ಯೋಧ ಬೂದಿಹಾಳ ಕುಟುಂಬಕ್ಕೆ ರಕ್ಷಣೆ ಕೊಡಿ

Team Udayavani, Jul 28, 2019, 1:17 PM IST

28-July-32

ಮುದ್ದೇಬಿಹಾಳ: ಚಿರ್ಚನಕಲ್ ಗ್ರಾಮದ ಸೈನಿಕ ಮಂಜುನಾಥ ಬೂದಿಹಾಳ ಅವರು ಜಿಲ್ಲಾಧಿಕಾರಿಗೆ ರಕ್ಷಣೆ ಕೋರಿ ಮನವಿ ಸಲ್ಲಿಸಿದರು.

ಮುದ್ದೇಬಿಹಾಳ: ಚಿರ್ಚನಕಲ್ ಗ್ರಾಮದ ಭೂಸೇನೆ ಯೋಧ ಮಂಜುನಾಥ ಬೂದಿಹಾಳ, ಅವರ ಸಹೋದರಿ ಮತ್ತು ಕುಟುಂಬಕ್ಕೆ ಟಟಲೀಸ್‌ ರಕ್ಷಣೆ ಒದಗಿಸಲು ಸಂಬಂಧಿಸಿದವರಿಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಬೇಕು ಮತ್ತು ಪ್ರಕರಣವನ್ನು ಆದಷ್ಟು ಬೇಗ ಇತ್ಯರ್ಥಗೊಳಿಸಬೇಕು ಎಂದು ಕೋರಿ ಭಾರತೀಯ ಭೂಸೇನೆ ಹಿರಿಯ ಅಧಿಕಾರಿಗಳು ಜಿಲ್ಲಾಧಿಕಾರಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಸೇನೆ ಅಧಿಕಾರಿಗಳು ಬರೆದ ಪತ್ರವನ್ನು ಸೈನಿಕ ಮಂಜುನಾಥ ಬೂದಿಹಾಳ ಅವರು ಜಿಲ್ಲಾಧಿಕಾರಿ, ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಬೆಳಗಾವಿಯಲ್ಲಿರುವ ಸ್ಟೇಷನ್‌ ಹೆಡ್‌ಕ್ವಾಟ್ರಸ್‌ ಮುಖ್ಯಸ್ಥರು, ವಿಜಯಪುರ ಸೇಷನ್ಸ್‌ ಕೋರ್ಟ್‌ ರಜಿಸ್ಟ್ರಾರ್‌ ಮತ್ತು ವಿಜಯಪುರದ ಸೈನಿಕ ಕಲ್ಯಾಣ ಕಚೇರಿಗೆ ತಲುಪಿಸಿ ರಕ್ಷಣೆ ಕೊಡಬೇಕು ಎಂದು ಕೋರಿದ್ದಾರೆ.

ಮಂಜುನಾಥ ಬೂದಿಹಾಳ ಅವರು ಭಾರತೀಯ ಸೇನೆಯಲ್ಲಿ ಸಿಗ್ನಲ್ ಮ್ಯಾನ್‌ ಎಂದು ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು 2017ರ ಜೂನ್‌ ತಿಂಗಳಲ್ಲಿ ರಜೆ ಮೇಲೆ ಬಂದಿದ್ದಾಗ ಇವರ ಸಹೋದರಿಯ ಮೇಲೆ ರಾಮಬಾಬು ಭೋಗಣ್ಣ ಅನ್ನಗೌನಿ ಎನ್ನುವವರು ದೌರ್ಜನ್ಯ ನಡೆಸಿದ್ದರು. ಇದನ್ನು ಪ್ರಶ್ನಿಸಿದ್ದ ಮಂಜುನಾಥನ ಮೇಲೆ ರಾಮಬಾಬು ಹಿಂಬಾಲಕರು ಹಲ್ಲೆಗೆ ಮುಂದಾಗಿದ್ದರು.

