ಸಾಮಾಜಿಕ ಜಾಲತಾಣದಿಂದ ಬಾಲ್ಯ ವಿವಾಹ ಪತ್ತೆ, ಪ್ರಕರಣ ದಾಖಲು
Team Udayavani, Aug 13, 2021, 10:24 AM IST
ಪ್ರಾತಿನಿಧಿಕ ಚಿತ್ರ
ಹುಣಸೂರು : ತಾಲೂಕಿನ ಬಿಳಿಕೆರೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಬಾಲ್ಯವಿವಾಹವಾಗಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪತ್ತೆಯಾಗಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಚ್.ಡಿ.ಕೋಟೆ ತಾಲೂಕಿನ ಗ್ರಾಮವೊಂದರ 24 ವರ್ಷದ ವರ ಪ್ರವೀಣ್ ಕುಮಾರ್ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ : ಜಾರಕಿಹೊಳಿ ಸಿಡಿ ಪ್ರಕರಣ; ತನಿಖೆ ಮರುಪರಿಶೀಲನೆ ಅನಗತ್ಯ: ಸೌಮೇಂದು ಮುಖರ್ಜಿ
ಘಟನೆ ವಿವರ ಹೀಗಿದೆ
ಕಳೆದ ಒಂದು ವಾರದ ಹಿಂದೆ ಬಿಳಿಕೆರೆ ಬಳಿಯ ಮಹದೇಶ್ವರ ದೇವಾಲಯದಲ್ಲಿ ಎಚ್.ಡಿ.ಕೋಟೆ ತಾಲೂಕಿನ ಪ್ರವೀಣ್ ಕುಮಾರ್ ಹಾಗೂ 10 ನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ಕಾನೂನು ಬಾಹಿರವಾಗಿ ವಿವಾಹವಾಗಿರುವ ಬಗ್ಗೆ ವಿಡಿಯೋ ವೈರಲ್ ಆಗಿದ್ದರ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿ ಅಧಿಕಾರಿಗಳು ಹುಣಸೂರು ಸಿ.ಡಿ.ಪಿ.ಓ.ಕಚೇರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ನೀಡಿದ ಮಾಹಿತಿಯನ್ನಾಧರಿಸಿದ ಸಿ.ಡಿ.ಪಿ.ಓ.ರಶ್ಮಿಯವರು ಪ್ರವೀಣ್‌ಕುಮಾರ್ ಹಾಗೂ ಪೋಷಕರ ವಿರುದ್ದ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ವರ ಪ್ರವೀಣ್ ಕುಮಾರ್ ಗ 24 ವರ್ಷ ವಯಸ್ಸಾಗಿದ್ದರೆ, ಮದುವೆ ಮಾಡಿಕೊಂಡಿರುವ ಬಾಲಕಿ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಪ್ರಕರಣ ದಾಖಲಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಬಾಲಕಿಯ ಹೇಳಿಕೆ ಪಡೆಯಲು ಯತ್ನಿಸಿದರಾದರೂ ಆಕೆ ತಾನು ವಿವಾಹವಾಗಿಲ್ಲವೆಂಬ ಹೇಳಿಕೆ ನೀಡುತ್ತಿದ್ದಾಳೆ. ಆದರೂ ವಿಡಿಯೋ ವೈರಲ್ ಆಗಿರುವ ಬಗ್ಗೆ ಹೆಚ್ಚಿನ ತನಿಖೆಗಾಗಿ ಎಚ್. ಡಿ.ಕೋಟೆ ಸಿಡಿಪಿಓ ರಿಗೆ ವಹಿಸಲಾಗಿದೆ ಎಂದು ಹುಣಸೂರು ಸಿಡಿಪಿಓ ರಶ್ಮಿ ಮಾಹಿತಿ ನೀಡಿದ್ದಾರೆ.
ತನಿಖೆಯಿಂದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದರಿಂದ ದೇವಾಲಯದಲ್ಲಿ ವಿವಾಹವಾಗಿರುವ ಬಗ್ಗೆ ಸತ್ಯಾಸತ್ಯತೆ ಹೊರಬೀಳಬೇಕಿದೆ.
ಇದನ್ನೂ ಓದಿ : ಉಡುಪಿ: 250 ಹಾಸಿಗೆಗಳ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಶಂಕು ಸ್ಥಾಪನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್‌ಐ ಪಾತ್ರ?
ಏನು ಹೇಳಿದರೂ ನಿನದೇ ಸರಿ …ಸಂಕಟ ಕಾಲದಲ್ಲಿ ಮತದಾರನೇ ವೆಂಕಟರಮಣ !
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ
ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ
ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