ಸ್ಥಳೀಯ ಸಂಸ್ಥೆಗಳಲ್ಲಿ ಎಲ್ಲಾ ಕಡೆ ಬಿಎಸ್ಪಿ ಸ್ಪರ್ಧೆ: ಮಹೇಶ್‌

Team Udayavani, May 4, 2019, 3:00 AM IST

ಮೈಸೂರು: ಇದೇ 29ರಂದು ನಡೆಯಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ಎಲ್ಲಾ ಕಡೆಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಶಾಸಕ ಎನ್‌.ಮಹೇಶ್‌ ಹೇಳಿದರು.

ಬಹುಜನ ಸಮಾಜ ಪಾರ್ಟಿ ಮೈಸೂರು ನಗರ ಘಟಕದ ವತಿಯಿಂದ ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ದುಡಿದ ಕಾರ್ಯಕರ್ತರು, ಮುಖಂಡರಿಗೆ ಕೃತಜ್ಞತಾ ಸಮರ್ಪಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಮಗೆ ಚುನಾವಣೆ ಎಂದರೆ ಭಯ ಶುರುವಾಗಿದೆ. ಈಗಷ್ಟೇ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದೇವೆ. ಈಗಾಗಲೇ ನಗರ ಸ್ಥಳೀಯ ಸಂಸ್ಥೆ ಚುನಾವಣೆಯೂ ಎದುರಾಗಿದೆ. ಹೀಗಾಗಿ ಮತ್ತೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕಿದೆ.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ 63 ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಜೊತೆಗೆ ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಪ್ರಾಬಲ್ಯ ಸಾಧಿಸಲಿದ್ದಾರೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿಗೆ ಹೆಚ್ಚಿನ ಮತಗಳು ಬಂದಿವೆ. ಎಲ್ಲಾ ಪಕ್ಷದ ಅಭ್ಯರ್ಥಿಗಳು ಫ‌ಲಿತಾಂಶ ಬಂದ ನಂತರ ಕೃತಜ್ಞತೆ ಸಲ್ಲಿಸುತ್ತಾರೆ. ನಾವು ಫ‌ಲಿತಾಂಶ ಬರುವ ಮುಂಚೆಯೇ ಕೃತಜ್ಞತೆ ಸಲ್ಲಿಸುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಪಕ್ಷದ ತಾಲೂಕು ಘಟಕಗಳ ಅಧ್ಯಕ್ಷರು ಹಾಗೂ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳು ಮಾಹಿತಿ ಹಂಚಿಕೊಂಡರು. ಕೊಡಗು ಜಿಲ್ಲೆಯ ಬಿಎಸ್‌ಪಿ ಅಧ್ಯಕ್ಷ ಮೋಹನ್‌ ಮೌರ್ಯ ಮಾತನಾಡಿ, ಕೊಡಗಿನ 150 ರಿಂದ 170 ಹಳ್ಳಿಗಳನ್ನು ಸುತ್ತಿದ್ದು, ಎಲ್ಲಾ ಕಡೆ ಜನರ ಪ್ರತಿಕ್ರಿಯೆ ಉತ್ತಮವಾಗಿತ್ತು.

ನಮ್ಮ ಪಕ್ಷ ಮತ್ತಷ್ಟು ತೀವ್ರವಾಗಿ ಪ್ರತಿ ಹಳ್ಳಿಗಳಲ್ಲಿನ ಕಾರ್ಯಕರ್ತರನ್ನು ತಲುಪಬೇಕಾಗಿದೆ. ನಮ್ಮ ಕಾರ್ಯಕ್ರಮ ಹಾಗೂ ರೂಪುರೇಷೆಗಳನ್ನು ಜನಸಾಮಾನ್ಯರಿಗೆ ಮುಟ್ಟುವಂತೆ ಮಾಡಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಹಿತಕ್ಕಾಗಿ ಹಗಲಿರುಳು ಶ್ರಮಿಸಿದ ಬಿಎಸ್‌ಪಿ ಮುಖಂಡರು,

ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಈ ಸಂದರ್ಭ ಮೈಸೂರು-ಕೊಡಗು ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಡಾ.ಬಿ. ಚಂದ್ರೇಗೌಡ, ಬಿಎಸ್‌ಪಿ ಮೈಸೂರು ನಗರಾಧ್ಯಕ್ಷ ಬಸವರಾಜು, ಮೈಸೂರು ವಲಯದ ಉಸ್ತುವಾರಿ ಸೋಸಲೆ ಸಿದ್ದರಾಜು ಇತರರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮೈಸೂರು: ಧಾನ್‌ ಫೌಂಡೇಷನ್‌ ಮೈಸೂರು ವಲಯ ವತಿಯಿಂದ ಮಹಿಳಾ ಸಬಲೀಕರಣ ಕುರಿತು ವಾಕಥಾನ್‌-2020 ನಡೆಯಿತು. ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ಶನಿವಾರ...

  • ಹುಣಸೂರು: ನಗರಸಭೆ ಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ಗೆ ಭಾರೀ ಬೇಡಿಕೆ ಇದೆ. 31 ಕ್ಷೇತ್ರಕ್ಕೆ 91 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಉಪ ಚುನಾವಣೆ ವೇಳೆ ಪಕ್ಷಕ್ಕೆ ಬಂದಿರುವವರನ್ನೂ...

  • ಮೈಸೂರು: ದೇಶದ ಭವಿಷ್ಯ ಮತದಾರನ ಕೈಯಲ್ಲಿದ್ದು, ಯುವ ಜನತೆ ಮತದಾನದಿಂದ ವಂಚಿತರಾಗಬಾರದು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್‌.ಕೆ. ಒಂಟಿಗೂಡಿ...

  • ಪಿರಿಯಾಪಟ್ಟಣ: ಕನ್ನಡ ಸಾರಸ್ವತ ಲೋಕದ ದೈತ್ಯ ಪ್ರತಿಭೆ ರಾಷ್ಟ್ರಕವಿ ಕುವೆಂಪು ನೀಡಿದ ವಿಶ್ವಮಾನವ ಸಂದೇಶವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು...

  • ಪಿರಿಯಾಪಟ್ಟಣ: ಪಿರಿಯಾಪಟ್ಟಣ-ಗೋಣಿಕೊಪ್ಪ ಮುಖ್ಯರಸ್ತೆ ಅಂಕನಹಳ್ಳಿಕೊಪ್ಪಲು ಹಾಗೂ ಮಾಲಂಗಿ ಗ್ರಾಮಕ್ಕೆ ತೆರಳುವ ತಿರುವಿನಲ್ಲಿ ಕೋಳಿ, ಹಂದಿ, ಇನ್ನಿತರ ತ್ಯಾಜ್ಯದ...

ಹೊಸ ಸೇರ್ಪಡೆ