ಬಜಾಜ್‌ ಚೇತಕ್‌ನಲ್ಲಿ ದೇಶ ಪರ್ಯಟನೆ ನಡೆಸುತ್ತಿದ್ದ ವ್ಯಕ್ತಿಗೆ ಕಾರು ಗಿಫ್ಟ್!


Team Udayavani, Oct 24, 2019, 3:00 AM IST

bajaj-chet

ಮೈಸೂರು: ತನ್ನ ತಾಯಿ ಆಸೆ ಈಡೇರಿಸುವ ಸಲುವಾಗಿ ದ್ವಿಚಕ್ರ ವಾಹನದಲ್ಲಿ ತಾಯಿಯೊಂದಿಗೆ ದೇಶ ಪರ್ಯಟನೆ ನಡೆಸುತ್ತಿರುವ ವ್ಯಕ್ತಿಗೆ ಮಹೀಂದ್ರಾ ಕಂಪನಿ ಕಾರನ್ನು ಉಡುಗೊರೆಯಾಗಿ ನೀಡುವುದಾಗಿ ಘೋಷಿಸಿದೆ. ಮೈಸೂರಿನ ಕೃಷ್ಣ ಕುಮಾರ್‌ ತಮ್ಮ ತಾಯಿ ಚೂಡಾರತ್ನ ಅವರು ಬೇಲೂರು, ಹಳೆಬೀಡು ದೇಗುಲ ನೋಡಲಾಗಲಿಲ್ಲ ಎಂಬ ಬೇಸರ ವ್ಯಕ್ತಪಡಿಸಿದ ಹಿನ್ನೆಲೆ ತಮ್ಮ ಬಳಿ ಇದ್ದ ದ್ವಿಚಕ್ರ ವಾಹನದಲ್ಲಿ ತಾಯಿಯನ್ನೂ ಕೂರಿಸಿಕೊಂಡು ದೇಶದ ವಿವಿಧ ರಾಜ್ಯಗಳಲ್ಲಿರುವ ಯಾತ್ರಾ ಸ್ಥಳಗಳಿಗೆ ಕರೆದುಕೊಂಡು ಹೋಗಿ ಅವರ ಆಸೆ ಪೂರೈಸುತ್ತಿದ್ದಾರೆ.

ಮೂಲತಃ ಮೈಸೂರು ಜಿಲ್ಲೆಯವರಾಗಿರುವ ಕೃಷ್ಣಕುಮಾರ್‌ ತಾಯಿ ಬೇಲೂರು, ಹಳೇಬೀಡು ನೋಡಲು ಆಗಲಿಲ್ಲ ಎಂದು ಮಗನ ಮುಂದೆ ಹೇಳಿದ್ದರಂತೆ. ಅದಕ್ಕೆ ಮನನೊಂದ ಕೃಷ್ಣ ಕುಮಾರ್‌ ತನ್ನ ತಾಯಿಗೆ ಬೈಕ್‌ನಲ್ಲೇ ಪರ್ಯಟನೆ ಮಾಡಿಸಿದ್ದಾರೆ. ಪರ್ಯಟನೆಗೆ ನೆರವಾದದ್ದು ಕೃಷ್ಣಕುಮಾರ್‌ ಅವರ ತಂದೆ ಬಳಸುತ್ತಿದ್ದ ಬಜಾಜ್‌ ಚೇತಕ್‌ ಬೈಕ್‌.  ತಂದೆ ಬಳಿಕ ಅವರ ನೆನಪಿಗಾಗಿ ಆ ಬೈಕ್‌ನ್ನು ಕೃಷ್ಣಕುಮಾರ್‌ ಇಟ್ಟುಕೊಂಡಿದ್ದರು.

ಅದೇ ಬೈಕಿನಲ್ಲಿ ತಾಯಿ-ಮಗ ದೇಶದಲ್ಲಿನ ದೇವಾಲಯಗಳನ್ನು ಸುತ್ತಿ ಬಂದಿದ್ದಾರೆ. 2018ರ ಜ.16ರಿಂದ ಚೇತಕ್‌ ಸ್ಕೂಟರ್‌ ಮೇಲೆ ಸವಾರಿ ಆರಂಭಿಸಿದ ಅವರು ಆಂಧ್ರ, ಕೇರಳ, ತುಳುನಾಡು, ಕರ್ನಾಟಕದ ಪ್ರಮುಖ ದೇಗುಲಗಳ ದರ್ಶನ ಮಾಡಿದ್ದಾರೆ. ಅಲ್ಲದೇ ಬನವಾಸಿ, ರಾಮ ಮಂದಿರ, ಉತ್ತರಾಧಿ ಮಠ ಹೀಗೆ 48,100 ಕಿ.ಮೀ. ಪ್ರಯಾಣ ಮಾಡಿದ್ದಾರೆ. ಪ್ರಯಾಣಕ್ಕಾಗಿ ಬೇಕಾಗಿರುವ ಅಗತ್ಯ ಸಾಮಗ್ರಿಗಳನ್ನು ಬೈಕ್‌ಗೆ ಕಟ್ಟಿಕೊಂಡು, ಯಶಸ್ವಿಯಾಗಿ ಯಾತ್ರೆ ಮುಗಿಸಿದ್ದಾರೆ.

