ಎಲ್ಲಾ ಕಚೇರಿಗಳನ್ನು ಸೌಂದರೀಕರಣಗೊಳಿಸಿ


Team Udayavani, Aug 18, 2019, 4:31 PM IST

mysuru-tdy-2

ಮೈಸೂರು: ದಸರಾ ಸಮೀಪಿಸುತ್ತಿದ್ದು, ಎಲ್ಲಾ ಕಚೇರಿಗಳು ಸಿದ್ಧವಾಗಬೇಕಿದೆ. ಗ್ರಾಪಂ ಕಚೇರಿ, ಆವರಣವನ್ನು ಶುಚಿಯಾಗಿ ಸುಂದರ ವಾಗಿಟ್ಟುಕೊಳ್ಳಬೇಕು. ಎಲ್ಲಾ ಕಚೇರಿಗಳನ್ನು ಸೌಂದರೀಕರಣ ಗೊಳಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಾಪಂ ಇಒ ಕೃಷ್ಣಕುಮಾರ್‌ ಸೂಚಿಸಿದರು.

ಮೈಸೂರು ತಾಪಂ ಕಾರ್ಯಾಲಯದ ಮಿನಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ತಾಪಂ ಇಒ ಕೃಷ್ಣಕುಮಾರ್‌, ತಾಪಂನ 37 ಗ್ರಾಪಂಗಳಿಗೆ ಭೇಟಿ ನೀಡಿದ ಸಂದರ್ಭ ಗ್ರಾಪಂ ಕಚೇರಿ ಕಟ್ಟಡ ಹಾಗೂ ಆವರಣ ತೀರ ಹದಗೆಟ್ಟಿದೆ. ಇತರೆ ತಾಲೂಕು ಪಂಚಾಯಿತಿಗಳಿಗೆ ಹೋಲಿಕೆ ಮಾಡಿಕೊಂಡರೆ ಮೈಸೂರು ತಾಲೂಕು ಪಂಚಾಯಿತಿ ಬಹಳ ಹಿಂದುಳಿದಿದೆ. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸಬೇಕಾಗಿದೆ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇತ್ತೀಚಿಗೆ ಮೈಸೂರು ತಾಪಂ ಇಒ ಆಗಿ ವರ್ಗಾವಣೆಗೊಂಡು ಕೃಷ್ಣಕುಮಾರ್‌ ಮೊದಲ ಸಭೆಯಲ್ಲಿ ತಾಲೂಕಿನ ಅಭಿವೃದ್ಧಿ ಹಾಗೂ ಅನುದಾನ ಕೊರತೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ನಾನು ರಾಮನಗರ, ಚನ್ನಪಟ್ಟಣ ಹಾಗೂ ಹುಣಸೂರು ಸೇರಿದಂತೆ ಮುಂತಾದ ತಾಪಂ ಗಳಲ್ಲಿ ಕೆಲಸ ನಿರ್ವಹಿಸಿದ್ದೇನೆ. ಈ ತಾಲೂಕಿನ ಕಾರ್ಯ ಕ್ರಮಗಳು, ಅಭಿವೃದ್ಧಿ ಹಾಗೂ ಅನುದಾನ ಪಡೆಯುವಲ್ಲಿ, ರೈತರಿಗೆ ಕೃಷಿಗೆ ಅನುದಾನ ನೀಡುವಲ್ಲಿ ಹಿಂದುಳಿದಿದೆ. ಹೆಚ್ಚು ಅನುದಾನ ತರಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

ಪಿಎಚ್ಸಿಗಳಲ್ಲಿ ಉದ್ಯಾನ: ಮೈಸೂರು ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆವರಣದಲ್ಲಿ ಉದ್ಯಾನ ರೂಪಿಸ ಬೇಕಿದೆ. ನೀರಿನ ಸೌಲಭ್ಯ ಇರುವ ಪಿಎಚ್ಸಿ ಕೇಂದ್ರಗಳಲ್ಲಿ ಉದ್ಯಾನ ಮಾಡಲಾಗು ವುದು. ನೀರಿನ ಸೌಲಭ್ಯಗಳಿರುವ ಪಿಎಚ್ಸಿ ಬಗ್ಗೆ ವರದಿ ನೀಡಲು ತಾಲೂಕು ವೈದ್ಯಾಧಿಕಾರಿ ಡಾ. ಮಹದೇವ ಪ್ರಸಾದ್‌ಗೆ ತಿಳಿಸಿದರು.

ತಾಲೂಕಿನಲ್ಲಿ ಖಾಲಿ ಇರುವ ಸಿಎ ನಿವೇಶನ ಒತ್ತುವರಿ ಮಾಡಿಕೊಳ್ಳುವ ಸಾಧ್ಯತೆಗಳಿದ್ದು, ಇದನ್ನು ನಿಯಂತ್ರಿಸಲು ಖಾಲಿ ನಿವೇಶನಗಳನ್ನು ಸಾಮಾಜಿಕ ಅರಣ್ಯ ಯೋಜನೆಯಡಿ ಉದ್ಯಾನ ಅಭಿವೃದ್ಧಿ ಪಡಿಸಬೇಕೆಂದು ತಿಳಿಸಿದರು.

ಆದ್ಯತೆ: ತಾಲೂಕಿನಲ್ಲಿ ಬಿಸಿಎಂ ಹಾಸ್ಟೆಲ್ಗಳಲ್ಲಿ ಪ್ರವೇಶ ಪಡೆಯಲು ಅಂಕ ಆಧಾರಿತವಾಗಿ ಪ್ರವೇಶ ನೀಡಲಾಗುತ್ತಿದ್ದು, ಕುಗ್ರಾಮಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡ ಬೇಕು. ನಗರದಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ಹತ್ತಿರವಾಗ ಲಿದೆ ಎಂದು ತಾಲೂಕಿನ ಬಿಸಿಎಂ ಹಾಸ್ಟೆಲ್ಗೆ ಸೇರಲು ಇಚ್ಛಿಸುತ್ತಾರೆ. ಆದರೆ, ಅದಕ್ಕೆ ಮೇರಿಟ್ ತೊಡಕ್ಕಾಗಿದೆ. ನಿಯಮ ದಂತೆ ಮೇರಿಟ್ ಆಧಾರಿತದ ಮೇಲೆ ಪ್ರವೇಶಾತಿ ನೀಡಿ ಎಂದು ಬಿಎಂಸಿ ಅಧಿಕಾರಿಗೆ ಸಲಹೆ ನೀಡಿದರು.

ಹುಣಸೂರಿಗಿಂತ ಮೈಸೂರು ತಾಲೂಕಿನಲ್ಲಿ ಹೆಚ್ಚು ಹಾಸ್ಟೇಲ್ಗಳಿವೆ. ಆದರೆ ಅಲ್ಲಿ 4-6 ಲಕ್ಷ ರೂ. ನೀಡಲಾಗುತ್ತಿತು. ಇಲ್ಲಿ 2 ಲಕ್ಷ ರೂ. ನೀಡಲಾಗುತ್ತದೆ. ಇದು ಸಾಲದು. ಹೆಚ್ಚು ಅನುದಾನ ನೀಡಲು ಕ್ರಮ ವಹಿಸಲಾಗುವುದು ಎಂದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.