2 ಜಿಲ್ಲೆಗಳಿಗೆ 500 ಕೋಟಿ ರೂ.ಪರಿಹಾರ ನೀಡಿ

Team Udayavani, Aug 15, 2019, 3:00 AM IST

ತಿ.ನರಸೀಪುರ: ನೆರೆ ಪರಿಹಾರ ಹಂಚಿಕೆಯಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ ಎಂದು ಮಾಜಿ ಸಂಸದ ಆರ್‌.ಧ್ರುವನಾರಾಯಣ ದೂರಿದರು. ಪಟ್ಟಣದ ಹಳೇ ತಿರುಮಕೂಡಲು ಸೇರಿದಂತೆ ವಿಶ್ವಕರ್ಮ ಬೀದಿ ಹಾಗೂ ಹೆಮ್ಮಿಗೆ ರಸ್ತೆಯಲ್ಲಿ ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಮಾತನಾಡಿದರು.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ 14 ಜಿಲ್ಲೆಗಳಿಗೆ ಮಂಜೂರು ಮಾಡಿರುವ 100 ಕೋಟಿ ರೂ.ಬರ ಪರಿಹಾರ ಹಂಚಿಕೆಯ ಆದೇಶದ ಪಟ್ಟಿಯಲ್ಲಿ ಎರಡೂ ಜಿಲ್ಲೆಗಳ ಹೆಸರಿಲ್ಲ. ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಬರ ನಿರ್ವಹಣೆಗೆ ಮುಖ್ಯ ಕಾರ್ಯದರ್ಶಿ ಗ್ರೇಡ್‌ ಅಧಿಕಾರಿಗಳನ್ನು ನಿಯೋಜಿಸಿದ್ದರೆ, ಈ ಭಾಗದ ಜಿಲ್ಲೆಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಉಸ್ತುವಾರಿ ನೀಡಲಾಗಿದೆ ಎಂದರು.

ಹುಣಸೂರು, ಎಚ್‌.ಡಿ.ಕೋಟೆ, ನಂಜನಗೂಡು ಹಾಗೂ ತಿ.ನರಸೀಪುರ ಮತ್ತು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕು ನೆರೆ ಹಾವಳಿಗೆ ಸಿಲುಕಿವೆ. ಎಚ್‌.ಡಿ.ಕೋಟೆಯಲ್ಲಿ ಬೆಳೆಗಳು ಮುಳುಗಿ ಹೋಗಿವೆ. ನಂಜನಗೂಡು ತಾಲೂಕಿನಲ್ಲಿ 1154 ಮನೆಗಳು ಕುಸಿದಿವೆ. ಕೊಳ್ಳೇಗಾಲ ತಾಲೂಕಿನಲ್ಲಿ 4 ಗ್ರಾಮಗಳು ಮುಳುಗಡೆಯಾಗಿವೆ. ಹೀಗಾಗಿ ಎರಡೂ ಜಿಲ್ಲೆಗಳಿಗೆ ಕನಿಷ್ಠ 500 ಕೋಟಿ ರೂ. ಪರಿಹಾರ ಘೋಷಿಸಿಬೇಕು ಎಂದರು.

ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ ಮಾತನಾಡಿ, ಎರಡು ಜಿಲ್ಲೆಯ ಐದು ತಾಲೂಕುಗಳಲ್ಲಿನ ನೆರೆ ಹಾನಿಯನ್ನು ಖುದ್ದಾಗಿ ಪರಿಶೀಲಿಸಿ, ಜಿಲ್ಲಾಡಳಿತಕ್ಕೆ ಮಾಹಿತಿ ನೀಡುತ್ತೇವೆ ಎಂದರು. ಈ ವೇಳೆ ಜಿಪಂ ಸದಸ್ಯ ಮಂಜುನಾಥನ್‌, ಕೆಪಿಸಿಸಿ ಉಪಾಧ್ಯಕ್ಷ ಹೊನ್ನನಾಯಕ, ಜಿಪಂ ಮಾಜಿ ಸದಸ್ಯ ಎಂ.ಆರ್‌.ಸೋಮಣ್ಣ, ಎಪಿಎಂಸಿ ಮಾಜಿ ಸದಸ್ಯ ಉಕ್ಕಲಗೆರೆ ಬಸವಣ್ಣ, ಪುರಸಭಾ ಸದಸ್ಯರಾದ ಟಿ.ಎಂ.ನಂಜುಂಡಸ್ವಾಮಿ,

