ಅನುದಾನಕ್ಕಾಗಿ ತಪ್ಪದ ಅಲೆದಾಟ

ಸಾಲ ಮಾಡಿ ಮನೆ ನಿರ್ಮಿಸಿಕೊಂಡ ಫಲಾನುಭವಿಗಳು • ಮನೆಗಳ ಜಿಪಿಎಸ್‌ ಅಳವಡಿಸಿದ್ದರೂ ಖಾತೆಗೆ ಜಮೆ ಆಗದ ಅನುದಾನ

Team Udayavani, Sep 15, 2019, 1:25 PM IST

15-Sepctember-15

ಮುದಗಲ್ಲ: ವೇಣಪ್ಪನ ತಾಂಡಾದಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ಯೋಜನೆಯಡಿ ಮಂಜೂರಾದ ಮನೆ ನಿರ್ಮಾಣ ಕಾಮಗಾರಿ ನಡೆದಿದೆ.

ದೇವಪ್ಪ ರಾಠೊಡ
ಮುದಗಲ್ಲ:
ಗುಡಿಸಲು ಮುಕ್ತ ಕರ್ನಾಟಕ ನಿರ್ಮಾಣ ಮಾಡಲು ಸರಕಾರ ಬಸವ ವಸತಿ, ಡಾ| ಬಿ.ಆರ್‌. ಅಂಬೇಡ್ಕರ್‌ ವಸತಿ, ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಸೇರಿದಂತೆ ಅನೇಕ ವಸತಿ ಯೋಜನೆ ಜಾರಿಗೆ ತಂದಿದೆ. ಗುಡಿಸಲು ವಾಸಿ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಿದೆ. ಆದರೆ ಮನೆ ನಿರ್ಮಿಸಿಕೊಂಡರು ಅನುದಾನ ಬಾರದೇ ಫಲಾನುಭವಿಗಳು ಕಚೇರಿ-ಕಚೇರಿ ಅಲೆದಾಡುವಂತಾಗಿದೆ.

ವಿವಿಧ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಂಡ ಫಲಾನುಭವಿಗಳಿಗೆ 4 ಹಂತದಲ್ಲಿ ಹಣ ಮಂಜೂರು ಮಾಡಲಾಗುತ್ತದೆ. ಮನೆ ನಿರ್ಮಿಸಿಕೊಂಡು ಎರಡು ವರ್ಷ ಕಳೆದರೂ ಕಂತಿನ ಹಣ ಜಮೆ ಮಾಡಿಲ್ಲ ಎನ್ನಲಾಗಿದೆ.

ಬೆಂಗಳೂರಿನ ರಾಜೀವ ಗಾಂಧಿ ವಸತಿ ನಿಗಮ 2016-17, 2017-18 ಹಾಗೂ 2018-19ನೇ ಸಾಲಿಗೆ ಲಿಂಗಸುಗೂರ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಮನೆ ಮಂಜೂರು ಮಾಡಿದೆ. ಡಾ| ಬಿ.ಆರ್‌.ಅಂಬೇಡ್ಕರ್‌ ಹಾಗೂ ಬಸವ ವಸತಿ ಯೋಜನೆ ಫಲಾನುಭವಿಗಳು ತಳಪಾಯ ಮತ್ತು ಗೋಡೆ ಹಂತದವರೆಗೆ ಮನೆ ನಿರ್ಮಿಸಿಕೊಂಡಿದ್ದಾರೆ. ನಿಯಮಗಳಂತೆ ಗ್ರಾಪಂ ಅಧಿಕಾರಿಗಳು ಫೋಟೋ ಸೆರೆ ಹಿಡಿದು ಜಿಪಿಎಸ್‌ ಮಾಡಿದ್ದಾರೆ. ಆದರೆ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಬಿಡಿಗಾಸು ಅನುದಾನ ಜಮೆ ಆಗಿಲ್ಲ. ಈ ಕುರಿತು ರಾಜೀವ ಗಾಂಧಿ ವಸತಿ ನಿಗಮದ ಉಚಿತ ಕರೆ ಸಂಖ್ಯೆ 08023118888ಗೆ ಕರೆ ಮಾಡಿದರೆ ಸರಕಾರದಲ್ಲಿ ದುಡ್ಡಿಲ್ಲ, ದುಡ್ಡು ಬಂದ ನಂತರ ಕಂತುಗಳನ್ನು ಜಮೆ ಮಾಡುವುದಾಗಿ ಹೇಳುತ್ತಾರೆಂದು ದೇಸಾಯಿ ಭೋಗಾಪುರದ ಫಲಾನುಭವಿ ಶಂಕ್ರಪ್ಪ ಅಳಲು ತೋಡಿಕೊಂಡರು.

