ಗದ್ದೆ ಮರಳು ತೆರವಿಗೆ ಅನುಮತಿ

ಶಾಸಕ ಎಂ.ಪಿ.ಕುಮಾರಸ್ವಾಮಿ ಯತ್ನದಿಂದ ಸಮಸ್ಯೆಗೆ ಜಿಲ್ಲಾಡಳಿತ ಸ್ಪಂದನೆ: ರಘು

Team Udayavani, Dec 18, 2019, 6:20 PM IST

18-Decemebr-29

ಮೂಡಿಗೆರೆ: ತಾಲೂಕಿನಾದ್ಯಂತ ಈ ಬಾರಿ ಸುರಿದ ಭಾರೀ ಮಳೆಯಿಂದಾಗಿ ಜಮೀನುಗಳಲ್ಲಿ ಶೇಖರಣೆಗೊಂಡಿರುವ ಮರಳನ್ನು ತೆರವುಗೊಳಿಸಲು ಅನುಮತಿ ನೀಡಬೇಕೆಂಬ ತಮ್ಮ ಮನವಿಗೆ ಸ್ಪಂದಿಸಿರುವ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು, ಸಮಸ್ಯೆ ಬಗೆಹರಿಸಿದ್ದಾರೆಂದು ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಎಸ್‌.ರಘು ತಿಳಿಸಿದ್ದಾರೆ.

ಈ ಬಗ್ಗೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಜತೆ ತಹಶೀಲ್ದಾರ್‌ ರಮೇಶ್‌ ಅವರಿಗೆ ಮನವಿ ಸಲ್ಲಿಸಿದ ನಂತರ ಮಾಹಿತಿ ನೀಡಿದರು. ಈ ಬಾರಿ ಮಲೆನಾಡಿನಲ್ಲಿ ಬಿದ್ದ ರಣಭೀಕರ ಮಳೆಯಿಂದಾಗಿ ತಾಲೂಕಿನಾದ್ಯಂತ ಜಮೀನುಗಳಲ್ಲಿ ನೀರು ಹರಿದು ಮರಳು ಶೇಖರಣೆಗೊಂಡಿದೆ. ಇದರಿಂದ ವ್ಯವಸಾಯ ಕಷ್ಟಕರವಾಗಿದೆ. ಹಲವೆಡೆ ಗುಡ್ಡ ಕುಸಿತ, ಕೆರೆಕಟ್ಟೆ ಒಡೆದು ತೋಟ ಮತ್ತು ಗದ್ದೆಗಳಿಗೆ ನೀರು ಹರಿದಿದೆ. ನೀರಿನ ರಭಸಕ್ಕೆ ಜಮೀನುಗಳಲ್ಲಿ ಮರಳು ಶೇಖರಣೆಯಾಗಿದೆ. ಇದರಿಂದ ಜಮೀನುಗಳಲ್ಲಿ ಕೃಷಿ ಕಾರ್ಯಗಳಿಗೆ ಹಿನ್ನಡೆಯಾಗಿದ್ದು, ಮರಳು ತೆರವುಗೊಳಿಸಲು ನಿಯಮಗಳು ಅಡ್ಡಿಯಾಗುತ್ತಿವೆ ಎಂದು ತಿಳಿಸಿದ್ದಾರೆ.

