Udayavni Special

ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಧಿಕಾರ


Team Udayavani, Aug 27, 2018, 11:51 AM IST

m4-staliya.jpg

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ 108 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈಸೂರು ಸೇರಿದಂತೆ ಬಹುತೇಕ ನಗರ ಪಾಲಿಕೆ ಹಾಗೂ ಪುರಸಭೆಗಳಲ್ಲಿ ಕಾಂಗ್ರೆಸ್‌ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಸ್ವತಂತ್ರವಾಗಿ ಸ್ಪರ್ಧೆ ಮಾಡಿದೆ. ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಸರ್ಕಾರದ ಅಭಿವೃದ್ಧಿ ಕೆಲಸಗಳ ವಿಚಾರ ಹಿನ್ನೆಲೆಗೆ ಸರಿದು, ಬಿಜೆಪಿಯವರು ಅಪಪ್ರಚಾರ, ಹಿಂದುತ್ವದ ವಿಚಾರಗಳು ಮುನ್ನೆಲೆಗೆ ತಂದು ಜನರನ್ನು ದಾರಿತಪ್ಪಿಸಿದ್ದರಿಂದ ಆ ಚುನಾವಣೆಯಲ್ಲಿ ನಮಗೆ ಹಿನ್ನಡೆ ಉಂಟಾಯಿತು.

ಆದರೂ ರಾಜಧಾನಿ ಬೆಂಗಳೂರಿನ ಜನತೆ ಬಿಜೆಪಿಯವರ ಅಪಪ್ರಚಾರಕ್ಕೆ ಮಣೆಹಾಕದೆ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಶಾಸಕರನ್ನು ಗೆಲ್ಲಿಸಿಕೊಟ್ಟಿದ್ದಾರೆ. ರಾಜ್ಯದ ಜನತೆಗೂ ಈಗ ಬಿಜೆಪಿಯವರ ಪೊಳ್ಳುತನ ಗೊತ್ತಾಗಿದೆ. ಹೀಗಾಗಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ಮತ್ತೆ ಅಧಿಕಾರ: ಮೈಸೂರು ಮಹಾ ನಗರಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ 40ಕ್ಕೂ ಹೆಚ್ಚು ಅಭ್ಯರ್ಥಿಗಳು ಗೆಲ್ಲಲಿದ್ದು, ಸ್ವಂತ ಶಕ್ತಿಯ ಮೇಲೆ ಮತ್ತೆ ಪಾಲಿಕೆಯ ಅಧಿಕಾರ ಹಿಡಿಯುವುದಾಗಿ ಹೇಳಿದರು.

ಜೆಡಿಎಸ್‌, ಬಿಜೆಪಿಯವರು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಾಗುವುದಿಲ್ಲ. ಬಿಜೆಪಿ ಶಾಸಕ ರಾಮದಾಸ್‌ ಅವರು ಪಾಲಿಕೆಯ ಅಧಿಕಾರ ಹಿಡಿಯುವುದಾಗಿ ಹೇಳಿಕೆ ನೀಡಿದ್ದಾರೆ. ಆದರೆ, ಈ ಚುನಾವಣೆಯಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕಿಳಿಯಲಿದೆ ಎಂದರು.

ಅನುದಾನ ಕೊಟ್ಟಿಲ್ಲ: ಮೈಸೂರು ನಗರಕ್ಕೆ ಬಿಜೆಪಿಯ ಮೂವರು ಮುಖ್ಯಮಂತ್ರಿಗಳ ಆಡಳಿತಾವಧಿಯಲ್ಲಿ ಕೊಟ್ಟಿದ್ದು ಕೇವಲ 50 ಕೋಟಿ ಅನುದಾನ. ಆದರೆ, ತಾವು ಮುಖ್ಯಮಂತ್ರಿಯಾಗಿದ್ದಾಗ ಐದು ವರ್ಷಗಳಲ್ಲಿ ಮೈಸೂರು ನಗರದ ಅಭಿವೃದ್ಧಿಗೆ 2532 ಕೋಟಿ ಅನುದಾನ ನೀಡಿದ್ದು, ಇದರಿಂದ ನಗರದ ರಸ್ತೆಗಳ ಅಭಿವೃದ್ಧಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ಕಟ್ಟಡ, ಜಯದೇವ ಹೃದ್ರೋಗ ಆಸ್ಪತ್ರೆ ಕಟ್ಟಡ, ಮಹಾರಾಣಿ ಕಾಲೇಜು ಕಟ್ಟಡ, ಅಂಬೇಡ್ಕರ್‌ ಭವನ ನಿರ್ಮಾಣ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಗಳಾಗಿವೆ.

