ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿಗೆ ಪ್ರವೇಶ ಪಡೆಯಲು ಅಂಗನವಾಡಿ ಕೇಂದ್ರದಿಂದಲೇ ವರ್ಗಾವಣೆ ಪತ್ರ ನೀಡುವಂತಹ ಅವಕಾಶ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿದರು.
ಉಪಾಧ್ಯಕ್ಷೆ ವನಜಾಕ್ಷಿ, ಮೀನಾಕ್ಷಿ, ಹರಿಣಾಕ್ಷಿ, ಸುಶೀಲಾ, ಗೌರಮ್ಮ, ಲಲಿತಾ, ರಮ್ಯಾ, ಸ್ನೇಹಾ, ನವ್ಯಾ ಮತ್ತಿತರರು ಉಪಸ್ಥಿತರಿದ್ದರು.
ಈ ವಿಭಾಗದಿಂದ ಇನ್ನಷ್ಟು
-
ಸುಳ್ಯ : ಸುಮಾರು 150ಕ್ಕೂ ಅಧಿಕ ಕುಟುಂಬಗಳ ಪಿಂಡಿ ಪಯಣಕ್ಕೆ ವಿದಾಯ ಹೇಳಿ ಬಳ್ಳಿ ಸೇತುವೆ ಮೂಲಕ ಜನರನ್ನು ಸ್ವಾಗತಿಸಿದ ಸುಳ್ಯ- ದೊಡ್ಡೇರಿ ಸಂಪರ್ಕದ ಓಡಬಾೖ ತೂಗು...
-
ಉಡುಪಿ: ಸಂಘಟನ ಶಕ್ತಿಯಿಂದ ಎಂತಹ ಕಠಿನವಾದ ಸಮಸ್ಯೆಯನ್ನೂ ಲೀಲಾಜಾಲವಾಗಿ ಬಗೆಹರಿಸಲು ಸಾಧ್ಯವಿದೆ ಎನ್ನುವುದಕ್ಕೆ ಶ್ರೀ ಶಬರಿಮಲೈ ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ...
-
ಬೆಳ್ಮಣ್: ಶಿರ್ವ-ಬೆಳ್ಮಣ್ ರಸ್ತೆಯ ಪುನಾರು ಶ್ರೀ ಶಾಸ್ತಾವು ಬ್ರಹ್ಮಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ತಿರುವಿನಲ್ಲಿ ನಿರಂತರ ಅಪಘಾತ ನಡೆಯುತ್ತಿದ್ದು...
-
ಮಂಗಳೂರು: ಕರಾವಳಿಯ ಸಾಂಸ್ಕೃತಿಕ ಮತ್ತು ಸಾಹಿತ್ಯ ಚರಿತ್ರೆಯ ದಾಖಲಾತಿ ಕೊರತೆ ಇದೆ. ಅದನ್ನು ನೀಗಿಸುವಲ್ಲಿ ಡಾ| ಬಿ.ಎ. ವಿವೇಕ ರೈ ಅವರ "ಕಲಿತದ್ದು ಕಲಿಸಿದ್ದು'...
-
ಮಹಾನಗರ: "ಇಂದಿನ ಪೀಳಿಗೆ ಶಾಸ್ತ್ರೀಯ ಸಂಗೀತವನ್ನು ಇಷ್ಟಪಡುವುದಿಲ್ಲ. ಪಾಶ್ಚಾತ್ಯ ಸಂಗೀತದತ್ತ ಅವರ ಒಲವು ಹೆಚ್ಚುತ್ತಿದೆ ಎಂಬುದಾಗಿ ಪ್ರಚಲಿತ ಕೇಳಿಬರುತ್ತಿರುವ...
ಹೊಸ ಸೇರ್ಪಡೆ
-
ರಾಂಚಿ: ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಜಾರಿಯಲ್ಲಿದ್ದು ನಾಲ್ಕನೇ ಹಂತದ ಮತದಾನ ಸೋಮವಾರ ನಡೆಯುತ್ತಿದೆ. ಮತದಾನ ನಡೆಯುವ ಕ್ಷೇತ್ರಗಳಲ್ಲಿ ಬಿಗಿ...
-
ಕೋಲ್ಕತಾ: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್)ನಲ್ಲಿ ಕೇಂದ್ರ ಸರಕಾರ ತಾನು ಹೊಂದಿರುವ ಶೇ.28ರಷ್ಟು ಷೇರುಗಳನ್ನು ಮಾರುವ ಸಾಧ್ಯತೆ ಇದೆ. ಉಳಿದಿರುವ...
-
ಹೊಸದಿಲ್ಲಿ: ಉನ್ನಾವ್ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಿಲ್ಲಿಯ ಸ್ಥಳೀಯ ಕೋರ್ಟ್ ಸೋಮವಾರ (ಡಿ.16) ತೀರ್ಪು ಪ್ರಕಟಿಸಲಿದೆ. ಬಿಜೆಪಿಯ...
-
"ನನ್ನ 38 ವರ್ಷಗಳ ಸಿನಿಮಾ ಜರ್ನಿ ಸಾರ್ಥಕವೆನಿಸಿದೆ. ಸಿನಿಮಾರಂಗದಲ್ಲಿ ನೆಮ್ಮದಿ ಸಿಕ್ಕಾಗಿದೆ. ಇನ್ನು ಸಾಕು ಅಂದುಕೊಂಡಿದ್ದೆ. ಆದರೆ, ಕವಿರಾಜ್, ನೀವು ಸುಮ್ಮನೆ...
-
ದರ್ಶನ್ ಅಭಿನಯದ "ಒಡೆಯ' ಚಿತ್ರದ ಆರ್ಭಟ ಜೋರಾಗಿದೆ. ಅದರಲ್ಲೂ ದರ್ಶನ್ ಅಭಿಮಾನಿಗಳಷ್ಟೇ ಅಲ್ಲ, ಎಲ್ಲಾ ವರ್ಗದವರಿಗೂ ಇಷ್ಟವಾಗುವ ಅಂಶಗಳು "ಒಡೆಯ'ದಲ್ಲಿರುವುದರಿಂದ...