ಎನ್‌.ಸೋಮು, ಆರ್‌.ನಾಗರಾಜು, ಎಸ್‌.ಮದನ್‌ ರಾಜ್‌, ಬಾದಾಮಿ ಮಂಜು, ತಾಪಂ ಸದಸ್ಯರಾದ ಎಂ.ರಮೇಶ, ಕೆಬ್ಬೆ ನಾಗರಾಜು, ವರುಣಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಮುದ್ದೇಗೌಡ, ಎಂ.ಲಿಂಗರಾಜು, ಪಿಎಸಿಸಿಎಸ್‌ ನಿರ್ದೇಶಕ ಟಿ.ಎನ್‌.ಫ‌ಣೀಶ್‌ಕುಮಾರ್‌, ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜು, ಮಾಜಿ ಸದಸ್ಯ ಆಲಗೂಡು ನಾಗರಾಜು ಇತರರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಲಕ್ಷಾಂತರ ರೂಪಾಯಿ ವ್ಯಯಿಸಿ ಅಳವಡಿಸಿರುವ ರಬ್ಬರ್‌ ಕೋನ್‌ಗಳ ಪ್ರಸ್ತುತ ಸ್ಥಿತಿ ಹೇಗಿದೆ ಎಂದು ತಿಳಿಯುವ ನಿಟ್ಟಿನಲ್ಲಿ "ಸುದಿನ' ತಂಡವು ರಿಯಾಲಿಟಿ ಚೆಕ್‌ ನಡೆಸಿದೆ....

  • ಮನೆಯ ಸುತ್ತುಮುತ್ತಲಿನಲ್ಲಿ ಬರುವ ಪ್ರತಿಯೊಂದು ಹಕ್ಕಿಗೂ ಅದರದ್ದೇ ಆದ ಚೆಲುವು, ಬೆಡಗು, ಆಕರ್ಷಣೆ. ಅಶ್ವತ್ಥಮರದ ಎಲೆಗಳ ನಡುವೆ ಕುಳಿತಿರುವ ವಸಂತದ ಹಕ್ಕಿ ಕಣ್ಣಿಟ್ಟು...

  • ಭಾರತದ ಗೋಪರಂಪರೆಯಲ್ಲೂ ಹೈನುಗಾರಿಕೆ ತಳಿಗಳಲ್ಲಿ ಗೀರ್‌ ವಿಶಿಷ್ಟ ಸ್ಥಾನ. ಭಾರತೀಯ ಪರಂಪರೆಯಲ್ಲಿ ಹೆಚ್ಚು ಹಾಲು ಕೊಡುವ ತಳಿಗಳಲ್ಲಿ ಇದು ಎರಡನೆಯದು. ಗುಜರಾತಿನ...

  • ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜದಲ್ಲಿ ಶನಿವಾರ ಚರಂಡಿಗೆ ಬಿದ್ದು ಗಾಯಗೊಂಡಿದ್ದ ರಾಮಕುಂಜ ಗ್ರಾಮದ ಶಾರದಾನಗರ ಕಾಲನಿಯ ನಿವಾಸಿ...

  • ಮಡಿಕೇರಿ: ದಕ್ಷಿಣ ಕೊಡಗಿನ ವಿವಿಧಡೆ ಹುಲಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗುತ್ತಿರುವ ವಿಷಯ ಹಸಿರಾಗಿರು ವಾಗಲೇ ಬಿಟ್ಟಂಗಾಲ ಸಮೀಪದ ವಿ.ಬಾಡಗದಲ್ಲಿ ಹುಲಿ ಹೆಜ್ಜೆ...