ಪಾರಂಪರಿಕ ನಗರವಾದ ಮೈಸೂರು ಸ್ವತ್ಛತೆಯಲ್ಲಿ ಇಡೀ ದೇಶದಲ್ಲಿ ನಂಬರ್‌ ಒನ್‌ ಸ್ಥಾನಗಳಿಸಿದ್ದು ಕೂಡ ನಮ್ಮ ಸರ್ಕಾರದ ಅವಧಿಯಲ್ಲೇ ಎಂದು ಬಣ್ಣಿಸಿದರು. ಕೇಂದ್ರದ ಮಾಜಿ ಸಚಿವ ಪಲ್ಲಂರಾಜು, ನಗರ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಮೂರ್ತಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌,ವಿಧಾನಪರಿಷತ್‌ ಸದಸ್ಯ ಆರ್‌.ಧರ್ಮಸೇನ ಮೊದಲಾದವರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Padikkal-ABD

ಫಿಂಚ್, ಪಡಿಕ್ಕಲ್ ಫಿಪ್ಟೀ ; ABD ಮಸ್ತ್ ಬ್ಯಾಟಿಂಗ್ ಮುಂಬೈ ಗೆಲುವಿಗೆ 202 ರನ್ ಗಳ ಟಾರ್ಗೆಟ್

LACಯಲ್ಲಿ ಬ್ರಹ್ಮೋಸ್, ಆಕಾಶ್ ಮತ್ತು ನಿರ್ಭಯಾ ನಿಯೋಜನೆ ; ಹೆಚ್ಚುತ್ತಿದೆ ಗಡಿ ಟೆನ್ಷನ್!

LACಯಲ್ಲಿ ಬ್ರಹ್ಮೋಸ್, ಆಕಾಶ್ ಮತ್ತು ನಿರ್ಭಯಾ ನಿಯೋಜನೆ ; ಹೆಚ್ಚುತ್ತಿದೆ ಗಡಿ ಟೆನ್ಷನ್!

lords of rings : ಈ “ಗಿಮ್ಲಿ’ ಚಿತ್ರದಲ್ಲಿರುವ ವಿಶೇಷತೆ ಬಗ್ಗೆ ಗೊತ್ತಾ?

lords of rings : ಈ “ಗಿಮ್ಲಿ’ ಚಿತ್ರದಲ್ಲಿರುವ ವಿಶೇಷತೆ ಬಗ್ಗೆ ಗೊತ್ತಾ?

ಆಕಸ್ಮಿಕ ವಿದ್ಯುತ್ ತಗುಲಿ ಎತ್ತಿನೊಂದಿಗೆ ಇಬ್ಬರು ರೈತರ ಸಾವು

ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ವಿದ್ಯುತ್ ಅವಘಡ ಎತ್ತು ಸೇರಿ ಇಬ್ಬರು ರೈತರ ಸಾವು

0

ಆರ್ ಸಿಬಿ – ಮುಂಬೈ : ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ಟಬ್‌ಗ ಬಿದ್ದ ಆನೆ ಮರಿ; ಗಜ ಸ್ನಾನದ ವೈಖರಿಗೆ ಮನಸೋತ ನೆಟ್ಟಿಗರು!

ಟಬ್‌ಗ ಬಿದ್ದ ಆನೆ ಮರಿ; ಗಜ ಸ್ನಾನದ ವೈಖರಿಗೆ ಮನಸೋತ ನೆಟ್ಟಿಗರು!

ಮಂತ್ರಾಲಯ ವಿದ್ಯಾಪೀಠದ ಮಕ್ಕಳ ಬಯಕೆಯನ್ನು ಈಡೇರಿಸಿದ ಸುಬುಧೇಂದ್ರ ಶ್ರೀಗಳು..!