ಮಗನ ಈ ಕಾರ್ಯಕ್ಕೆ ತಾಯಿ ಚೂಡಾರತ್ನ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮಗ ನನಗಾಗಿ ಮದುವೆ ಮಾಡಿಕೊಳ್ಳಲಿಲ್ಲ. ಕೃಷ್ಣ ಕುಮಾರನೇ ನನಗೆ ಮಗ ಮತ್ತು ಮಗಳಾಗಿ ನೋಡಿಕೊಳ್ಳುತ್ತಿದ್ದಾನೆ. ಪ್ರಯಾಣದಲ್ಲಿ ಇದುವರೆಗೂ ಯಾವುದೇ ತೊಂದರೆ ಆಗಿಲ್ಲ. ಇಂತಹ ಮಗನನ್ನು ಎಲ್ಲರಿಗೂ ದೇವರು ಕರುಣಿಸಲಿ ಎಂದು ಸಂಸತದಿಂದ ಹೇಳುತ್ತಾರೆ.

ಮಹಿಂದ್ರಾ ಕಂಪನಿ ಗಿಫ್ಟ್: ಕೃಷ್ಣಕುಮಾರ್‌ ಅವರ ಬೈಕ್‌ ಜರ್ನಿ ಬಗ್ಗೆ ತಿಳಿದುಕೊಂಡ ಮಹೀಂದ್ರ ಸಂಸ್ಥೆಯ ಆನಂದ್‌ ಮಹೀಂದ್ರಾ, ಕೃಷ್ಣಕುಮಾರ್‌ ಅವರ ಕಾರ್ಯಕ್ಕೆ ಮನಸೋತು ಕಾರನ್ನು ಉಡುಗೊರೆಯಾಗಿ ನೀಡುವುದಾಗಿ ಟ್ವೀಟ್‌ ಮಾಡಿದ್ದಾರೆ.

ಯಾತ್ರೆ ಬಗ್ಗೆ ತಿಳಿದದ್ದು ಹೇಗೆ?: ಕೃಷ್ಣ ಕುಮಾರ್‌ ಅವರು ಮಾಧ್ಯಮವೊಂದಕ್ಕೆ ತಮ್ಮ ಕಾರ್ಯದ ಕುರಿತು ಹೇಳಿಕೆ ನೀಡಿದ್ದು, ಈ ವೀಡಿಯೋವನ್ನು ಟ್ವೀಟಿಗರೊಬ್ಬರು ತಮ್ಮ ಖಾತೆಯಲ್ಲಿ ಟ್ವೀಟ್‌ ಮಾಡಿದ್ದರು. ಈ ಟ್ವೀಟನ್ನು ರಿಟ್ವೀಟ್‌ ಮಾಡಿರುವ ಆನಂದ್‌ ಮಹೀಂದ್ರಾ, ಕೃಷ್ಣಕುಮಾರ್‌ ನನ್ನನ್ನು ಸಂಪರ್ಕ ಮಾಡಿದರೆ ಕಾರನ್ನು ಗಿಫ್ಟ್ ನೀಡುವುದಾಗಿ ತಿಳಿಸಿದ್ದು, ಮುಂದಿನ ತಮ್ಮ ಪ್ರಯಾಣವನ್ನು ಕಾರಿನಲ್ಲಿ ನಡೆಸಬಹುದು ಎಂದು ಹೇಳಿದ್ದಾರೆ.

ನನ್ನ ತಾಯಿಯೇ ನನಗೆ ಎಲ್ಲಾ. ಅವರ ಆಸೆ ಈಡೇರಿಸುವುದೇ ನನ್ನ ಕಾಯಕ. ಒಮ್ಮೆ ಅವರು ನನ್ನ ಬಳಿ ಬೇಲೂರು ಹಳೇಬೀಡು ದೇವಸ್ಥಾನ ನೋಡಲು ಆಗಲಿಲ್ಲ ಎಂದು ನೋವು ತೋಡಿಕೊಂಡಿದ್ದರು. ಅಂದೇ ಅವರ ಆಸೆ ಪೂರೈಸಬೇಕು ಎಂದು ನಿರ್ಧರಿಸಿದೆ. ಇಲ್ಲಿಯವರೆಗೆ ಅನೇಕ ರಾಜ್ಯಗಳಿಗೆ ಭೇಟಿ ನೀಡಿದ್ದೇವೆ. ಮುಂದೆಯೂ ಅವರ ಇಷ್ಟವಾದ ಸ್ಥಳಗಳಿಗೆ ಭೇಟಿ ನೀಡುತ್ತೇವೆ.
-ಕೃಷ್ಣಕುಮಾರ್‌, ಮೈಸೂರು

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.