1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
ಅಮೃತ ಮಹೋತ್ಸವ
Team Udayavani, Sep 20, 2024, 11:55 PM IST
ಮೈಸೂರು: ದೇಶದಲ್ಲಿ ಮುಂಬರುವ ವರ್ಷಗಳಲ್ಲಿ 1 ಲಕ್ಷ ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆಯ ಗುರಿ ಹೊಂದಲಾಗಿದೆ ಎಂದು ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್ ಹೇಳಿದರು.
ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕೇಂದ್ರ ರೇಷ್ಮೆ ಮಂಡಳಿಯ ಅಮೃತ ಮಹೋತ್ಸವದಲ್ಲಿ ಅವರು ಮಾತನಾಡಿದರು.
ಅಭಿವೃದ್ಧಿ ಪೂರಕ ಯೋಜನೆ ಪ್ರಸ್ತುತ ನಮ್ಮ ದೇಶದಲ್ಲಿ 40 ಸಾವಿರ ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆಯಾಗುತ್ತಿದೆ. 10 ವರ್ಷಗಳ ಹಿಂದೆ 20 ಸಾವಿರ ಮೆಟ್ರಿಕ್ ಟನ್ ಉತ್ಪಾದನೆ ಮಾಡಲಾಗುತ್ತಿತ್ತು. ನೆರೆಯ ದೇಶವಾದ ಚೀನ 50 ಸಾವಿರ ಮೆಟ್ರಿಕ್ ಟನ್‌ನಿಂದ 94 ಸಾವಿರ ಮೆಟ್ರಿಕ್ ಟನ್‌ಗೆ ಉತ್ಪಾದನೆಯನ್ನು ಹೆಚ್ಚಿಸಿಕೊಂಡಿದೆ. ನಮ್ಮ ದೇಶದಲ್ಲಿ ಉತ್ಪಾದನೆಯನ್ನು ಹೆಚ್ಚು ಮಾಡಿ ವಿಶ್ವದಲ್ಲಿ ಒಂದನೇ ಸ್ಥಾನ ಪಡೆಯಲು ನಾವು ಧನತ್ಮಾಕವಾದ ಹೆಜ್ಜೆಗಳನ್ನು ಇಡಬೇಕು ಎಂದರು.
ರೈತರ ಅದಾಯ ಹೆಚ್ಚಳ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ರೈತರ ಅದಾಯವನ್ನು ಹೆಚ್ಚಿಸುವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕರ್ನಾಟಕದಲ್ಲಿ ತೆಂಗು ಬೆಳೆಯು ತುಮಕೂರು ಹಾಗೂ ರಾಮನಗರ ಜಿಲ್ಲೆ ಯಲ್ಲಿ ಹೆಚ್ಚಾಗಿ ಬೆಳೆಯುತ್ತಾರೆ. ರೇಷ್ಮೆಯನ್ನು ಕರ್ನಾಟಕದ ಇತರ ಜಿಲ್ಲೆ ಗಳಲ್ಲಿ ಬೆಳೆಯುತ್ತಾರೆ. ರೇಷ್ಮೆಯನ್ನು ಬೆಳೆಯುವ ರೈತರು ತಮ್ಮ ಜಮೀನಿನ ಬದುವಿನಲ್ಲಿ ತೆಂಗು ಬೆಳೆಯನ್ನು ಬೆಳೆದರೆ ಆರ್ಥಿಕವಾಗಿಯೂ ಸುಸ್ಥಿರಗೊಳ್ಳಬಹುದು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.