ವಾಣಿಜ್ಯ ಕಟ್ಟಡ ತೆರಿಗೆ ಪರಿಷ್ಕರಣೆ: ಆಯುಕ್ತ

Team Udayavani, Nov 17, 2021, 2:39 PM IST

ಮೈಸೂರು ನಗರ ಪಾಲಿಕೆ

ಮೈಸೂರು: ನಗರದ ವಾಣಿವಿಲಾಸ ನೀರು ಸರಬರಾಜು ನಿಗಮದ ಕಚೇರಿಯಲ್ಲಿ ಮಂಗಳವಾರ ನಗರಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಹಾಗೂ ಇತರ ಅಧಿಕಾರಿಗಳೊಂದಿಗೆ ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟದ ಸಭೆ ನಡೆಯಿತು. ಸಭೆಯಲ್ಲಿ ಸಂಘ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ನಗರದಲ್ಲಿ ಆಸ್ತಿ ತೆರಿಗೆ ಹಾಗೂ ಉದ್ದಿಮೆ ರಹದಾರಿ ಸಂಬಂಧ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು.

ಈ ವೇಳೆ ಮಾತನಾಡಿದ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ, ಮುಂದಿನ ಕೌನ್ಸಿಲ್‌ ಸಭೆಯಲ್ಲಿ ನಗರಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳಿಗೆ ಇರುವ ಕಮರ್ಷಿಯಲ್‌ ಎ ಮತ್ತು ಬಿ ಎಂಬ ವಿಭಾಗಗಳನ್ನು ತೆಗೆದುಹಾಕಿ ವಾಣಿಜ್ಯ ಎಂಬ ಒಂದೇ ವಿಭಾಗದಡಿ ಎಲ್ಲ ವಾಣಿಜ್ಯ ಆಸ್ತಿಗಳೂ ಸೇರುವಂತೆ ಮಾಡಲಾಗುತ್ತದೆ.

ಇದನ್ನೂ ಓದಿ:- ಪ.ಪೂ. ಶಿಕ್ಷಣ ಇಲಾಖೆ ಸರ್ಕಾರದ ಅಧೀನವೇ?,ಸ್ಪಷ್ಟಪಡಿಸಿ: ಸಿಎಂಗೆ ಬಿಜೆಪಿ ಶಾಸಕ

ಈ ಮೂಲಕ ಮುಂದಿನ ವರ್ಷದಿಂದ ಕಲ್ಯಾಣ ಮಂಟಪಗಳು, ಹೋಟೆಲ್‌ಗ‌ಳು, ಚಿತ್ರಮಂದಿರಗಳು, ಕಮರ್ಷಿಯಲ್‌ ಕಾಂಪ್ಲೆಕ್ಸ್ ಮತ್ತು ಲಾಡ್ಜ್ಗಳಿಗೆ ತೆರಿಗೆಯಿಂದ ಆಗುತ್ತಿರುವ ಹೊರೆ ಕಡಿಮೆಯಾಗುತ್ತದೆ. ಆದರೆ, ಈವರೆಗೂ ಉಳಿಸಿಕೊಂಡಿರುವ ತೆರಿಗೆಗಳನ್ನು ಆದಷ್ಟು ಬೇಗ ಪಾವತಿ ಮಾಡಿ. ಈವರೆಗೂ ಆಗಿರುವ ತೆರಿಗೆ ಲೆಕ್ಕಾಚಾರಗಳಲ್ಲಿ ಏನಾದರೂ ತಪ್ಪುಗಳಿದ್ದರೆ ಅದನ್ನು ಸರಿಪಡಿಸಿಕೊಡಲಾಗುವುದು ಎಂದರು.‌

ಹೊರೆ ಇಳಿಸಲು ಕ್ರಮ: ಉದ್ಯಮಿಗಳ ಬೇಡಿಕೆಯಂತೆ ಹೆಚಿ³ ಕನೆಕ್ಷನ್‌ ಆಧಾರದ ಮೇಲೆ ಮಾತ್ರ ಉದ್ದಿಮೆ ರಹದಾರಿ ನೀಡಲು, ಎಸಿ, ಜನರೇಟರ್‌ ಹಾಗೂ ಬೋರ್ವೆಲ್‌ ಮೇಲೆ ಹೆಚ್ಚುವರಿ ಶುಲ್ಕ ವಿಧಿಸದಿರಲು ಸಹ ಕೌನ್ಸಿಲ್‌ನಲ್ಲಿ ನಿರ್ಣಯ ಕೈಗೊಳ್ಳಲಾಗುತ್ತದೆ. ಸಿಆರ್‌ ಇಲ್ಲದ ಕಟ್ಟಡಗಳಿಗೆ ದುಪ್ಪಟ್ಟು ಉದ್ದಿಮೆ ರಹದಾರಿ ಶುಲ್ಕವನ್ನು ವಿಧಿಸಲಾಗುತ್ತಿದೆ. ಈ ಹೊರೆಯನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುವುದು. ಹಳೆಯ ಕಟ್ಟಡಗಳಿಗೂ ಇಂದಿನ ದಿನದ ನಿರ್ಮಾಣ ಶುಲ್ಕವನ್ನು ಪರಿಗಣಿಸಲಾಗುತ್ತಿದೆ.

