ಪಾರಂಪರಿಕ ಕಟ್ಟಡ ಉಳಿಸಲು ದೊಡ್ಡಮಟ್ಟದ ಕೂಗು

ಪಾಲಿಕೆ ನಿಲುವಿಗೆ ಸಾರ್ವಜನಿಕರ ಆಕ್ರೋಶ• ಮೊದಲು ನವೀಕರಣಕ್ಕೆ ಮುಂದಾಗಿದ್ದ ಪಾಲಿಕೆ ನಂತರ ನೆಲಸಮಗೊಳಿಸಲು ಚಿಂತನೆ

Team Udayavani, Aug 23, 2019, 3:38 PM IST

mysuru-tdy-2

ಮೈಸೂರು: ನಗರದ ಹೃದಯ ಭಾಗದಲ್ಲಿರುವ ದೇವರಾಜ ಮಾರುಕಟ್ಟೆ ಮೈಸೂರು ನಗರದ ಪರಂಪರೆಯ ಹೆಗ್ಗುರುತುಗಳಲ್ಲಿ ಒಂದಾಗಿದ್ದು, ಇದನ್ನು ಉಳಿಸಿಕೊಳ್ಳಬೇಕು ಎಂಬ ದೊಡ್ಡಮಟ್ಟದ ಕೂಗು ಸಾರ್ವಜನಿಕ ವಲಯದಲ್ಲಿ ಮೂಡಿದೆ.

ಒಂದು ಶತಮಾನಕ್ಕಿಂತಲೂ ಹಳೆಯದಾದ ಕಟ್ಟಡವನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯ. ಒಂದು ವೇಳೆ ಆ ಕಟ್ಟಡವನ್ನು ನೆಲಸಮಗೊಳಿಸಿ, ಮತ್ತೆ ಹೊಸದೊಂದು ಕಟ್ಟಡ ನಿರ್ಮಾಣ ಮಾಡಿದರೆ ಮೈಸೂರು ನಗರ ಪರಂಪರೆಯ ನೋಟವನ್ನು ಕಳೆದುಕೊಳ್ಳಲಿದೆ ಎಂಬುದು ಪಾರಂಪರಿಕ ತಜ್ಞರವಾದ.

ಈ ಹಿಂದೆ ದೇವರಾಜ ಮಾರುಕಟ್ಟೆ ಶಿಥಿಲಾಗಿರುವುದನ್ನು ಮನಗಂಡು ಮೈಸೂರು ನಗರ ಪಾಲಿಕೆ ನವೀಕರಣಕ್ಕೆ ಮುಂದಾಗಿತ್ತು. ಈ ವೇಳೆ ಕೆಲಸವನ್ನೂ ಆರಂಭಿಸಿಯೂ ಆಗಿತ್ತು. ಕೆಲ ದಿನಗಳ ನಂತರ ನವೀಕರಣ ಕೆಲಸವನ್ನು ಸ್ಥಗಿತಗೊಳಿಸಿ, ಮಾರುಕಟ್ಟೆ ಕಟ್ಟಡವನ್ನು ಧ್ವಂಸಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಆಸಕ್ತಿ ವಹಿಸಿತು. ಪಾಲಿಕೆಯ ಈ ನಡೆ ಮಾರುಕಟ್ಟೆ ಬಾಡಿಗೆದಾರರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ನವೀಕರಣಕ್ಕಾಗಿ ಗುತ್ತಿಗೆ: ಮಾರುಕಟ್ಟೆಯ ಕೆಲವು ಭಾಗಗಳು ಶಿಥಿಲವಾಗಿರುವದನ್ನು ಗಮನಿಸಿ ಕಟ್ಟಡದ ನವೀಕರಣಕ್ಕಾಗಿ ನಗರ ಪಾಲಿಕೆಯು 2016 ಫೆ.18ರಂದು ವೆ. ಸವಾನಿ ಕನ್‌ಸ್ಟ್ರಕ್ಷನ್‌ ಸಂಸ್ಥೆಗೆ ಗುತ್ತಿಗೆಯನ್ನು ನೀಡಿತ್ತು. 1.34 ಕೋಟಿ ರೂ. ಕಾಮಗಾರಿ ಪೂರ್ಣಗೊಂಡ ಹಿನ್ನೆಲೆ 73.38 ಲಕ್ಷ ರೂ. ಹಣವನ್ನು ಈಗಾಗಲೇ ಸಂಸ್ಥೆಗೆ ಪಾವತಿಸಲಾಗಿದ್ದು, ಇನ್ನೂ 61.18 ಲಕ್ಷ ರೂ. ಬಾಕಿ ಇದೆ. ಈ ನಡುವೆ, ಆಗಸ್ಟ್‌ 28ರಂದು ಮಾರುಕಟ್ಟೆಯ ಉತ್ತರ ಭಾಗದ ಸ್ವಾಗತ ಕಮಾನು ಕುಸಿದು ಬಿದ್ದಿತ್ತು. ನಂತರ ಪಾಲಿಕೆ ಉತ್ತರ ದಿಕ್ಕಿನಲ್ಲಿದ್ದ ಎಲ್ಲಾ ಮಳಿಗೆಗಳನ್ನು ಧ್ವಂಸಗೊಳಿಸಿ, ವಾಪಾರವನ್ನು ಸ್ಥಗಿತಗೊಳಿಸಿತು. ಜೊತೆಗೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕುಸಿದು ಬಿದ್ದ ಮಾರುಕಟ್ಟೆ ಕಟ್ಟಡವನ್ನು ವೀಕ್ಷಿಸಿ ನವೀಕರಣ ಕೆಲಸವನ್ನು ಸ್ಥಗಿತಗೊಳಿಸುವಂತೆ ಸೂಚಿದ ಹಿನ್ನೆಲೆ ಕಾಮಗಾರಿ ಸ್ಥಗಿತವಾಗಿತ್ತು.

