ಸಂತ್ರಸ್ತರ ಖಾತೆಗೆ ನೇರ ಪರಿಹಾರ ಹಣ ಜಮಾ

•769 ಮನೆಗಳಿಗೆ ಹಾನಿ•ಗದಗ ಕ್ಷೇತ್ರಕ್ಕೆ 2.70 ಕೋಟಿ ರೂ. ಪರಿಹಾರ ಮೊತ್ತ ಬಿಡುಗಡೆ

Team Udayavani, Aug 15, 2019, 1:30 PM IST

ಮುಳಗುಂದ: ನೀಲಗುಂದ ಗ್ರಾಮದಲ್ಲಿ ಮನೆಗೋಡೆ ಕುಸಿದು ಗಾಯಗೊಂಡ ವೃದ್ಧನ ಮನೆಗೆ ಶಾಸಕ ಎಚ್.ಕೆ. ಪಾಟೀಲ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಮುಳಗುಂದ: ಗದಗ ಕ್ಷೇತ್ರಕ್ಕೆ 2.70 ಕೋಟಿ ರೂ. ಪರಿಹಾರ ಮೊತ್ತ ಬಿಡುಗಡೆಯಾಗಿದ್ದು, ಹಾನಿಯಾದ ಪ್ರಮಾಣಕ್ಕನುಗುಣವಾಗಿ ಎಲ್ಲರಿಗೂ ನೇರವಾಗಿ ಬ್ಯಾಂಕ್‌ ಖಾತೆಗೆ ಹಣ ಜಮಾವಣೆ ಮಾಡಲಾಗಿದೆ ಎಂದು ಶಾಸಕ ಎಚ್.ಕೆ. ಪಾಟೀಲ ಹೇಳಿದರು.

ಸಮೀಪದ ನೀಲಗುಂದ ಗ್ರಾಮದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಅತಿವೃಷ್ಟಿ ಹಾಗೂ ನೆರೆ ಹಾನಿಯಿಂದ ಗದಗ ತಾಲೂಕಿನಾದ್ಯಂತ 769 ಮನೆಗಳು ಹಾನಿಗೀಡಾಗಿದ್ದು, ಕೆಲವು ಗ್ರಾಮಗಳಲ್ಲಿ ಗೋಡೆ ಕುಸಿತದಿಂದ ಜಾನುವಾರು ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿದ್ದಾರೆ.

ಈವರೆಗೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನರು ಮಣ್ಣಿನ ಮಳೆಗಳನ್ನು ಬಿಟ್ಟು ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕು. ಜನಪ್ರತಿನಿಧಿಗಳು, ಅಧಿಕಾರಿಗಳು ಜವಾಬ್ದಾರಿಯುತ ನಾಗರಿಕರು ಸಂಕಷ್ಟದಲ್ಲಿರುವವರ ರಕ್ಷಣೆಗೆ ಮುಂದಾಗಬೇಕು ಎಂದರು.

ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಣ್ಣಿನ ಮನೆಗಳಿದ್ದು, ಇಂತಹ ಸಂದರ್ಭದಲ್ಲಿ ಅಪಾಯ ಉಂಟಾಗುತ್ತವೆ. ಕೂಡಲೇ ಸರ್ಕಾರ ವೈಜ್ಞಾನಿಕ ರೀತಿಯಲ್ಲಿ ಬಡವರಿಗೆ ಮನೆ ನಿರ್ಮಿಸಿಕೊಳಲು 4 ಲಕ್ಷ ರೂ. ಗಳಷ್ಟು ಸಹಾಯಧನ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಗದಗ ತಹಶೀಲ್ದಾರ್‌ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಗುರಣ್ಣ ಬಳಗಾನೂರ, ಹನಮಂತಪ್ಪ ಪೂಜಾರ, ಅಪ್ಪಣ್ಣ ಇನಾಮತಿ, ಪ್ರಭು ಬುರಬುರೆ, ಎಚ್.ಎಸ್‌. ಜಿನಗಿ , ಎನ್‌.ಬಿ. ದೊಡ್ಡಮನಿ, ಜಯಪ್ರಕಾಶ ಭಜಂತ್ರಿ,ನವೀನ ಬಂಗಾರಿ, ಸುನೀಲ ಬಂಗಾರಿ, ಪ್ರಭು ಅಂಗಡಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