ಭೇರ್ಯ ದೊಡ್ಡಮ್ಮ-ಕರಿಯಮ್ಮ ಸಿಡಿ ಉತ್ಸವ

Team Udayavani, Apr 25, 2019, 3:02 AM IST

bherya

ಕೆ.ಆರ್‌.ನಗರ: ತಾಲೂಕಿನ ಭೇರ್ಯ ಗ್ರಾಮದ ದೊಡ್ಡಮ್ಮ-ಕರಿಯಮ್ಮ ವಾರ್ಷಿಕ ಸಿಡಿ ಮತ್ತು ಜಾತ್ರಾ ಮಹೋತ್ಸವ ಮಂಗಳವಾರ ರಾತ್ರಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಗ್ರಾಮದ ಪೂರ್ವ ಭಾಗದಲ್ಲಿರುವ ಅಕ್ಕಿಹೆಬ್ಟಾಳು ರಸ್ತೆ ಬಳಿಯಿಂದ ಹೊರಟ ದೇವಿಯ ಸಿಡಿ ಹತ್ತಾರು ವಿವಿಧ ಜಾನಪದ ಕಲಾ ತಂಡಗಳೊಂದಿಗೆ ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹಾಸನ-ಮೈಸೂರು ರಸ್ತೆಯ ಬದಿಯಲ್ಲಿರುವ ದೇವಾಲಯದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಹಾಕಲಾಯಿತು. ಈ ಸಂದರ್ಭದಲ್ಲಿ ನೆರೆದಿದ್ದ ಭಕ್ತರು ಮೊಳಗಿಸಿದ ಜೈಕಾರದ ಘೋಷಣೆ ಮುಗಿಲು ಮುಟ್ಟಿತ್ತು.

ಸಂಜೆ 7 ಗಂಟೆಗೆ ಗ್ರಾಮದ ಹೃದಯ ಭಾಗದಲ್ಲಿರುವ ಕರಿಯಮ್ಮನ ದೇವಾಲಯದಿಂದ ಕನ್ನಡ ಕಳಶದ ಮೆರವಣಿಗೆ ಸಿಡಿಯ ಬಳಿ ಆಗಮಿಸಿದ ನಂತರ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಸಿಡಿ ಸಂಚರಿಸುವ ಸಂದರ್ಭದಲ್ಲಿ ರಸ್ತೆಯುದ್ದಕ್ಕೂ ಭಕ್ತ ವೃಂದ ವಿವಿಧ ರೀತಿಯ ಬಲಿಗಳನ್ನು ನೀಡುವುದರ ಜತೆಗೆ ನೂತನ ದಂಪತಿಗಳು, ಮಹಿಳೆಯರು, ಮಕ್ಕಳು, ಹಸುಗೂಸು ಸೇರಿದಂತೆ ಸಾವಿರಾರು ಭಕ್ತರು ಬಾಯಿಗೆ ಬೀಗ ಧರಿಸಿ ಸಿಡಿಯ ಹಿಂಭಾಗದಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಸಿಡಿಯೊಂದಿಗೆ ದೇವಾಲಯದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಹಾಕಿದ ನಂತರ ಬಾಯಿ ಬೀಗವನ್ನು ತೆಗೆಯಲಾಯಿತು. ಜೊತೆಗೆ ಸಿಡಿ ಮಹೋತ್ಸವದ ಹಿಂಬದಿಯಲ್ಲಿ ಹೆಣ್ಣು ಮಕ್ಕಳಿಗೆ ಹೊರಿಸಿದ್ದ ಕನ್ನಡ ಕಳಶದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಾಲಯದವರೆಗೆ ಸಂಚರಿಸಿತು.

ಜಾತ್ರೆಯಲ್ಲಿ ನೆರೆದಿದ್ದ ಸಾವಿರಾರು ಭಕ್ತರು ಮತ್ತು ನೂತನ ದಂಪತಿಗಳು ತಮ್ಮ ಇಷ್ಟಾರ್ಥಗಳನ್ನು ಬೇಡಿಕೊಂಡು ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಜಮಾಯಿಸಿದ್ದು. ಸಿಡಿ ಮಹೋತ್ಸವದ ಸಂದರ್ಭದಲ್ಲಿ ಭಕ್ತರು ದೇವರಿಗೆ ಹಣ್ಣು ಧವನ ಸಮರ್ಪಿಸಿದರು. ಭಕ್ತರಿಗೆ ಮಜ್ಜಿಗೆ ಪಾನಕ ಮತ್ತು ಪ್ರಸಾದ ವಿತರಿಸಲಾಯಿತು.

ಜಾತ್ರೆಯಲ್ಲಿ ಕಿಕ್ಕಿರಿದು ನೆರೆದಿದ್ದ ಭಕ್ತ ಸಮೂಹದಿಂದ ಭರ್ಜರಿ ವ್ಯಾಪಾರ ವಹಿವಾಟು ನಡೆಯಿತು. ಈ ವೇಳೆ ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾಡಗೌಡ ಬಿ.ಎಸ್‌.ಕುಮಾರ್‌, ಗ್ರಾಪಂ ಅಧ್ಯಕ್ಷ ಶಿವಶಂಕರ್‌, ಉಪಾಧ್ಯಕ್ಷೆ ಅನುಸೂಯಮ್ಮ,

ಸದಸ್ಯರಾದ ಬಿ.ಕೆ.ಕುಮಾರ್‌, ಮಂಜಪ್ಪ, ಕುಮಾರ್‌, ಮನ್ಸೂರ್‌, ಹರೀಶ್‌, ಸುದರ್ಶನ್‌, ತಾಲೂಕು ಪಂಚಾಯ್ತಿ ಅಧ್ಯಕ್ಷೆ ಶೋಭಾ ಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಬಿ.ಎಲ್‌.ರಾಜಶೇಖರ್‌, ಗ್ರಾಮದ ಮುಖಂಡರಾದ ಬಿ.ಎಂ.ಪ್ರಕಾಶ್‌, ಈರಯ್ಯ, ಸುಭಾಕರ್‌, ಮಹದೇವಪ್ಪ, ಪುಟ್ಟಮಲ್ಲಯ್ಯ, ಶಿವಕುಮಾರ್‌, ಲೋಕೇಶ್‌ ಇತರರಿದ್ದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.