ರೈತರ ಸಾಲ ಮನ್ನಾಕ್ಕೆ ಬದ್ಧರಾಗಿರಿ

Team Udayavani, May 23, 2018, 2:03 PM IST

m4-raitara.jpg

ತಿ.ನರಸೀಪುರ: ಚುನಾವಣಾ ವೇಳೆ ನೀಡಿರುವ ಆಶ್ವಾಸನೆಗಳನ್ನು ತಪ್ಪದೇ ರೈತರ ಸಾಲ ಮನ್ನಾ ಮಾಡಲು ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬದ್ಧರಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಆಗ್ರಹಿಸಿದರು.

ತಾಲೂಕಿನ ಶಂಭುದೇವನಪುರ ಗ್ರಾಮದಲ್ಲಿ ರೈತ ಸಂಘಟನೆಯ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಹಾಗೂ ಜೆಡಿಎಸ್‌ ರೈತರ ಮತ ಸೆಳೆಯಲು ತಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದವು. ಈಗ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಜ್ಯದ ರೈತರು ಸಾಲ ಮನ್ನಾ ಮಾಡುವ ಬಗ್ಗೆ ಅಪಾರ ನಿರೀಕ್ಷೆಯಲ್ಲಿದ್ದಾರೆ.

ಮಾತಿಗೆ ತಪ್ಪದೇ ರೈತರ ಸಾಲ ಮನ್ನಾ ಮಾಡಲು ಕುಮಾರಸ್ವಾಮಿ ಬದ್ಧರಾಗಬೇಕು ಎಂದು ಹೇಳಿದರು. ರಾಜ್ಯ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳಿಂದ 2 ಸಾವಿರ ಕೋಟಿ ಹಣ ಬಾಕಿ ಪಾವತಿಯಾಗಬೇಕಿದ್ದು, ಮುಖ್ಯಮಂತ್ರಿಗಳು ಕೂಡಲೇ ಈ ಬಗ್ಗೆ ಕಾರ್ಖಾನೆ ಮಾಲಿಕರಿಗೆ ಸೂಚನೆ ನೀಡಿ ರೈತರ ಹಣ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಪಿ. ಸೋಮಶೇಖರ್‌ ಮಾತನಾಡಿ, ರೈತರು ಒಗ್ಗಟ್ಟಿನಿಂದ ಸಂಘಟಿತರಾದರೇ ಯಾವುದೇ ಅನ್ಯಾಯವನ್ನು ಪ್ರತಿಭಟಿಸಿ ನ್ಯಾಯ ಪಡೆಯಲು ಸಾಧ್ಯ. ಜತೆಗೆ ಪ್ರತಿ ಗ್ರಾಮದಲ್ಲೂ ಸಂಘಟನೆಯ ಘಟಕಗಳು ಪ್ರಾರಂಭವಾಗಿ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಸಲಹೆ ಮಾಡಿದರು. 

ಇದೇ ವೇಳೆ ರೈತರಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಹಸಿರು ಶಾಲು ನೀಡಲಾಯಿತು. ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್‌, ರಾಜ್ಯ ಕಾರ್ಯದರಿ ಅತ್ತಹಳ್ಳಿ ದೇವರಾಜು, ಕಿರಗಸೂರು ಶಂಕರ್‌, ಹಳ್ಳಿಕೆರೆಹುಂಡಿ ಭಾಗ್ಯರಾಜ್‌, ಪರಶಿವಮೂರ್ತಿ, ಹಾಡ್ಯ ರವಿ, ನಂಜುಂಡಸ್ವಾಮಿ, ಗ್ರಾಮ ಘಟಕದ ಅಧ್ಯಕ್ಷ ರವೀಶ, ಶಿವರುದ್ರಸ್ವಾಮಿ, ಮಹಾದೇವಪ್ಪ ಹಾಜರಿದ್ದರು.

ಸಮ್ಮಿಶ್ರ ಸರ್ಕಾರ ರೈತರ ಜ್ವಲಂತ ಸಮಸ್ಯೆಗಳತ್ತ ಬೆಳಕು ಚೆಲ್ಲಬೇಕು. ಮೊದಲಿಗೆ ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಬೇಕು. ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕು. ರೈತಪರ ಯೋಜನೆಗಳನ್ನು ಜಾರಿಗೆ ತಂದು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಬೇಕು.
-ಕುರುಬೂರು ಶಾಂತಕುಮಾರ್‌, ರೈತ ನಾಯಕ

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.