ಚಾಮುಂಡೇಶ್ವರಿ ದೇವಿಗೆ ಅದ್ಧೂರಿ ವರ್ಧಂತಿ ಉತ್ಸವ


Team Udayavani, Aug 4, 2018, 12:29 PM IST

m3-chamundi.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಐತಿಹಾಸಿಕ ಪ್ರವಾಸಿ ತಾಣ ಚಾಮುಂಡಿಬೆಟ್ಟದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ಹಾಗೂ ಚಿನ್ನದ ಪಲ್ಲಕ್ಕಿ ಉತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. 

ಆಷಾಢಮಾಸದ ಮೂರನೇ ಶುಕ್ರವಾರದಂದು ನಡೆದ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವದ ಹಿನ್ನೆಲೆಯಲ್ಲಿ ವಿವಿಧ ಭಾಗಗಳಿಂದ ಆಗಮಸಿದ್ದ ಭಕ್ತರು ಅಧಿದೇವತೆ ದರ್ಶನ ಪಡೆದು ಪುನೀತರಾದರು. ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌, ಯದುವೀರ್‌ ಒಡೆಯರ್‌, ತ್ರಿಷಿಕಾ ಕುಮಾರಿ ಸೇರಿದಂತೆ ಸಚಿವ ಎಚ್‌.ಡಿ.ರೇವಣ್ಣ ದಂಪತಿ ಬೆಟ್ಟಕ್ಕೆ ಆಗಮಿಸಿ ದೇವಿ ದರ್ಶನ ಪಡೆದರು. 

ವಿಶೇಷ ಪೂಜೆ: ಅಮ್ಮನವರ ವರ್ಧಂತಿ ಹಿನ್ನೆಲೆಯಲ್ಲಿ ಶುಕ್ರವಾರ ಮುಂಜಾನೆಯಿಂದಲೇ ಪ್ರಧಾನ ಅರ್ಚಕ ಶಶಿಶೇಖರ್‌ ದೀಕ್ಷಿತ್‌ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಬೆಳಗ್ಗೆ 5.30ಕ್ಕೆ ಅಮ್ಮನವರಿಗೆ ಮಹಾನ್ಯಾಸ ಪೂರ್ವಕ ರುದ್ರಾಭಿಷೇಕದಿಂದ ಆರಂಭಗೊಂಡ ಧಾರ್ಮಿಕ ಪೂಜಾಕಾರ್ಯಗಳಲ್ಲಿ ಪಂಚಾಮೃತ ಅಭಿಷೇಕ, ಸಹಸ್ರ ನಾಮಾರ್ಚನೆ ಹಾಗೂ 9.30ಕ್ಕೆ ಮಹಾಮಂಗಳಾರತಿ ನೆರವೇರಿಸಲಾಯಿತು.

ಬಳಿಕ ಆಷಾಢ ಶುಕ್ರವಾರದ ಪ್ರಯುಕ್ತ ದೇವಿಯ ದರ್ಶನಕ್ಕೆಂದು ಮುಂಜಾನೆ 4 ಗಂಟೆಯಿಂದಲೇ ಕಾದು ನಿಂತಿದ್ದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಮಧ್ಯರಾತ್ರಿಯಿಂದಲೇ ದೇವಸ್ಥಾನಕ್ಕೆ ಆಗಮಿಸಿ ಅಧಿದೇವತೆ ದರ್ಶನಕ್ಕಾಗಿ ಸಾಲುಸಾಲಾಗಿ ನಿಂತಿದ್ದ ಭಕ್ತರು ವಿಶೇಷವಾಗಿ ಅಲಂಕೃತಗೊಂಡಿದ್ದ ಚಾಮುಂಡಿ ತಾಯಿ ದರ್ಶನ ಪಡೆದರು. 

