ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ
Team Udayavani, May 1, 2019, 5:14 PM IST
ಮುದ್ದೇಬಿಹಾಳ: ಇಲ್ಲಿನ ಬಸ್ ನಿಲ್ದಾಣದಲ್ಲಿ ಬಸ್ ಪ್ರಯಾಣಿಕರಿಗೆ ಮೂಲಭೂತ ಸೌಕರ್ಯಗಳ ಕುರಿತು ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಮರೀಚಿಕೆ ಎಂಬ ಶಿರ್ಷಿಕೆಯಡಿ ವಿಶೇಷ ವರದಿ ಮಾಡಿದ ಹಿನ್ನೆಲೆ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ಸಾರ್ವಜನಿಕರಿಗೆ ಅವಶ್ಯಕವಿರುವ ಸೌಕರ್ಯಗಳನ್ನು ಒದಗಿಸಿದರು.
ಮೊದಲಿಗೆ ಬಸ್ ನಿಲ್ದಾಣದ ಸ್ವಚ್ಛತೆ ಬಗ್ಗೆ ಪುರಸಭೆ ಅಧಿಕಾರಿಗಳೊಂದಿಗೆ ಮಾಡಿದ ಘಟಕ ವ್ಯವಸ್ಥಾಪಕ ರಾಹುಲ್ ಹೊನಸೂರೆ ಕೂಡಲೇ ನಿಲ್ದಾಣದಲ್ಲಿರುವ ಕಸವನ್ನು ಸ್ವಚ್ಛಗೊಳಿಸುವಂತೆ ಸೂಚಿಸಿದರು. ಅಲ್ಲದೇ ಕುಡಿಯುವ ನೀರಿನ ನಲ್ಲಿಗಳನ್ನು ಸ್ವಚ್ಛಗೊಳಿಸಲು ಸೂಚಿಸಿದ ಅವರು, ಕೆಟ್ಟು ಹೋಗಿದ್ದ ನಲ್ಲಿಗಳನ್ನು ಸರಿಪಡಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟರು.