Leader of the Opposition ಸ್ಥಾನಕ್ಕೆ ನಾನೂ ಆಕಾಂಕ್ಷಿ: ಡಾ. ಅಶ್ವತ್ಥ ನಾರಾಯಣ್

ಮೈತ್ರಿಯಾದ ಮಾತ್ರಕ್ಕೆ ಜೆಡಿಎಸ್ ಗೆ ವಿಪಕ್ಷ ನಾಯಕ ಸ್ಥಾ‌ನ ಕೊಡಬೇಕೆಂದೇನಿಲ್ಲ...

Team Udayavani, Nov 11, 2023, 3:46 PM IST

dr-ashwat-narayan

ಮೈಸೂರು: ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ‘ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ನಾನೂ ಆಕಾಂಕ್ಷಿ’ ಎಂದು ಶಾಸಕ, ಮಾಜಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ್ ಶನಿವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ”ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಆಗಿದೆ. ಸೂಕ್ತವಾದ ವ್ಯಕ್ತಿಯನ್ನು ವಿರೋಧ ಪಕ್ಷದ ನಾಯಕರನ್ನಾಗಿ ನಮ್ಮ ನಾಯಕರು ನೇಮಕ ಮಾಡುತ್ತಾರೆ.ವಿಧಾನ ಸಭೆಯಲ್ಲಿರೋ 66 ಜನ ಶಾಸಕರಿದ್ದಾರೆ.ಎಲ್ಲರೂ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.ನಾನೂ ಕೂಡ ಆಕಾಂಕ್ಷಿಯಾಗಿದ್ದೇನೆ‌”ಎಂದರು.

”ಜೆಡಿಎಸ್ ಜತೆ ಮೈತ್ರಿ ಆಗಿರಬಹುದು.ಅಂದ ಮಾತ್ರಕ್ಕೆ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾ‌ನ ಕೊಡಬೇಕು ಅಂತಾ ಏನೂ ಇಲ್ಲ‌.ವಿಧಾನಸಭೆಯಲ್ಲಿ ಬಿಜೆಪಿ ಕಾನೂನಾತ್ಮಕವಾಗಿ ವಿರೋಧ ಪಕ್ಷ.‌ನಮ್ಮಲ್ಲೇ ಬೇಕಾದಷ್ಟು ನಾಯಕರಿದ್ದಾರೆ” ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ ವಿಚಾರಕ್ಕೆ ಪ್ರತಿಕ್ರಿಯಿಸಿ, ”ನಾನು ಹೃದಯ ತುಂಬಿ ಸ್ವಾಗತ ಮಾಡುತ್ತೇನೆ. ವಿಜಯೇಂದ್ರ ಯುವಕ ಇದ್ದಾರೆ.ಪಕ್ಷವನ್ನು ಸಮರ್ಥವಾಗಿ ಕಟ್ಟುತ್ತಾರೆ. ಸಾಕಷ್ಟು ಜನ ಆಕಾಂಕ್ಷಿಗಳಿದ್ದರು. ಅದರಲ್ಲಿ ಹಿರಿಯರೂ ಇದ್ದರು.ಆದರೆ ಕಿರಿಯರಿಗೆ ಕೊಡಬಾರದು ಅಂತೇನಿಲ್ಲ.ವಿ.ಸೋಮಣ್ಣ ಪ್ರಭಾವಿ ನಾಯಕರು, ಅವರಿಗೆ ಎಲ್ಲಾ ರೀತಿಯ ಅರ್ಹತೆ ಇತ್ತು.ಸಿ.ಟಿ.ರವಿ ಅವರಿಗೂ ಪಕ್ಷ ಅನೇಕ ಹುದ್ದೆಗಳನ್ನ ನೀಡಿದೆ. ಒಂದೇ ಹುದ್ದೆ ಎಲ್ಲರಿಗೂ ಕೊಡಲಿಕ್ಕೆ ಆಗುವುದಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿ ಇರಬೇಕಾಗುತ್ತದೆ” ಎಂದರು.