ಚಿನ್ನದ ಪಲ್ಲಕ್ಕಿ ಉತ್ಸವ: ದೇವಸ್ಥಾನದ ಗರ್ಭಗುಡಿಯಲ್ಲಿ ಚಾಮುಂಡೇಶ್ವರಿ ದೇವಿಗೆ ವಿವಿಧ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಿದ ಬಳಿಕ ಬೆಳಗ್ಗೆ 10.25ಕ್ಕೆ ಚಿನ್ನದ ಪಲ್ಲಕ್ಕಿ ಉತ್ಸವ ಆರಂಭಗೊಂಡಿತು. ವಿಶೇಷವಾಗಿ ಅಲಂಕರಿಸಿದ್ದ ಚಿನ್ನದ ಪಲ್ಲಕ್ಕಿಯಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಈ ವೇಳೆ ಸ್ಥಳದಲ್ಲಿದ್ದ ಮೈಸೂರು ನಗರ ಪೊಲೀಸ್‌ ವ್ಯಾದ ವೃಂದದವರು ಸಾಂಪ್ರದಾಯಿಕವಾಗಿ ಐಗಿರಿ ನಂದಿನಿ, ಕಾಯೋ ಶ್ರೀಗೌರಿ ಗೀತೆಗಳನ್ನು ನುಡಿಸಲಾಯಿತು. 

ಬಳಿಕ ನಗರ ಪೊಲೀಸ್‌ ವತಿಯಿಂದ ಗೌರವ ವಂದನೆ ಸಲ್ಲಿಸುತ್ತಿದ್ದಂತೆ ರಾಜವಂಶಸ್ಥರಾದ ಡಾ. ಪ್ರಮೋದಾದೇವಿ ಒಡೆಯರ್‌, ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ತ್ರಿಷಿಕಾಕುಮಾರಿ ಚಿನ್ನದ ಪಲ್ಲಕ್ಕಿ ಉತ್ಸವಕ್ಕೆ  ವಿದ್ಯುಕ್ತ ಚಾಲನೆ ನೀಡಿದರು. ಬಳಿಕ ರಾಜವಂಶಸ್ಥರು, ಗಣ್ಯರು ಹಾಗೂ ಸಹಸ್ರಾರು ಭಕ್ತರೊಂದಿಗೆ ಚಿನ್ನದ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪನೆಗೊಂಡಿದ್ದ ದೇವಿಯ ಉತ್ಸವ ಮೂರ್ತಿಯನ್ನು ದೇವಸ್ಥಾನದ ಸುತ್ತಲೂ ಒಂದು ಸುತ್ತಿನ ಪ್ರದಕ್ಷಿಣೆ ಹಾಕಿಸಲಾಯಿತು.

ಭಕ್ತರ ಹರ್ಷೋದ್ಘಾರ: ಒಂದೆಡೆ ಭಕ್ತರು ದೇವಸ್ಥಾನದಲ್ಲಿ ದೇವರ ದರ್ಶನ ಪಡೆಯುತ್ತಿದ್ದರೆ, ಮತ್ತೂಂದೆಡೆ ಚಿನ್ನದ ಪಲ್ಲಕ್ಕಿ ಉತ್ಸವ ನೋಡಲು ಸಹಸ್ರಾರು ಭಕ್ತಾದಿಗಳು ಸಾಲುಗಟ್ಟಿ ನಿಂತಿದ್ದರು. ಉತ್ಸವದಲ್ಲಿ ಅಶ್ವಾರೋಹಿ ಪಡೆ, ದೇವಸ್ಥಾನದ ಬಿರುದು ಬಾವಲಿ, ಮಂಗಳವಾದ್ಯದವರು ಮಂತ್ರಘೋಷ ಮೊಳಗಿಸಿ ಮುಂದೆ ಸಾಗುತ್ತಿದ್ದರೆ, ಅದರ ಹಿಂದೆ ಚಿನ್ನದ ಪಲ್ಲಕ್ಕಿಯ ಮೆರವಣಿಗೆ ಸಾಗಿತು.

ಇನ್ನೂ ಉತ್ಸವದಲ್ಲಿ ಭಾಗವಹಿಸಿದ್ದ ಭಕ್ತರು  ಚಾಮುಂಡಿದೇವಿಗೆ ಜಯ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಉತ್ಸವದ ವೇಳೆ ಯಾವುದೇ ನೂಕುನುಗ್ಗಲು ಉಂಟಾಗದಂತೆ ದೇವಸ್ಥಾನದ ಸುತ್ತಲೂ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿತ್ತು. ಉಳಿದಂತೆ ವರ್ಧಂತಿ ಅಂಗವಾಗಿ ರಾತ್ರಿ 8.30ಕ್ಕೆ ದೇವಿಗೆ ಉತ್ಸವ ಫ‌ಲಪೂಜೆ, ದರ್ಬಾರ್‌ ಉತ್ಸವ, ಮಂಟಪೋತ್ಸವ, ರಾಷ್ಟ್ರಾಶೀರ್ವಾದ ಜರುಗಿತು. 

