ರದ್ದಾದ ನೋಟು ಬದಲಾವಣೆ: ಶೂಟೌಟ್‌ಗೆ ಬಲಿ


Team Udayavani, May 17, 2019, 4:02 PM IST

mys-2

ಮೈಸೂರು: ನಿಷೇಧಿತ ನೋಟುಗಳ ಬದಲಾವಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರ ಮೇಲೆ ಪ್ರತಿ ದಾಳಿ ಮಾಡಿದ ವ್ಯಕ್ತಿ ಪೊಲೀಸರ ಗುಂಡೇಟಿಗೆ ಬಲಿಯಾಗಿರುವ ಘಟನೆ ಸಂಭವಿಸಿದೆ.

ಮುಂಬೈ ಮೂಲದ ಸುಖ್‌ವಿಂದರ್‌ ಸಿಂಗ್‌ ಪೊಲೀಸರ ಗುಂಡಿಗೆ ಬಲಿಯಾದ ವ್ಯಕ್ತಿ. ಮೈಸೂರು ನಗರದ ಹಿನಕಲ್ ರಿಂಗ್‌ ರಸ್ತೆ ಜಂಕ್ಷನ್‌ ಬಳಿಯ ಎಸ್‌ವಿ ರೆಸಿಡೆನ್ಸಿ ಅಪಾರ್ಟ್‌ಮೆಂಟ್ ಎದುರು ಗುರುವಾರ ಬೆಳಗ್ಗೆ 9.30 ರ ಸಮಯದಲ್ಲಿ ಈ ಘಟನೆ ಜರುಗಿದೆ.

ಇಬ್ಬರು ಪರಾರಿ, ಕಾರು ವಶಕ್ಕೆ: ಘಟನೆಯಲ್ಲಿ ಸುಖ್‌ವಿಂದರ್‌ ಸಿಂಗ್‌ ಪೊಲೀಸರ ಗುಂಡಿಗೆ ಬಲಿಯಾಗಿದ್ದು, ಸ್ಥಳದಲ್ಲಿದ್ದ ಮತ್ತಿಬ್ಬರು ಪರಾರಿಯಾಗಿದ್ದಾರೆ. ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಆರೋಪಿಗಳ ಬಳಿ ಇದ್ದ ಕಾರೊಂದನ್ನು ವಶಕ್ಕೆ ಪಡೆದಿದ್ದಾರೆ. ಕಾರಿನ ಮಾಲೀಕ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿ ಎಂದು ತಿಳಿದು ಬಂದಿದೆ.

ಘಟನೆ ವಿವರ: ಬೆಳಗ್ಗೆ 9.30ರ ಸಮಯದಲ್ಲಿ ಅಪಾರ್ಟ್‌ಮೆಂಟ್ ಬಳಿ ನಿಷೇಧಿತ ನೋಟುಗಳ ಬದಲಾವಣೆಗೆ ಗುಂಪೊಂದು ಬಂದಿದೆ ಎಂಬುದರ ಬಗ್ಗೆ ಖಚಿತ ಮಾಹಿತಿ ಆಧರಿಸಿ, ವಿಜಯ ನಗರ ಠಾಣೆಯ ಇನ್ಸ್‌ಪೆಕ್ಟರ್‌ ಬಿ.ಜಿ. ಕುಮಾರ್‌ ಮತ್ತು ಮೂವರು ಸಿಬ್ಬಂದಿ, ಕಾರ್ಯಾಚರಣೆಗೆ ಇಳಿದಿದ್ದಾರೆ. ಅಪಾರ್ಟ್‌ಮೆಂಟ್ ಎದುರು ರಿಂಗ್‌ ರಸ್ತೆಯಲ್ಲಿ ಆರೋಪಿಗಳು ತೆರಳುತ್ತಿದ್ದ ಕಾರನ್ನು, ತಮ್ಮ ಜೀಪ್‌ನ ಮೂಲಕ ಅಡ್ಡ ಹಾಕಿದ ಪೊಲೀಸರು, ಕಾರಿನಲ್ಲಿದ್ದವರನ್ನು ಹಿಡಿಯಲು ಯತ್ನಿಸಿದ್ದಾರೆ. ಪೊಲೀಸರನ್ನು ಕಂಡೊಡನೆ ಇಬ್ಬರು ಪರಾರಿಯಾಗಿದ್ದು, ಒಬ್ಬನನ್ನು ಪೊಲೀಸರು ಹಿಡಿದಿದ್ದಾರೆ. ತಕ್ಷಣ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆತ, ತನ್ನ ಬಳಿ ಇದ್ದ ರಿವಲ್ವಾರ್‌ ಎತ್ತಿಕೊಳ್ಳಲು ಮುಂದಾಗಿದ್ದಾನೆ. ಈ ಸಂದರ್ಭ ಸ್ಥಳದಲ್ಲಿದ್ದ ಇನ್ಸ್‌ಪೆಕ್ಟರ್‌ ಬಿ.ಜಿ. ಕುಮಾರ್‌ ತಮ್ಮಲ್ಲಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿದ್ದು, ಆತ ಕೆಳಗೆ ಬಿದ್ದಿದ್ದಾನೆ. ಗುಂಡೇಟಿನಿಂದ ಗಾಯಗೊಂಡಿದ್ದ ವ್ಯಕ್ತಿಯನ್ನು ಕೆ.ಆರ್‌. ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಪರಿಶೀಲನೆ: ಘಟನಾ ಸ್ಥಳಕ್ಕೆ ಮೈಸೂರು ದಕ್ಷಿಣ ವಲಯ ಐಜಿಪಿ ಉಮೇಶ್‌ ಕುಮಾರ್‌, ನಗರ ಪೊಲೀಸ್‌ ಆಯುಕ್ತ ಕೆ.ಟಿ. ಬಾಲಕೃಷ್ಣ , ಡಿಸಿಪಿ ಎಂ. ಮುತ್ತುರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ವಿಜಯ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳೆ ನೋಟುಗಳ ಬದಲಾವಣೆಗೆ ಬಂದಿದ್ದವರನ್ನು ಹಿಡಿಯಲು ಪೊಲೀಸರು ಮುಂದಾಗಿದ್ದು, ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದಲ್ಲದೇ, ಒಬ್ಟಾತ ಪ್ರತಿ ದಾಳಿ ನಡೆಸಿದ್ದಾನೆ. ಈ ವೇಳೆ ನಮ್ಮ ಇನ್ಸ್‌ಪೆಕ್ಟರ್‌ ಬಿ.ಜಿ.ಕುಮಾರ್‌ ಗುಂಡು ಹಾರಿಸಿದ್ದು, ಒರ್ವ ಮೃತಪಟ್ಟಿದ್ದು, ಉಳಿದವರು ಪರಾರಿಯಾಗಿದ್ದಾರೆ. ಅವರ ಪತ್ತೆಗೆ ಶೋಧ ಕಾರ್ಯ ನಡೆಸಲಾಗುತ್ತಿದೆ. ಇನ್ಸ್‌ಪೆಕ್ಟರ್‌ ಗುಂಡು ಹಾರಿಸಿರುವುದರಿಂದ ಸುಪ್ರೀಂ ಕೋರ್ಟ್‌ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಮಾರ್ಗ ಸೂಚಿ ಅನ್ವಯ ತನಿಖೆ ನಡೆಸಲಾಗುತ್ತದೆ.
●ಕೆ.ಟಿ. ಬಾಲಕೃಷ್ಣ , ನಗರ ಪೊಲೀಸ್‌ ಆಯುಕ್ತ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.