ಪಂಡಿತ್ ವರದಾಚಾರ್ಯ ಜನ್ಮ ಶತಮಾನೋತ್ಸವ ; ಶಿಕ್ಷಣದಲ್ಲಿ ಜ್ಞಾನಕ್ಕೆ ಒತ್ತು: ಕಾಗೇರಿ
Team Udayavani, Oct 22, 2022, 11:22 PM IST
ಮೈಸೂರು: ನಮಗೆ ಹಣ ಗಳಿಕೆಯ ಶಿಕ್ಷಣ ಸಿಕ್ಕಿದೆ. ಜ್ಞಾನ ಗಳಿಕೆಯ ಶಿಕ್ಷಣ ದೊರೆತಿಲ್ಲ. ಇತ್ತೀಚೆಗೆ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತಂದು ಜ್ಞಾನ ಗಳಿಕೆಗೆ ಒತ್ತು ನೀಡಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಪಂಡಿತ ರತ್ನ ಕೆ. ಎಸ್. ವರದಾಚಾರ್ಯ ಶತಮಾನೋತ್ಸವ ಆಚರಣ ಸಮಿತಿ ಆಶ್ರಯದಲ್ಲಿ ಶನಿವಾರ ಇಲ್ಲಿನ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಜರಗಿದ ವರದಾಚಾರ್ಯರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ “ಸಮನ್ವಯ ವರದಾ’ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಮೈಸೂರು ವಿದ್ವತ್ ಕೇಂದ್ರವಾಗಿದೆ. ಸಂಸ್ಕೃತ, ಯೋಗ, ಅಧ್ಯಾತ್ಮಕ್ಕೆ ಹೆಸರಾಗಿದೆ. ಸನಾತನ ಹಿಂದೂ ಧರ್ಮದ ರಕ್ಷಣೆ ಇಲ್ಲಿ ಆಗಿದ್ದು ಉಳಿದು ಬೆಳೆದು ಬಂದಿದೆ. ಮೈಸೂರಿನ ಮಹಾರಾಜ ಸಂಸ್ಕೃತ ಪಾಠಶಾಲೆ ದೇಶಕ್ಕೆ ವಿದ್ವಾಂಸರನ್ನು ನೀಡಿರುವ ಶಿಕ್ಷಣ ಕೇಂದ್ರವಾಗಿದೆ ಎಂದರು.
ಶಿರಸಿಯ ಸೋಂದಾ ಶ್ರೀ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು.
ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ವರದಾಚಾರ್ಯ ಅವರ ಚಿತ್ರಪಟವನ್ನು ಅನಾವರಣಗೊಳಿಸಿದರು. ಸಚಿವ ಎಸ್.ಟಿ.ಸೋಮಶೇಖರ್ ಅವರು ವಿದ್ವಾನ್ ಡಾ| ಪರಮೇಶ್ವರ ನಾರಾಯಣ ಶಾಸ್ತ್ರಿ ಹಾಗೂ ಪ್ರೊ| ಚಕ್ರವರ್ತಿ ರಂಗನಾಥನ್ ಅವರನ್ನು ಸಮ್ಮಾನಿಸಿದರು.
ಸಂಸದ ಪ್ರತಾಪ ಸಿಂಹ, ಶಾಸಕ ಎಸ್.ಎ. ರಾಮದಾಸ್, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದಮೂರ್ತಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಲೋಕಕ್ಕೆ ನಿರಂತರವಾಗಿ ವಿದ್ಯೆಯನ್ನು ಹಂಚುತ್ತಿದ್ದವರು ವರದಾಚಾರ್ಯರು. ಈಗ ಅವರ ಶಿಷ್ಯರು ಆ ಕೆಲಸವನ್ನು ಮುಂದುವರಿಸುತ್ತಿದ್ದಾರೆ.
-ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಪೇಜಾವರ ಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?