ಪ್ರವಾಸಿಗರಿಗೆ ಅಪೂರ್ಣ ಮಳಿಗೆಗಳ ದರ್ಶನ

Team Udayavani, Oct 10, 2022, 4:12 PM IST

ಪ್ರವಾಸಿಗರಿಗೆ ಅಪೂರ್ಣ ಮಳಿಗೆಗಳ ದರ್ಶನ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ದಸರಾ ವಸ್ತುಪ್ರದರ್ಶನ ಉದ್ಘಾಟನೆಗೊಂಡು 15 ದಿನಗಳಾದರೂ ಪ್ರವಾಸಿಗರಿಗೆ ಅಪೂರ್ಣಗೊಂಡ ಮಳಿಗೆಗಳು ದರ್ಶನ ನೀಡುತ್ತಿವೆ. ನವರಾತ್ರಿ ಮತ್ತು ವಿಜಯ ದಶಮಿ ಮುಕ್ತಾಯಗೊಂಡು ಆರು ದಿನಗಳಾದರು ವಸ್ತುಪ್ರದರ್ಶನ ಆವರಣದಲ್ಲಿ ರಾಜ್ಯದ ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿಯಿಂದ ಆರಂಭವಾಗಬೇಕಿದ್ದ ಮಳಿಗೆಗಳು ಇನ್ನೂ ನಿರ್ಮಾಣ ಹಂತದಲ್ಲಿಯೇ ಇರುವುದು ಪ್ರವಾಸಿಗರಿಗೆ ಬೇಸರ ತರಿಸಿದೆ. ‌

ಜಿಲ್ಲೆ, ಹೊರ ಜಿಲ್ಲೆ ಹಾಗೂ ವಿವಿಧ ಭಾಗಗಳಿಂದ ದಸರಾ ವಸ್ತುಪ್ರದರ್ಶನಕ್ಕೆ ಆಗಮಿಸುವ ಪ್ರವಾಸಿಗರಿಗೆ ಫ‌ುಡ್‌ ಕೋರ್ಟ್‌, ಅಮ್ಯೂಸ್ಮೆಂಟ್ ಪಾರ್ಕ್‌ ಹಾಗೂ ಗೃಹೋಪಯೋಗಿ ವಸ್ತುಗಳ ಮಾರಾಟ ಮಳಿಗೆಗಳ ಸೇವೆ ಲಭ್ಯವಿದೆಯೇ ಹೊರತು ಸರ್ಕಾರಿ ಇಲಾಖೆ ಮತ್ತು ಜಿಪಂಗಳಿಂದ ನಿರ್ಮಾಣವಾಗುವ ಮಳಿಗೆಗಳ ಮಾಹಿತಿ ಇಲ್ಲವಾಗಿದೆ. ಅದ್ಧೂರಿ ದಸರಾ ಹಿನ್ನೆಲೆ ವಸ್ತುಪ್ರದರ್ಶನದಲ್ಲಿಯೂ ವಿಶಿಷ್ಟವಾಗಿ ಆಯೋಜಿಸಲು ಚಿಂತನೆ ನಡೆಸಿ, ಸರ್ಕಾರದ ವಿವಿಧ ಇಲಾಖೆಗಳು, ಜಿಪಂ, ನಿಗಮ-ಮಂಡಳಿಗಳ 41 ಮಳಿಗೆ ಹಾಗೂ ಇತರೆ 250 ಮಳಿಗೆಗಳನ್ನು ವಸ್ತು ಪ್ರದರ್ಶನದಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿತ್ತು. ಈ ಪೈಕಿ ವಾಣಿಜ್ಯ ಮಳಿಗೆಗಳು ಈಗಾಗಲೇ ಆರಂಭವಾಗಿದ್ದು, ಫ‌ುಡ್‌ಕೋರ್ಟ್‌, ಬಟ್ಟೆ ಮಾರಾಟ ಮಳಿಗೆ, ಅಮ್ಯೂಸ್‌ಮೆಂಟ್‌ ಪಾರ್ಕ್‌ ಸೇರಿದಂತೆ ಹಲವು ಮಳಿಗೆಗಳು ತಲೆ ಎತ್ತಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ವಿವಿಧ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ, ಸರ್ಕಾರದ ವಿವಿಧ ಇಲಾಖೆಗಳು ಇನ್ನು ಕಾರ್ಯಾರಂಭ ಮಾಡದಿರುವುದು ಪ್ರವಾಸಿಗರಿಗೆ ನಿರಾಸೆ ತರಿಸಿದೆ.

ದಸರಾ ಮಹೋತ್ಸವ ಆರಂಭಕ್ಕೂ 15 ದಿನಗಳ ಮುನ್ನ ಸಂಪೂರ್ಣ ಮಳಿಗೆಗಳೊಂದಿಗೆ ವಸ್ತು ಪ್ರದರ್ಶನ ಉದ್ಘಾಟನೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಹಾದಿಯಾಗಿ ಅಧಿಕಾರಿಗಳು ತಿಳಿಸಿದ್ದರೂ ಅದು ಸಾಧ್ಯವಾಗಲಿಲ್ಲ. ದಸರಾ ಮಹೋತ್ಸವದ ಉದ್ಘಾಟನೆ ದಿನವೇ ಅಪೂರ್ಣ ವಸ್ತುಪ್ರದರ್ಶನ ಉದ್ಘಾಟನೆಗೊಳ್ಳುವ ಮೂಲಕ ಎಂದಿನಂತೆ ಹಳೇ ಚಾಳಿ ಮುಂದುವರಿದಿದೆ.