ಆಷಾಢದ ಸಂಭ್ರಮ: ಬೆಟ್ಟದಲ್ಲಿ ಅಮ್ಮನವರ ಜನ್ಮೋತ್ಸವದ ಜತೆಗೆ ಆಷಾಢ ಶುಕ್ರವಾರದ ಸಂಭ್ರಮವೂ ಮನೆ ಮಾಡಿತ್ತು. ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಬೆಂಗಳೂರಿನ ಎಸ್‌ಎಫ್ಎಸ್‌ ಸತ್ಯನಾರಾಯಣ ಫ್ಲವರ್‌ ಡೆಕೋರೇಟರ್‌ರಿಂದ ದೇವಸ್ಥಾನದ ಒಳಗೆ ವಿಶೇಷ ಹೂವಿನ ಅಲಂಕಾರ ಹಾಗೂ ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು. ಗರ್ಭಗುಂಡಿಯಿಂದ ಹೊರಗಿವರಿಗೂ ಮಾಡಿದ್ದ ವಿಶೇಷ ಹೂವಿನ ಅಲಂಕಾರ ನೋಡುಗರ ಗಮನ ಸೆಳೆಯಿತು. 

ಭಕ್ತರ ಜನಸಾಗರ: ವರ್ಧಂತಿ ಹಾಗೂ ಮೂರನೇ ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ ಭಕ್ತರ ಜನಸಾಗರವೇ ಹರಿದು ಬಂದಿತು. ಲಲಿತಮಹಲ್‌ ಹೆಲಿಪ್ಯಾಡ್‌ ಮೈದಾನದಲ್ಲಿ ವಾಹನಗಳನ್ನು ನಿಲುಗಡೆ ಮಾಡುತ್ತಿದ್ದ ಭಕ್ತರು ಮುಂಜಾನೆ 2 ಗಂಟೆಯಿಂದಲೇ ಬೆಟ್ಟಕ್ಕೆ ಆಗಮಿಸಿದ್ದರಿಂದಾಗಿ ದೇವರ ದರ್ಶನಕ್ಕೆ ಅವಕಾಶ ನೀಡುವ ಹೊತ್ತಿಗೆ ಭಾರೀ ಸಂಖ್ಯೆಯಲ್ಲಿ ಜನರು ಸಾಲುಗಟ್ಟಿ ನಿಂತಿದ್ದರು.

ಇನ್ನೂ ದೇವಿಯ ಚಿನ್ನದ ಪಲ್ಲಕ್ಕಿ ಉತ್ಸವ ನಡೆದ ಸಂದರ್ಭದಲ್ಲೂ ದೇವಸ್ಥಾನ ಸುತ್ತಲೂ ಅಸಂಖ್ಯಾತ ಭಕ್ತರು ನೆರೆದಿದ್ದರು. ಇನ್ನೂ ಕೆಲವು ಭಕ್ತರು 1001 ಮೆಟ್ಟಿಲ ಮೂಲಕ ಬೆಟ್ಟಕ್ಕೆ ಆಗಮಿಸಿದ್ದರು. ಹೀಗಾಗಿ ಕಿಕ್ಕಿರಿದು ತುಂಬಿದ್ದ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಕೆಲಕಾಲ ಪರದಾಡುವಂತಾಯಿತು.  

ಗಣ್ಯರಿಂದ ದರ್ಶನ: ವರ್ಧಂತಿ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಆಗಮಿಸಿ ದೇವರ ದರ್ಶನ ಪಡೆದರು. ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ, ಅರಣ್ಯ ಸಚಿವ ಎಸ್‌.ಶಂಕರ್‌, ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಸೇರಿದಂತೆ ಹಲವು ಶಾಸಕರು, ವಿವಿಧ ಜಿಲ್ಲೆಗಳ ಜಿಪಂ ಅಧ್ಯಕ್ಷರು ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.