ಮಂತ್ರಾಲಯ ವಿದ್ಯಾಪೀಠದ ಬಾಲಕನ ಬಯಕೆಯನ್ನು ಈಡೇರಿಸಿದ ಸುಬುಧೇಂದ್ರ ಶ್ರೀಗಳು..!






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಂಬೂಸವಾರಿಗೆ 2 ಸಾವಿರ ಮಂದಿಗಷ್ಟೇ ಅವಕಾಶ

ಜಂಬೂಸವಾರಿಗೆ 2 ಸಾವಿರ ಮಂದಿಗಷ್ಟೇ ಅವಕಾಶ

ಇಲ್ಲಿ ರಾತ್ರಿ ಚಿರತೆ ಸಂಚಾರ ! ಹಟ್ಟಿಯಲ್ಲಿದ್ದ ಕರು ಸಾವು, ಆತಂಕದಲ್ಲಿ ಗ್ರಾಮಸ್ಥರು

ರಾತ್ರಿ ವೇಳೆ ಚಿರತೆ ಸಂಚಾರ! ಹಟ್ಟಿಯಲ್ಲಿದ್ದ ಕರುವಿನ ಮೇಲೆ ದಾಳಿ, ಆತಂಕದಲ್ಲಿ ಗ್ರಾಮಸ್ಥರು

cn-tdy-2

ಎನ್‌ಇಪಿ ಪರಿಣಾಮಕಾರಿ ಜಾರಿಗೆ ವಿವಿ ನಿರ್ಧಾರ

ದಳ್ಳಾಳಿ ವ್ಯವಸ್ಥೆಯಿಂದ ರೈತರನ್ನ ಮುಕ್ತ ಮಾಡುವುದು ತಪ್ಪಾ? : ಪ್ರತಾಪ್ ಸಿಂಹ

ದಳ್ಳಾಳಿ ವ್ಯವಸ್ಥೆಯಿಂದ ರೈತರನ್ನ ಮುಕ್ತ ಮಾಡುವುದು ತಪ್ಪಾ? : ಪ್ರತಾಪ್ ಸಿಂಹ

ಬಾವಿಯಲ್ಲಿ ಆಶ್ರಯ ಪಡೆದಿದ್ದ ಬರೋಬ್ಬರಿ 750 ಕೆಜೆ ತೂಕದ ಮೊಸಳೆ ಸೆರೆ

ಬಾವಿಯಲ್ಲಿ ಆಶ್ರಯ ಪಡೆದಿದ್ದ ಬರೋಬ್ಬರಿ 750 ಕೆಜಿ ತೂಕದ ಮೊಸಳೆ ಸೆರೆ

MUST WATCH

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ

udayavani youtube

JD(s) workers clash with Police at Shimoga anti farm bill protest | Udayavani

udayavani youtube

ಹೀರೆಕಾಯಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ



ಹೊಸ ಸೇರ್ಪಡೆ

Isiri-tdy-3

ವಿಮೆ ಇದ್ದವನೇ ಶೂರ!

Padikkal-ABD

ಫಿಂಚ್, ಪಡಿಕ್ಕಲ್ ಫಿಪ್ಟೀ ; ABD ಮಸ್ತ್ ಬ್ಯಾಟಿಂಗ್ ಮುಂಬೈ ಗೆಲುವಿಗೆ 202 ರನ್ ಗಳ ಟಾರ್ಗೆಟ್

ಯಾವುದು ಬೇಕೋ ಆರಿಸಿಕೊಳ್ಳಿ…

ಯಾವುದು ಬೇಕೋ ಆರಿಸಿಕೊಳ್ಳಿ…

ಮಂಡ್ಯ: 207 ಮಂದಿಗೆ ಹೊಸದಾಗಿ ಕೋವಿಡ್ 19 ಸೋಂಕು : 79 ಮಂದಿ ಬಿಡುಗಡೆ

ಮಂಡ್ಯ: 207 ಮಂದಿಗೆ ಹೊಸದಾಗಿ ಕೋವಿಡ್ 19 ಸೋಂಕು : 79 ಮಂದಿ ಬಿಡುಗಡೆ

isiri-tdy-1

ಗ್ರಾಮೀಣ ಯುವಕನ ಸಾಧನೆ : ರೈತ ಪರ ಡಂಪರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.