ಹಲ್ಲೆಯಿಂದ ತಪ್ಪಿಸಿಕೊಳ್ಳಲು ಮಂಜುನಾಥ ಅವರು ತಮ್ಮ ಬಳಿ ಇರುವ ಪಿಸ್ತೂಲ್ನಿಂದ ರಾಮಬಾಬು ಮತ್ತು ಅವರ ಸಹಚರರನ್ನು ಬೆದರಿಸಿದ್ದರು ಎಂದು ಪತ್ರದಲ್ಲಿ ಸೇನೆ ಹಿರಿಯ ಅಧಿಕಾರಿಗಳು ಮಂಜುನಾಥನ ಹೇಳಿಕೆ ಆಧಾರಿಸಿ ತಿಳಿಸಿದ್ದಾರೆ.

ಆ ಘಟನೆ ಹಿನ್ನೆಲೆ ಸ್ಥಳೀಯ ಪೊಲೀಸರು ರಾಮಬಾಬು, ಆತನ ಸಹಚರರನ್ನು ಅರೆಸ್ಟ್‌ ಮಾಡುವ ಬದಲು ಮಂಜುನಾಥನ ವಿರುದ್ಧವೇ ಮುದ್ದೇಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಪ್ರಕರಣ ಕೋರ್ಟ್‌ ಮೆಟ್ಟಿಲೇರಿದೆ ಎಂದು ಪತ್ರದಲ್ಲಿ ತಿಳಿಸಿ ಸಂದರ್ಭಾನುಸಾರ ನಡೆದ ಘಟನಾವಳಿಗಳ ವಿವರ ನೀಡಿದ್ದಾರೆ. ಮಾತ್ರವಲ್ಲದೆ ಆರೋಪಿಯು ಮಂಜುನಾಥ ಮತ್ತು ಅವರ ಸಹೋದರಿಗೆ ಬೆದರಿಕೆ ಹಾಕುತ್ತಿದ್ದು ಪೊಲೀಸ್‌ ರಕ್ಷಣೆ ಕೋರಿದ್ದರೂ ಸರಿಯಾಗಿ ಸ್ಪಂದಿಸಿಲ್ಲ. ಈಗಲಾದರೂ ಮಂಜುನಾಥ ಮತ್ತು ಅವರ ಸಹೋದರಿಗೆ ಪೊಲೀಸ್‌ ರಕ್ಷಣೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ ಅವರ ಮನವಿ ಪರಿಗಣಿಸಿ ಇಲ್ಲಿನ ಸಿಪಿಐ ಕಚೇರಿಯಿಂದ ಅವರ ಮನವಿಗೆ ಹಿಂಬರಹ ನೀಡಲಾಗಿದ್ದು ಮಂಜುನಾಥ ಅವರು ಸಲ್ಲಿಸಿದ್ದ ದೂರಿನ ಅರ್ಜಿಯ ವಿಚಾರಣೆ ನಡೆಸಿ ನ್ಯಾಯಾಲಯದಲ್ಲಿರುವ ಈ ಪ್ರಕರಣ ಇತ್ಯರ್ಥವಾಗುವವರೆಗೆ ಮಂಜುನಾಥ ಮತ್ತು ಅವರ ಸಹೋದರಿಗೆ ಯಾವುದೇ ತೊಂದರೆ ಮಾಡಬಾರದು ಎಂದು ರಾಮಬಾಬುಗೆ ಎಚ್ಚರಿಕೆ ನೀಡಲಾಗಿದೆ. ಈ ಪ್ರಕರಣಗಳ ಮುದ್ದತ್‌ ಅವಧಿಯಲ್ಲಿ ಮಂಜುನಾಥ ಮತ್ತು ಅವರ ಸಹೋದರಿ ರಕ್ಷಣೆ ಕೋರಿದಲ್ಲಿ ರಕ್ಷಣೆ ನೀಡುವಂತೆ ಮುದ್ದೇಬಿಹಾಳ ಪಿಎಸೈ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.