ಎರಡು ಸಮಿತಿ ರಚನೆ: ಕಟ್ಟಡವನ್ನು ಉಳಿಸಿಕೊಳ್ಳಬೇಕೋ ಅಥವಾ ನೆಲಸಮಗೊಳಿಸಿ ಮತ್ತೂಂದು ಕಟ್ಟಡ ಕಟ್ಟಬೇಕೊ ಎಂಬ ಬಗ್ಗೆ ಎರಡು ಸಮಿತಿಗಳನ್ನು ರಚಿಸಲಾಯಿತು. ಈ ಪೈಕಿ ಟಾಸ್ಕ್ಫೋರ್ಸ್‌ ಸಮಿತಿ ಕಟ್ಟಡವನ್ನು ಪರಿಶೀಲಿಸಿ, ತನ್ನ ವರದಿಯಲ್ಲಿ ಕಟ್ಟಡವನ್ನು ಧ್ವಂಸಗೊಳಿಸಿ, ನೂತನ ಕಟ್ಟಡ ಮರುನಿರ್ಮಾಣಕ್ಕೆ ಶಿಫಾರಸು ಮಾಡಿತು. ಆದರೆ, ಮತ್ತೂಂದು ಸಮಿತಿಯಾದ ಪಾರಂಪರಿಕ ತಜ್ಞರ ಸಮಿತಿ ಮಾರುಕಟ್ಟೆ ಕಟ್ಟಡ ಪಾರಂಪರಿಕ ಕಟ್ಟಡವಾಗಿದ್ದು, ಅದನ್ನು ಸಂರಕ್ಷಣೆ ಮಾಡಬೇಕಾಗಿದ್ದು, ಕಟ್ಟಡದ ನವೀಕರಣ ಕಾಮಗಾರಿಯನ್ನು ಮುಂದುವರಿಸಲು ಹೇಳಿತು. ಇದರಿಂದಾಗಿ ಎರಡು ರೀತಿಯ ಅಭಿಪ್ರಾಯಗಳು ವ್ಯಕ್ತವಾದವು.

ಈ ಬಗ್ಗೆ ಚರ್ಚೆ ನಡೆಸಿದ ಪಾಲಿಕೆ ಈ ಕಟ್ಟಡ ತುಂಬಾ ಹಳೆಯದಾಗಿದ್ದು, ನೆಲಸಮಗೊಳಿಸಿ, ಅದೇ ಜಾಗದಲ್ಲಿ ಪಾರಂಪರಿಕ ಶೈಲಿಯಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ನಿರ್ಣಯಿಸಿ ಪಾಲಿಕೆ ಸಾಮಾನ್ಯ ಸಭೆಯಲ್ಲಿನ ನಿರ್ಣಯವನ್ನು ಕೈಗೊಂಡು ರಾಜ್ಯ ಸರ್ಕಾರಕ್ಕೆ ಕಳುಹಿಸಿತು. ಇದರಿಂದ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆಗಳು ವ್ಯಕ್ತವಾದವು. ಇದಾದ ನಂತರ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದ್ದರು. ಆದರೂ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದೇ ತಟಸ್ಥವಾಯಿತು.

 

● ಸತೀಶ್‌ ದೇಪುರ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.