ಕಟ್ಟಡ ಹಳೆಯದಾದಂತೆ ಆ ಶುಲ್ಕವೂ ಕಡಿಮೆಯಾಗಬೇಕು ಎಂಬ ವಿಷಯವನ್ನು ಕೌನ್ಸಿಲ್‌ನಲ್ಲಿ ಇಡಲಾಗುತ್ತದೆ. ಅಲ್ಲದೆ ಬಿ ಖಾತಾ ಪದ್ಧತಿಯನ್ನೂ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದಾಗಿ ಪಾಲಿಕೆಯ ಆದಾಯ ಹೆಚ್ಚಾಗಲಿದೆ ಎಂದು ತಿಳಿಸಿದರು.

ಲೋಪ ಸರಿಪಡಿಸಿ: ಮಾಜಿ ಮೇಯರ್‌ ಭೈರಪ್ಪ ಮಾತನಾಡಿ, ಸೆಟ್‌ ಬ್ಯಾಕ್‌ ಸ್ಥಳಕ್ಕೂ ಪಾಲಿಕೆ ತೆರಿಗೆ ವಿಧಿಸುತ್ತಿರುವುದು ತಪ್ಪು. ಕೆಲವರು ದಶಗಳಿಂದ ತೆರಿಗೆ ಪಾವತಿಸಿಲ್ಲದಿದ್ದರೂ ಅವರನ್ನು ಕೇಳದೆ ಕೇವಲ ಎರಡು-ಮೂರು ವರ್ಷಗಳಿಂದ ತೆರಿಗೆ ಕಟ್ಟಿಲ್ಲದವರ ಆಸ್ತಿಗಳಿಗೆ ಬ್ಯಾನರ್‌ ಹಾಕಲಾಗುತ್ತಿದೆ. ಇನ್ನು ಕೆಲವರು ತೆರಿಗೆ ಕಟ್ಟಲು ತಯಾರಿದ್ದರೂ ಕಟ್ಟಿಸಿಕೊಳ್ಳಲು ಸಿಬ್ಬಂದಿ ತಯಾರಿಲ್ಲ. ಆನ್‌ಲೈನ್‌ ತೆರಿಗೆ ಪಾವತಿ ವ್ಯವಸ್ಥೆಯಲ್ಲೂ ಹಲವು ಲೋಪದೋಷಗಳಿವೆ.

ಅದನ್ನು ಸರಿಪಡಿಸಬೇಕು ಎಂದರು. ಸಭೆಯಲ್ಲಿ ಒಕ್ಕೂಟದ ಕಾರ್ಯದರ್ಶಿ ಎಂ.ಆರ್‌. ರಾಜಾರಾಂ, ಕಲ್ಯಾಣ ಮಂಟಪಗಳ ಮಾಲೀಕರ ಸಂಘದ ಕಾರ್ಯದರ್ಶಿ ವಿನಯ್‌ ವೆಂಕಟೇಶ್‌, ಮನೋಜ್‌ ಶಣೈ, ಒಕ್ಕೂಟದ ಉಪಾಧ್ಯಕ್ಷ ಸಿ.ನಾರಾಯಣಗೌಡ, ಜಂಟಿ ಕಾರ್ಯದರ್ಶಿ ಕೆ.ಆರ್‌. ಸತ್ಯನಾರಾಯಣ, ನಿರ್ದೇಶಕರಾದ ಎಸ್‌.ಕೆ.ದಿನೇಶ್‌, ಎ.ಸುಧೀಂದ್ರ, ವೀರಭದ್ರಪ್ಪ, ಪಾಲಿಕೆ ಕಂದಾಯ ವಿಭಾಗದ ಉಪ ಆಯುಕ್ತ ಎಂ.ಎನ್‌.ಶಶಿಕುಮಾರ್‌, ಉದ್ದಿಮೆ ರಹದಾರಿ ಅಧಿಕಾರಿ ರೂಪಾ ಮತ್ತಿತರರು ಉಪಸ್ಥಿತರಿದ್ದರು.

 ಅವಮಾನಿಸುವ ಬ್ಯಾನರ್‌ ಅಳವಡಿಕೆ ಹಾಕುವುದಿಲ್ಲ

ನಗರಪಾಲಿಕೆ ವತಿಯಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಗಮಿಸಿ ತೆರಿಗೆ ಕಟ್ಟದವರ ಕಟ್ಟಡಗಳಿಗೆ ಬ್ಯಾನರ್‌ ಹಾಕಿದ್ದಾರೆ, ಇದರಿಂದಾಗಿ ಎಲ್ಲರಿಗೂ ಅವಮಾನವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಮುಂದೆ ಹಾಗಾಗದಂತೆ ಪಾಲಿಕೆ ನೋಡಿಕೊಳ್ಳುತ್ತದೆ. ಮೂಲಭೂತ ಸೌಕರ್ಯಗಳನ್ನು ಸ್ಥಗಿತಗೊಳಿಸುತ್ತಿರುವ ಬಗ್ಗೆಯೂ ಚರ್ಚೆ ನಡೆಸಿ ಹಾಗಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಆಯುಕ್ತ ಲಕ್ಷ್ಮೀಕಾಂತರೆಡ್ಡಿ ಹೇಳಿದರು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.