ಸ್ಪರ್ಧಾತ್ಮಕ ಪರೀಕ್ಷೆಗಳ ಆನ್‌ಲೈನ್‌ ಶಿಬಿರಕ್ಕೆ ಚಾಲನೆ

Team Udayavani, Nov 28, 2020, 12:44 PM IST

mysuru-tdy-2

ಮೈಸೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಲು ಯೋಜನೆ ಹಾಕಿಕೊಳ್ಳುವುದರೊಂದಿಗೆ ಆಸಕ್ತಿ ಇರುವ ವಿಷಯ ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡಬೇಕು ಎಂದು ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂಪಾಷ ಹೇಳಿದರು.

ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಆಯೋಜಿಸಿದ್ದ2020-21ರ ಐಎಎಸ್‌ ಮತ್ತು ಕೆಎಎಸ್‌ ಸ್ಪರ್ಧಾತ್ಮಕ ಪರೀಕ್ಷೆಗಳ ಆನ್‌ಲೈನ್‌ ಶಿಬಿರಕ್ಕೆ ವರ್ಚುವಲ್‌ ಕಾರ್ಯಕ್ರಮದ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶ್ವಾಸಾರ್ಹ ಪುಸ್ತಕಗಳ ಪರಾಮರ್ಶೆಯನ್ನು ವಿಸ್ತೃತವಾಗಿ ಮಾಡಬೇಕು.

ಕೋವಿಡ್‌ ವೇಳೆಯೂಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ಹಲವಾರು ಪರೀಕ್ಷೆಗಳಿಗೆ ಆನ್‌ ಲೈನ್‌ ತರಬೇತಿ ಆಯೋಜಿಸಿರುವುದು ಅಭಿನಂದನಾರ್ಹ. ವಿದ್ಯಾರ್ಥಿಗಳು ಸಮಯದ ಮಿತಿ ಹಾಕಿಕೊಂಡು ಪ್ರಶ್ನೆ ರೂಪಿಸಿ ಅದಕ್ಕೆ ಉತ್ತರ ನೀಡಬೇಕು. ಆಗ ನೀವು ಕೊಟ್ಟ ಉತ್ತರ ಸರಿ ಇದೆಯೋ ಇಲ್ಲವೋ ಎಂದು ನೋಡಿಕೊಂಡಾಗ ಖಚಿತವಾಗುತ್ತಾ ಹೋಗುತ್ತೀರಿ, ಆನಂತರ ಗೊಂದಲ ಇರುವ ವಿಷಯಕ್ಕೆ ಕೊನೆಯ ಎರಡು ತಿಂಗಳು ಹೆಚ್ಚು ಒತ್ತು ಕೊಟ್ಟರೆ ಅದನ್ನು ಸರಿಪಡಿಸಿಕೊಳ್ಳಬಹುದು ಎಂದು ಹೇಳಿದರು.

ಇದೇ ವೇಳೆ ಕಾರ್ಮಿಕ ಇಲಾಖೆ ಜಂಟಿ ಆಯುಕ್ತ ಎಸ್‌.ಬಿ. ರವಿಕುಮಾರ್‌ ಶಿಬಿರಾರ್ಥಿಗಳಿಗೆ ಶುಭಹಾರೈಸಿದರು. ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಎಂ.ಬಿ.ಚೆನ್ನಕೇಶವ, ನಗರ ಸಭೆ ಅಧಿಕಾರಿ ಎಂ. ಮಾನಸ, ಕುಲಪತಿ ಪ್ರೊ.ಎಸ್‌. ವಿದ್ಯಾಶಂಕರ್‌, ಕುಲಸಚಿವ ಪ್ರೊ. ಲಿಂಗರಾಜಗಾಂಧಿ, ಹಣಕಾಸು ಅಧಿಕಾರಿ ಡಾ.ಖಾದರ್‌ಪಾಷ, ಜೈನಹಳ್ಳಿ ಸತ್ಯ ನಾರಾಯಣಗೌಡ ಇತರರಿದ್ದರು.

ಕನಿಷ್ಠ ಒಂದೂವರೆ ವರ್ಷದ ತಯಾರಿ ಅಗತ್ಯ : ನಗರ ಪೊಲೀಸ್‌ ಉಪ ಆಯುಕ್ತ ಡಾ.ಎ.ಎನ್‌. ಪ್ರಕಾಶ್‌ಗೌಡ ಮಾತನಾಡಿ, ಯಾವುದೇ ಪರೀಕ್ಷೆ ಎದುರಿಸುವಾಗ ತಾಳ್ಮೆ ಎನ್ನುವುದುಕಡ್ಡಾಯವಾಗಿ ಇರಲೇಬೇಕು. ಯುಪಿಎಸ್ಸಿ ಸೇರಿದಂತೆ‌ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡಾಗ ಕನಿಷ್ಠ ಒಂದೂವರೆ ವರ್ಷದ ತಯಾರಿ ಬೇಕಾಗು ತ್ತದೆ. ತಾಳ್ಮೆ ಜತೆಗೆ ನಿಖರ ತಯಾರಿ ಇದ್ದರೆ ಯಶಸ್ಸು ನಿಮ್ಮದಾಗುತ್ತದೆ ಎಂದರು.ಕೇವಲ ವೈದ್ಯಕೀಯ ಇಲ್ಲವೇ ಎಂಜಿನಿಯರಿಂಗ್‌ ಮುಗಿಸಿದವರು ಐಎಎಸ್‌ ಪಾಸಾಗಬಹುದು. ಬೇರೆ ವಿಷಯಗಳನ್ನು ವ್ಯಾಸಂಗ ಮಾಡಿದವರೆಲ್ಲ ದಡ್ಡರು ಎಂದು ಭಾವಿಸುವ ಅಗತ್ಯವೇ ಇಲ್ಲ. ನಿಮ್ಮಲ್ಲಿರುವ ಆಸಕ್ತಿ ಆಧರಿಸಿ, ಪದವಿ ಪಡೆದ ವಿಷಯಗಳನ್ನೆ ಅಲ್ಲದೆ ಇತರ ಮೂಲಗಳಿಂದ ವಿಷಯ ಸಂಗ್ರಹಣೆ ಮಾಡಿಕೊಂಡಾಗ ಪರೀಕ್ಷೆಗೆ ತಯಾರಿ ಸುಲಭವಾಗುತ್ತದೆ ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.