ಬೆರಳೆಣಿಕೆಯಷ್ಟು ಮಳಿಗೆ ಮಾತ್ರ ಆರಂಭ: ಸರ್ಕಾರದ 41 ಇಲಾಖೆ, ಜಿಪಂ, ನಿಗಮ-ಮಂಡಳಿಗಳ ಮಳಿಗೆಗಳ ಪೈಕಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಳಿಗೆ, ಕೈಗಾರಿಕ ಮತ್ತು ವಾಣಿಜ್ಯ ಇಲಾಖೆ ಜಿಲ್ಲಾ ಕೈಗಾರಿಕಾ ಕೇಂದ್ರ, ಮೈಸೂರು ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ, ಅರಣ್ಯ ಇಲಾಖೆ ಸೇರಿದಂತೆ ಕೆಲ ಇಲಾಖೆಯ ಮಳಿಗೆಗಳು ಮಾತ್ರ ಸಂಪೂರ್ಣ ಪೂರ್ಣಗೊಂಡು ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಿವೆ. ಕಾಪೋಸ್ಟ್‌ ಅಭಿವೃದ್ಧಿ ನಿಗಮ, ಮಂಡ್ಯ ಜಿಲ್ಲಾ ಪಂಚಾಯಿತಿ, ಮೈಲಾಕ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೃಷಿ ಇಲಾಖೆ, ಕಾವೇರಿ ನೀರಾವರಿ ನಿಗಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಲ ಸಂಪನ್ಮೂಲ ಇಲಾಖೆ ಸೇರಿದಂತೆ ಇನ್ನು ಹತ್ತಾರು ಇಲಾಖೆ, ನಿಗಮ, ಮಂಡಳಿಗಳ ಮಳಿಗೆಗಳು ಸಿದ್ಧವಾಗಬೇಕಿದೆ.

ಮಾಹಿತಿ ನೀಡುವ ಉದ್ದೇಶ: ದಸರಾ ವಸ್ತು ಪ್ರದರ್ಶನದಲ್ಲಿ ವಿವಿಧ ಇಲಾಖೆ, ಜಿಪಂ, ನಿಗಮ-ಮಂಡಳಿಗಳ ಮಳಿಗೆ ತೆರೆದು ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ. ಆಯಾಯಾ ಇಲಾಖೆಗಳು, ನಿಗಮ ಹಾಗೂ ಮಂಡಳಿಗಳು ತಮ್ಮ ಇಲಾಖೆಯ ಪ್ರಮುಖ ಯೋಜನೆಗಳ ಮಾಹಿತಿಗಳನ್ನು ವಸ್ತು ಪ್ರದರ್ಶನ ಆವರಣದಲ್ಲಿ ತೆರೆಯುವ ಮಳಿಗೆಗಳಲ್ಲಿ ಪ್ರದರ್ಶನ ಮಾಡಲಾಗುತ್ತದೆ. ದಸರಾ ವಸ್ತು ಪ್ರದರ್ಶನಕ್ಕೆ ಆಗಮಿಸುವ ಸಾರ್ವಜನಿಕರ ಸದರಿ ಮಳಿಗೆಗಳಿಗೆ ಭೇಟಿ ನೀಡುವ ಮೂಲಕ ಸರ್ಕಾರದ ಸಕಲ ಯೋಜನೆಗಳ ಬಗ್ಗೆಯೂ ತಿಳಿದುಕೊಳ್ಳುತ್ತಿದ್ದರು. ವಸ್ತು ಪ್ರದರ್ಶನ ಉದ್ಘಾಟನೆಗೊಂಡು ಈಗಾಗಲೇ 15 ದಿನ ಕಳೆದರೂ ಬಹುತೇಕ ಸರ್ಕಾರಿ ಇಲಾಖೆಗಳ ಮಳಿಗೆಗಳು ಕಾರ್ಯಾರಂಭ ಮಾಡಿಲ್ಲ. ಇನ್ನೂ ಸಿದ್ಧತಾ ಹಂತದಲ್ಲಿಯೇ ಇವೆ. ಒಟ್ಟಾರೆ ಎಲ್ಲ ಸರ್ಕಾರಿ ಮಳಿಗೆಗಳು ಉದ್ಘಾಟನೆಯಾಗಲೂ ಕನಿಷ್ಠ 20ರಿಂದ 25 ದಿನಗಳು ಬೇಕಿದೆ.

ದಸರಾ ವಸ್ತು ಪ್ರದರ್ಶನದಲ್ಲಿ ಸರ್ಕಾರದ ವಿವಿಧ ಇಲಾಖೆಗಳು, ಜಿಪಂ, ನಿಗಮ-ಮಂಡಳಿಗಳ 41 ಮಳಿಗೆ ಸ್ಥಾಪನೆಗೆ ಅವಕಾಶ ನೀಡಲಾಗಿದ್ದು, ಇದರಲ್ಲಿ ಬಹುತೇಕ ಮಳಿಗೆಗಳು ಸಿದ್ಧಗೊಂಡಿವೆ. ಉಳಿದ ಮಳಿಗೆಗಳು ಕೂಡ ಆದಷ್ಟು ಬೇಗ ಪೂರ್ಣಗೊಳ್ಳಲಿವೆ. ವಾಣಿಜ್ಯ ಮಳಿಗೆಗಳನ್ನು ಪೂರ್ಣಗೊಂಡು ಸೇವೆ ನೀಡುತ್ತಿವೆ. ● ಕೆ.ರುದ್ರೇಶ್‌, ಸಿಇಒ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ.

– ಸತೀಶ್‌ ದೇಪುರ

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.