ಮರಳು ತೆಗೆಯಲು ಮತ್ತು ಸಾಗಿಸಲು ಅನುಮತಿ ಕಡ್ಡಾಯವಾಗಿದ್ದು, ತಾಲೂಕಿನ ರೈತರು ಮರಳು ತೆಗೆಯಲು ಹಿಂದೇಟು ಹಾಕುತ್ತಿದ್ದಾರೆ. ಇತ್ತ ಮರಳು ತೆಗೆಯಲೂ ಆಗದೆ, ಜಮೀನಿನಲ್ಲಿ ಕೆಲಸ ಮಾಡಿಸಲೂ ಆಗದೇ ಪರದಾಡುತ್ತಿದ್ದ ರೈತರ ಕಷ್ಟವನ್ನು ಮನಗಂಡು ಜಿಲ್ಲಾಧಿಕಾರಿಗಳಿಗೆ ಮತ್ತು ಮೂಡಿಗೆರೆ ತಹಶೀಲ್ದಾರ್‌ರಿಗೆ ಜಮೀನುಗಳಲ್ಲಿ ಶೇಖರಣೆಯಾಗಿರುವ ಮರಳು ತೆರವುಗೊಳಿಸಲು ಅನುಮತಿ ಕೋರಿ ಪತ್ರ ಬರೆದಿದ್ದೆ. ಅಲ್ಲದೇ, ಈ ವಿಚಾರವಾಗಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಲ್ಲೂ ಮನವಿ ಮಾಡಿಕೊಂಡಿದ್ದೆ ಎಂದಿದ್ದಾರೆ.

ಸಮಸ್ಯೆಗೆ ಸ್ಪಂದಿಸಿದ ಶಾಸಕರು ಕೂಡಲೇ ಮೂಡಿಗೆರೆ ತಹಶೀಲ್ದಾರ್‌, ವೃತ್ತ ನಿರೀಕ್ಷಕರು ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆದ್ದರು. ಅಲ್ಲದೇ,
ಜಿಲ್ಲಾ ಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಪರಿಸ್ಥಿತಿಯ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟರು. ಹಾಗಾಗಿ, ಜಿಲ್ಲಾಧಿಕಾರಿಗಳು ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಸಮಸ್ಯೆ ಪರಿಹರಿಸುವಲ್ಲಿ ಸಹಕರಿಸುವುದಾಗಿ ಭರವಸೆ ನೀಡಿದ್ದರು.

ನಂತರ ತಹಶೀಲ್ದಾರ್‌ ಸಭೆಯಲ್ಲಿ ಜಮೀನುಗಳಲ್ಲಿ ಶೇಖರಣೆಗೊಂಡಿರುವ ಮರಳನ್ನು ಸಾಗಿಸಲು ಷರತ್ತುಬದ್ಧ ಒಪ್ಪಿಗೆ ನೀಡಿದ್ದಾರೆ. ಈ ಸಭೆಯಲ್ಲಿ ತಾಪಂ ಅಧ್ಯಕ್ಷ ಕೆ.ಸಿ.ರತನ್‌, ಪಪಂ ಸದಸ್ಯ ಪಟ್ಟದೂರು ಪುಟ್ಟಣ್ಣ, ಮುಖಂಡರಾದ ಪಂಚಾಕ್ಷರಿ, ದುಂಡುಗ ಪ್ರಮೋದ್‌, ಅರೇಕೂಡಿಗೆ ಶಿವು ಹಾಗೂ ವಿವಿಧ ಭಾಗಗಳಿಂದ ರೈತರು ಭಾಗವಹಿಸಿದ್ದರು ಎಂದು ತಿಳಿಸಿದ್ದಾರೆ.

ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ಬಳಿಕ ರೈತರು ತಮ್ಮ ಜಮೀನುಗಳಲ್ಲಿ ಶೇಖರಣೆಯಾಗಿರುವ ಮರಳನ್ನು ಮಾರಾಟ ಮಾಡದೆ ತಮ್ಮ ಸ್ವಂತಕ್ಕೆ ಮಾತ್ರ ಬಳಸಿಕೊಳ್ಳಬೇಕು. ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಮಾತ್ರ ಮರಳು ಸಾಗಣೆ ಮಾಡಿಕೊಳ್ಳಬೇಕೆಂದು ಷರತ್ತು ಬದ್ಧ ಒಪ್ಪಿಗೆ ನೀಡಿದ್ದಾರೆ. ರೈತರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ರಘು ಅವರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.