ಲಿಂಗಸುಗೂರ ತಾಲೂಕಿಗೆ ಡಾ| ಬಿ.ಆರ್‌.ಅಂಬೇಡ್ಕರ್‌ ವಸತಿ ಯೋಜನೆಯಡಿ 18,700 ಮನೆ ಮಂಜೂರಾಗಿವೆ. ಇದರಲ್ಲಿ 12000 ಮನೆಗಳ ಕಾಮಗಾರಿ ನಡೆಯುತ್ತಿದ್ದು ಜಿಪಿಎಸ್‌ ಸೆರೆ ಹಿಡಿಯಲಾಗಿದೆ. ಉಳಿದಂತೆ 6700 ಮನೆಗಳ ಮಾಲೀಕರು ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆಂದು ತಾಪಂ ಮೂಲಗಳಿಂದ ತಿಳಿದು ಬಂದಿದೆ. ಬಸವ ವಸತಿ ಯೋಜನೆ ಕೂಡ ಇದಕ್ಕೆ ಹೊರತಲ್ಲ.

ಸಾಲದ ಹೊರೆ: ವಸತಿ ಫಲಾನುಭವಿಗಳು ಸಾಲ ಮಾಡಿ ಸಿಮೆಂಟ್, ಮರಳು, ಇಟ್ಟಿಗೆ, ಕಿಟಕಿ, ಬಾಗಿಲು ತಂದು ಮನೆ ನಿರ್ಮಿಸಿಕೊಳ್ಳುತ್ತಿದ್ದಾರೆ. ಕೆಲ ಫಲಾನುಭವಿಗಳು ಮನೆ ನಿರ್ಮಿಸಿಕೊಂಡು ವರ್ಷಗಳೇ ಗತಿಸಿದರೂ ಅವರಿಗೆ ಅನುದಾನ ಜಮೆ ಆಗಿಲ್ಲ. ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಕೇಳಿದರೆ ರಾಜೀವಗಾಂಧಿ ವಸತಿ ನಿಗಮದ ಅಧಿಕಾರಿಗಳಿಗೆ ಕೇಳಿ, ಗ್ರಾಪಂಗೆ ಯಾವುದೇ ಹಣಕಾಸಿನ ಅಧಿಕಾರ ಇಲ್ಲ ಎಂದು ಜಾರಿಕೊಳ್ಳುತ್ತಾರೆ. ಅನುದಾನ ಬಾರದ್ದರಿಂದ ಕೆಲವರ ಮನೆ ಕಾಮಗಾರಿ ಅರ್ಧಕ್ಕೆ ನಿಂತಿವೆ. ಹೀಗಾಗಿ ಫಲಾನುಭವಿಗಳು ದಿಕ್ಕು ತೋಚದಂತಾಗಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಮನೆ ನಿರ್ಮಿಸಿಕೊಂಡವರಿಗೆ ಅನುದಾನ ಬಿಡುಗಡೆಮಾಡಬೇಕು ಎಂದು ತಲೇಖಾನ ಗ್ರಾಪಂ ಮಾಜಿ ಅಧ್ಯಕ್ಷೆ ಉಮ್ಮವ್ವ ರಾಠೊಡ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.