ಕೂಚುವೇಲಿ-ಬೆಂಗಳೂರು ರೈಲು ಸಂಚಾರ
Team Udayavani, Sep 30, 2019, 3:00 AM IST
ಮೈಸೂರು: ಮೈಸೂರಿನ ವಿಸ್ತರಣೆಗೊಂಡ “ಕೂಚುವೇಲಿ-ಬೆಂಗಳೂರು’ ಎಕ್ಸ್‌ಪ್ರೆಸ್ ರೈಲಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಚಾಲನೆ ನೀಡಿದರು. ನಗರದ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈಲುಗಾಡಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೈಲ್ವೆ ವಿಚಾರದಲ್ಲಿ ರಾಜ್ಯಕ್ಕೆ ಹೆಚ್ಚಿನ ಅದ್ಯತೆ ನೀಡುತ್ತಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛತೆ, ಸಮಯಪಾಲನೆಗೆ ರೈಲ್ವೆ ಇಲಾಖೆ ಮುಂದಾಗಿದೆ. ರೈಲ್ವೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲು, ಅಗತ್ಯ ಭೂಮಿ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮಾತನಾಡಿ, ಪ್ರಧಾನಿ ಮೋದಿ ದೇಶ, ದೇಶಗಳ ನಡುವೆ ಸಂಪರ್ಕ ಸಾಧಿಸುತ್ತಿದ್ದರೆ, ಇಡೀ ದೇಶವನ್ನು ರೈಲ್ವೆ ಇಲಾಖೆ ಸಂಪರ್ಕಿಸಿದೆ. ಗಣ್ಯರು, ಅತಿಗಣ್ಯರು ಇರುವ ಬೋಗಿಗಳನ್ನು ಮಾತ್ರ ಸ್ವಚ್ಛವಾಗಿಡದೆ ಸಾಮಾನ್ಯ ಜನರು ಸಂಚರಿಸುವ ಬೋಗಿಗಳನ್ನು ಸ್ವಚ್ಛವಾಗಿಡಬೇಕು ಎಂದು ಈಗಾಗಲೇ ನಿರ್ಧರಿಸಿದ್ದು, ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕರ್ನಾಟಕ ಸೇರಿದಂತೆ ದೇಶದ ಇನ್ನಿತರೆ ಪ್ರವಾಸ ಕೇಂದ್ರಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಗೋಲ್ಡನ್ ಚಾರಿಯಟ್ ರೈಲನ್ನು ಮತ್ತೆ ಸಂಚರಿಸುವಂತೆ ಮಾಡಲಾಗುವುದು. ರೈಲ್ವೆ ಇಲಾಖೆಯಲ್ಲಿ ಮುಂದೆ 50 ಲಕ್ಷ ಕೋಟಿ ರೂ. ವಿನಿಯೋಗಿಸಲು ನಿರ್ಧರಿಸಲಾಗಿದ್ದು, ಉದ್ಯೋಗವಕಾಶ ಹೆಚ್ಚಲಿದೆ. ಈ ನಿಟ್ಟಿನಲ್ಲಿ ರಾಜ್ಯದ ಯುವಕರು ಕೇವಲ ಐಎಎಸ್, ಐಪಿಎಸ್ ಪರೀಕ್ಷೆ ತೆಗೆದುಕೊಳ್ಳದೆ ರೈಲ್ವೆ ಇಲಾಖೆಯ ಪರೀಕ್ಷೆಗಳನ್ನು ಬರೆಯವಂತೆ ಸಲಹೆ ನೀಡಿದರು.
“ಕೂಚುವೇಲಿ-ಬೆಂಗಳೂರು’ ರೈಲು ವಿಸ್ತರಣೆಯಿಂದ ಕರ್ನಾಟಕ, ತಮಿಳುನಾಡು, ಕೇರಳ ನಡುವೆ ಸಂಪರ್ಕ ಕಲ್ಪಿಸಲಿದೆ. ಮುಂದೆ ಬೆಂಗಳೂರು-ಮುಂಬೈ ನಡುವೆ ಕೂಡಾ “ವಂದೇ ಭಾರತ್’ ರೈಲು ಸಂಪರ್ಕಿಸಲು ಪ್ರಯತ್ನಗಳು ನಡೆಸಲಾಗುವುದು. ಕರ್ನಾಟಕ-ಮಹಾರಾಷ್ಟ್ರ-ಗೋವಾ ನಡುವೆ ಸಂಪರ್ಕಿಸುವ ರೈಲು ಸಂಚರಿಸಲಿವೆ ಎಂದರು ವಿವರಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ವಿ.ಸೋಮಣ್ಣ, ಸಿ.ಟಿ.ರವಿ, ಸಂಸದ ಪ್ರತಾಪ್ ಸಿಂಹ, ಮೇಯರ್ ಪುಷ್ಪಲತಾ, ಜಿಪಂ ಅಧ್ಯಕ್ಷೆ ಪರಿಮಳಾ, ಶಾಸಕ ಸಿ.ಎಸ್.ನಿರಂಜನಕುಮಾರ್, ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ಕುಮಾರ್ ಸಿಂಗ್, ಪ್ರಾದೇಶಿಕ ವ್ಯವಸ್ಥಾಪಕಿ ಅಪರ್ಣ ಗರ್ಗ್ ಇತರರಿದ್ದರು.
ರೈಲು ವೇಳಾಪಟ್ಟಿ: ನೂತನ ಕೂಚುವೇಲಿ-ಬೆಂಗಳೂರು ಎಕ್ಸ್‌ಪ್ರೆಸ್ ರೈಲು ನಿತ್ಯ ಮಧ್ಯಾಹ್ನ 12.15ಕ್ಕೆ ಮೈಸೂರು ನಿಲ್ದಾಣವನ್ನು ಬಿಟ್ಟು 4:35ಕ್ಕೆ ಬೆಂಗಳೂರು ತಲುಪಲಿದೆ. ಅಲ್ಲಿಂದ 4.50ಕ್ಕೆ ಹೊರಟು ಮರು ದಿನ ಬೆಳಗ್ಗೆ 9.35ಕ್ಕೆ ಕೇರಳದ ಕೂಚುವೇಲಿ ತಲುಪಲಿದೆ. ಕೂಚುವೇಲಿನಿಂದ ಸಂಜೆ 4.45ಕ್ಕೆ ಹೊರಟು ಬೆಳಗ್ಗೆ 8ಕ್ಕೆ ಬೆಂಗಳೂರು ತಲುಪಲಿದೆ. ಅಲ್ಲಿಂದ 8.35ಕ್ಕೆ ಬಿಟ್ಟು 11.20ಕ್ಕೆ ಮೈಸೂರಿಗೆ ಆಗಮಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಉದ್ಯಮಿ ಕಟ್ಟೆ ಭೋಜಣ್ಣ ಸಾವು ಪ್ರಕರಣ; ಆತ್ಮಹತ್ಯೆಗೆ ಪ್ರಚೋದನೆ: ಗಣೇಶ್ ಶೆಟ್ಟಿ ಬಂಧನ
ನೆಲ್ಯಾಡಿ: ಕಾರು – ಟಿಪ್ಪರ್ ಢಿಕ್ಕಿ; ಓರ್ವ ಸಾವು
ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಕುಂದಾಪುರ:ಕೊನೆಗೂ ಬಂತು ತಾ.ಪಂ. ಅನುದಾನದ ಕಂತು