ಸಿಎಎ: ಪ್ರಚೋದನೆಗಳಿಗೆ ಕಿವಿಗೊಡಬೇಡಿ: ಶಾಸಕ

Team Udayavani, Jan 13, 2020, 3:00 AM IST

caa-prach

ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಉಂಟಾಗಿರುವ ಪ್ರಚೋದನೆಗಳಿಗೆ ಕಿಗೊಡದೇ ಭಾವೈಕ್ಯತೆ, ಸಹೋದರತ್ವದಿಂದ ಬದುಕುವ ಮೂಲಕ ವಿವಿಧತೆಯಲ್ಲಿ ಏಕತೆ ಸಂದೇಶ ಸಾರೋಣ ಎಂದು ಶಾಸಕ ಎಸ್‌.ಎ.ರಾಮದಾಸ್‌ ಹೇಳಿದರು.

ಪೌರತ್ವ ಕಾಯ್ದೆ ಕುರಿತು ಮುಸ್ಲಿಮರಲ್ಲಿ ಉಂಟಾಗಿರುವ ಆತಂಕ ಹೋಗಲಾಡಿಸುವ ನಿಟ್ಟಿನಲ್ಲಿ ಮೈಸೂರಿನ ಕೆ.ಆರ್‌. ಕ್ಷೇತ್ರದ 270 ಬೂತ್‌ಗಳಲ್ಲಿ ಪೋಸ್ಟ್‌ ಕಾರ್ಡ್‌ ಅಭಿಯಾನ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ನಗರದ ವಿವೇಕಾನಂದ ವೃತ್ತದಲ್ಲಿ ನಡೆದ ಪೋಸ್ಟ್‌ ಕಾರ್ಡ್‌ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿವಿಧತೆಯಲ್ಲಿ ಏಕತೆಯ ಸಂದೇಶ ಸಾರಬೇಕು: ದೇಶದಲ್ಲಿ ಪೌರತ್ವ ಕಾಯ್ದೆಗೆ ಸಂಬಂಧಿಸಿದಂತೆ ದೇಶದ ಜನರಲ್ಲಿ, ಪ್ರಮುಖವಾಗಿ ಮುಸಲ್ಮಾನರಲ್ಲಿ ವಿನಾಃಕಾರಣ ಹಲವು ಗೊಂದಲ ಮೂಡಿಸಿ ಪ್ರಚೋದನೆ ನೀಡುವ ಕೆಲಸ ಮಾಡಲಾಗುತ್ತಿದೆ. ಕಾಯ್ದೆಯನ್ನು ರಾಜಕೀಯ ಅಸ್ತ್ರವನ್ನಾಗಿಸಿಕೊಂಡು ಅದರ ಮೂಲಕ ಗಲಭೆಗಳನ್ನು ಉಂಟುಮಾಡಲು ಪ್ರಯತ್ನಿಸಲಾಗುತ್ತಿದೆ.

ಇಂತಹ ಮನಸ್ಥಿತಿ ಖಂಡಿಸಿ, ಇಂತಹ ಗೊಂದಲ ಮತ್ತು ಪ್ರಚೋದನೆಗಳಿಗೆ ಒಳಗಾಗದೆ, ನಾವೆಲ್ಲರೂ ಭಾವೈಕತ್ಯೆ ಮತ್ತು ಸಹೋದರತ್ವದ ಬದುಕು ನಡೆಸಬೇಕು. ಆ ಮೂಲಕ ದೇಶದ ಐಕ್ಯತೆ ಮತ್ತು ಸಾರ್ವಭೌಮತ್ವವನ್ನು ಎತ್ತಿ ಹಿಡಿದು ವಿವಿಧತೆಯಲ್ಲಿ ಏಕತೆಯ ಸಂದೇಶ ಸಾರಬೇಕಿದೆ ಎಂದರು.

ಜನರಿಗೆ ಅರಿವು ಮೂಡಿಸಿ: ಸಿಎಎ ಕಾಯ್ದೆಯಿಂದ ದೇಶದ ಜನರಿಗೆ, ವಿಶೇಷವಾಗಿ ಮುಸಲ್ಮಾನರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಹೀಗಾಗಿ ಈ ಮಸೂದೆ ತಿದ್ದುಪಡಿಗೆ ಸ್ವತಃ ಮುಸಲ್ಮಾನರೇ ಬೆಂಬಲ ವ್ಯಕ್ತಪಡಿಸುತ್ತಾರೆ ಎನ್ನುವ ವಿಶ್ವಾಸದೆ ಎಂದ ಅವರು, ಪೌರತ್ವ ತಿದ್ದುಪಡಿ ಮಸೂದೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಕಾಯ್ದೆ ಬಗ್ಗೆ ಮಾಹಿತಿ ಪಡೆದಿರುವ ಸಾರ್ವಜನಿಕರು, ಮುಂದಿನ ದಿನಗಳಲ್ಲಿ ಈ ಬಗ್ಗೆ ಜನರಿಗೆ ಅರಿವು ಮೂಡಿಸಲು ಮುಂದಾಗಬೇಕು ಎಂದು ಹೇಳಿದರು.

ಪ್ರಧಾನಿಗೆ ಪತ್ರ ರವಾನೆ: ಇದೇ ಸಂದರ್ಭದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ಸೂಚಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ರವಾನಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಸಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು, ಸಿಎಎಗೆ ನಮ್ಮ ಬೆಂಬಲದೆ ಎಂದು ಅಂಚೆ ಪತ್ರದಲ್ಲಿ ಬರೆದು, ಪ್ರಧಾನ ಮಂತ್ರಿಯವರ ನಿವಾಸಕ್ಕೆ ಪತ್ರ ರವಾನಿಸಿದರು.

ಪಾಲಿಕೆ ಸದಸ್ಯರಾದ ಬಿ..ಮಂಜುನಾಥ್‌, ಸುನಂದಾ ಪಾಲನೇತ್ರ, ಶಿವಕುಮಾರ್‌, ಗೀತಾಶ್ರೀ ಯೋಗಾನಂದ್‌, ಸೌಮ್ಯ ಉಮೇಶ್‌, ಶಾರದಮ್ಮ, ರೂಪ, ಛಾಯಾದೇ, ಕೆ.ಆರ್‌. ಕ್ಷೇತ್ರದ ಬಿಜೆಪಿ ಅಧ್ಯಕ್ಷ ವಡಿವೇಲು ಸೇರಿದಂತೆ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.