ಲೋಕಸಭಾ ಚುನಾವಣೆ ಬಳಿಕ ಸರ್ಕಾರ ಪತನ ಆಗುತ್ತದೆ ಅನ್ನೋ ವಿಚಾರಕ್ಕೆ ಪ್ರತಿಕ್ರಿಯಿಸಿ, ”ನಾವೇನು ಪತನ ಮಾಡುವುದಿಲ್ಲ.ಅವರ ಪಕ್ಷದವರಿಂದಲೇ ಸರ್ಕಾರ ಬೀಳಲಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡಿ ಶಕ್ತಿ ನೀಡಲಿ.ಆಡಳಿತ ನಡೆಸಿಕೊಂಡು ಹೋಗಲು ದಾರಿ ತೋರಿಸಲಿ.ಅವರ ಪಕ್ಷದಲ್ಲೇ ಸಾಕಷ್ಟು ಒಡಕುಗಳಿವೆ.ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಕಾಂಕ್ಷಿಗಳ ದಂಡೆ ಇದೆ.ನಾನು ಸಿಎಂ ಆಗುತ್ತೇನೆ ಎಂದು ಎಲ್ಲರೂ ಹೇಳುತ್ತಾರೆ .ಅವರ ಪಕ್ಷದಲ್ಲಿ ಅಸಮಾಧಾನಿತರು ಇದ್ದಾರೆ.ಸಿಎಂ ಸಿದ್ದರಾಮಯ್ಯರನ್ನ ಎಲ್ಲರು ಸೇರಿ ಉಡೀಸ್ ಮಾಡುತ್ತಿದ್ದಾರೆ.ಅವರೇ ಆಯ್ಕೆ ಮಾಡಿಕೊಂಡ ಮಂತ್ರಿಗಳು ಅವರ ಮಾತನ್ನೇ ಕೇಳುತ್ತಿಲ್ಲ.ಅಂತವರನ್ನ ಸಚಿವ ಸಂಪುಟದಿಂದ ಆಚೆ ಹಾಕಿದರೆ ಒಳಿತಾಗಬಹುದು” ಎಂದು ಸಲಹೆ ನೀಡಿದರು.

ಒಳ್ಳೆಯ ಬೆಳವಣಿಗೆ
”ಎಲ್ಲಾ ಕ್ಷೇತ್ರದಲ್ಲೂ ಯುವಕರಿಗೆ ಮಣೆ ಹಾಕಲಾಗುತ್ತಿದೆ.ಬಿಜೆಪಿ ಯುವ ನಾಯಕನಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವುದು ಒಳ್ಳೆಯ ಬೆಳವಣಿಗೆ. ವಿಜಯೇಂದ್ರ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಗಿದ್ದರು.ರಾಜ್ಯ ಉಪಾಧ್ಯಕ್ಷರಾಗಿದ್ದವರು.ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ.ಅವರ ಅನುಭವ ಮಾರ್ಗದರ್ಶನ ವಿಜಯೇಂದ್ರಗೆ ಸಿಗುವುದರಿಂದ ಸಂಘಟನೆಯಲ್ಲಿ ಯಶಸ್ವಿ ಆಗುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಮೋದಿಯವರ ಹೆಸರಿನಲ್ಲೇ ನಾವೆಲ್ಲರೂ ಗೆದ್ದು ಬಂದಿದ್ದೇವೆ. ಮುಂದಿನ ಚುನಾವಣೆಯಲ್ಲಿಯೂ ಮೋದಿಯವರ ಹೆಸರಿನಲ್ಲೇ ಗೆಲ್ಲಲಿದ್ದೇವೆ.ಮುಂದಿನ ಚುನಾವಣೆಯಲ್ಲೂ ಬಿಜೆಪಿ ಬಹುಮತ ಗಳಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ” ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು.

ಟಾಪ್ ನ್ಯೂಸ್

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.