ಅಂಬೇಡ್ಕರ್‌ ಅಪ್ರತಿಮ ನಾಯಕ: ಮಹೇಶ್‌


Team Udayavani, Apr 15, 2019, 3:00 AM IST

ambedkar

ಎಚ್‌.ಡಿ.ಕೋಟೆ: ತುಂಬಾ ಕಷ್ಟದಲ್ಲಿ ವಿದ್ಯಾಭ್ಯಾಸ ಮಾಡಿ ಹಲವಾರು ಪದವಿ ಪಡೆಯುವುದರ ಜೊತೆಗೆ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನ ಕೊಟ್ಟ ದೇಶ ಕಂಡ ಅಪ್ರತಿಮ ನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಎಂದು ತಹಶೀಲ್ದಾರ್‌ ಮಹೇಶ್‌ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಮಿನಿವಿಧಾನಸೌಧದ ಸಭಾಂಗಣದಲ್ಲಿ ಭಾನುವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 129ನೇ ಜಯಂತಿಯಲ್ಲಿ ಮಾತನಾಡಿದರು.

ಆದಿ ಕರ್ನಾಟಕ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಮುದ್ದುಮಲ್ಲಯ್ಯ ಮಾತನಾಡಿ, ಭಾರತ ದೇಶದ ಸಾಮಾಜಿಕ ಅವ್ಯವಸ್ಥೆ ಕೂಪದಲ್ಲಿ ಹುಟ್ಟಿದ ಮಹಾನ್‌ ಯೋಗಿ ಡಾ.ಬಿ.ಆರ್‌.ಅಂಬೇಡ್ಕರ್‌, ದೇಶದಲ್ಲಿ ಹೆಚ್ಚಿದ್ದ ಜಾತಿ ವ್ಯವಸ್ಥೆ ಹಾಗೂ

ಸಾಮಾಜಿಕ ಅಸಮಾನತೆಯಿಂದಾಗಿ ಬಾಬಾ ಸಾಹೇಬರು ತಮ್ಮ ಬಾಲ್ಯದಲ್ಲಿಯೇ ಅನೇಕ ಅವಮಾನ, ಅಪಮಾನಗಳಿಗೆ ಒಳಗಾಗಿದ್ದರು. ತಾವೂ ಎಲ್ಲ ನೋವುಗಳನ್ನು ಅನುಭವಿಸಿದ ಪ್ರತಿ ರೂಪವಾಗಿ ಭಾರತ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನ ಬರೆದುಕೊಟ್ಟರು ಎಂದು ತಿಳಿಸಿದರು.

ಸಂವಿಧಾನ ಬರೆಯುವಾಗಲೂ ಹಲವಾರು ಟೀಕೆ ಮಾಡಿದ್ದಲ್ಲದೆ, ಓರ್ವ ಅಸ್ಪೃಶ್ಯ ಸಂವಿಧಾನ ಬರೆಯುತ್ತಾನೆ ಎಂದು ಅಂದಿನ ಕೆಲವು ರಾಜಕಾರಣಿಗಳು ಅಡ್ಡಿಪಡಿಸಿದರೂ, ದೇಶದ ಕೆಲವು ಮಹನೀಯರ ಸಹಕಾರದಲ್ಲಿ 2 ವರ್ಷ 11 ತಿಂಗಳು 18 ದಿನ ಪ್ರಪಂಚದ ಅನೇಕ ದೇಶಗಳ ಸಂವಿಧಾನ ಅಧ್ಯಯನ ಮಾಡಿ ಅವಿರತವಾಗಿ ಶ್ರಮಿಸುವ ಮೂಲಕ ಪ್ರಪಂಚವೇ ಮೆಚ್ಚುವ ಶ್ರೇಷ್ಠ ಸಂವಿಧಾನ ಬರೆದು ಅರ್ಪಿಸಿದರು ಎಂದರು.

ಆದಿ ಕರ್ನಾಟಕ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಮುದ್ದುಮಲ್ಲಯ್ಯ ಮಾತನಾಡಿ, ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಏನಾದರೂ ದೇಶಕ್ಕೆ ಸಂವಿಧಾನ ಬರೆಯದಿದ್ದರೇ, ದೇಶ ಇಂದು ಇಷ್ಟು ಅಭಿವೃದ್ಧಿ ಹೊಂದಲು ಸಾಧ್ಯವೇ ಇರುತ್ತಿರಲಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದಸಂಸ ತಾಲೂಕು ಸಂಚಾಲಕ ಚಾ.ಶಿವಕುಮಾರ್‌, ಆನಗಟ್ಟಿ ದೇವರಾಜ್‌, ಜೀವಿಕ ಬಸವರಾಜು, ಕೆ.ಎಂ.ಹಳ್ಳಿ ಸಣ್ಣಕುಮಾರ್‌, ಸೋಮಣ್ಣ, ಚೌಡಳ್ಳಿ ಜವರಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಸುಂದರ್‌, ಲೋಕೋಪಯೋಗಿ ಇಲಾಖೆ ಎಇಇ ಶಿವಣ್ಣ, ಉಪತಹಶೀಲ್ದಾರ್‌ ಆನಂದ್‌, ಸುನೀಲ್‌, ಸಮಾಜ ಕಲ್ಯಾಣಾಧಿಕಾರಿ ನಿಜಗುಣಮೂರ್ತಿ, ಶಿವರಾಜು, ಗೋವಿಂದರಾಜು, ಲತಾ ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.