ಹೊಸರಾಮನಹಳ್ಳಿ ಗ್ರಾಮಸ್ಥರಿಂದ ಕಾಂಗ್ರೆಸ್‌ ಅಭ್ಯರ್ಥಿಗೆ ದೇಣಿಗೆ

Team Udayavani, Apr 18, 2018, 12:47 PM IST

m2-hosa.jpg

ಹುಣಸೂರು: ದಿವಂಗತ ಶಾಸಕ ಚಿಕ್ಕಮಾದು ಹುಟ್ಟೂರಾದ ಹೊಸರಾಮನಹಳ್ಳಿಯಲ್ಲಿ  ಅವರ ಅಗಲಿಕೆ ಬಳಿಕ ಅವರ ಕುಟುಂಬ ಕಾಂಗ್ರೆಸ್‌ ಸೇರಿದ್ದಲ್ಲದೆ, ಇಡೀ ಗ್ರಾಮವೇ ಕಾಂಗ್ರೆಸ್‌ ಪಕ್ಷ ಬೆಂಬಲಿಸುತ್ತಿರುವುದು ಸಂತಸ ತಂದಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ್‌ ಹೇಳಿದರು. 

ತಾಲೂಕಿನ ಹೊಸರಾಮನಹಳ್ಳಿಯಲ್ಲಿ ಚುನಾವಣಾ ವೆಚ್ಚಕ್ಕೆ ದೇಣಿಗೆ ನೀಡಿ ಬೆಂಬಲ ವ್ಯಕ್ತಪಡಿಸಿದ ಕಾಂಗ್ರೆಸ್‌ ಪಕ್ಷದ ಮುಖಂಡರು ಹಾಗೂ ಜನಪ್ರತಿನಿಧಿಗಳೊಂದಿಗೆ ಗ್ರಾಮದ ಎಲ್ಲ ಬೀದಿಗಳಲ್ಲಿ ಸಂಚರಿಸಿ ಮತ ಯಾಚಿಸಿದ ವೇಳೆ ಮಾತನಾಡಿದ ಅವರು, ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕೆಲಸ ಮಾಡಿಸಿರುವ ತೃಪ್ತಿ ನನಗಿದೆ ಎಂದರು.

ಪಕ್ಕದ ಹಳೇಬೀಡು, ಬಿಳಿಕೆರೆ, ಜೀನಹಳ್ಳಿ ಕೆರೆಗಳಿಗೆ ಹೊಸರಾಮನಹಳ್ಳಿ ಏತ ನೀರಾವರಿ ಯೋಜನೆ ಮೂಲಕ 25 ವರ್ಷಗಳ ನಂತರ ನೀರು ತುಂಬಿಸಿರುವೆ. ಆ ಮೂಲಕ ಅಂತರ್ಜಲ ವೃದ್ಧಿ ಹಾಗೂ ಜನ-ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಿದ್ದೇನೆಂಬ ತೃಪ್ತಿ ಇದೆ.

ಅದೇ ರೀತಿ ಲಕ್ಷ್ಮಣತೀರ್ಥ ನದಿಯ ಆಯರಹಳ್ಳಿ ಏತ ನೀರಾವರಿ ಯೋಜನೆಗೆ ಚೆಕ್‌ ಡ್ಯಾಂ ನಿರ್ಮಾಣ, ಚೋಳನಹಳ್ಳಿ ಕೆರೆ, ಬೋಲನಹಳ್ಳಿ ಕೆರೆ ಹಾಗೂ ಮೈದನಹಳ್ಳಿ ಕೆರೆಗಳಿಗೆ ನೀರು ಒದಗಿಸುವ ಯೋಜನೆ ಮಂಜೂರು ಮಾಡಿಸಿದ್ದೇನೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ಹಲವು ಭಾಗ್ಯಗಳನ್ನು ಕಲ್ಪಿಸುವ ಮೂಲಕ ಬಡವರಿಗೆ ನೆರವಾಗಿದೆ.

ಕ್ಷೇತ್ರದ ಮತ್ತಷ್ಟು ಅಭಿವೃದ್ಧಿ ಮಾಡಲು ಜನ ಮತ್ತೆ ನನ್ನನ್ನು ಬೆಂಬಲಿಸಬೇಕೆಂದು ಹೇಳಿದರು. ಜಿಪಂ ಸದಸ್ಯೆ ಗೌರಮ್ಮ, ಮಾಜಿ ಸದಸ್ಯ ಮಂಜು, ಚಿಕ್ಕಮಾದು ಪುತ್ರಿ ಮಮತಾ, ತಾಪಂ ಮಾಜಿ ಸದಸ್ಯ ಸಿದ್ದನಾಯ್ಕ, ಗ್ರಾಪಂ ಮಾಜಿ ಅಧ್ಯಕ್ಷ ಚೌಡನಾಯ್ಕ, ಬಿಳಿಕೆರೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾರಾಯಣ್‌, ಯುವ ಅಧ್ಯಕ್ಷ ಸ್ವಾಮಿ ಇತರರಿದ್ದರು. 

ಲಕ್ಷ ರೂ. ದೇಣಿಗೆ: ಹೊಸರಾಮನಹಳ್ಳಿಯಲ್ಲಿ ನಡೆದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಗ್ರಾಮಸ್ಥರು ಅಭ್ಯರ್ಥಿ ಶಾಸಕ ಎಚ್‌.ಪಿ.ಮಂಜುನಾಥರಿಗೆ ಚುನಾವಣಾ ವೆಚ್ಚಕ್ಕಾಗಿ ಒಂದು ಲಕ್ಷ ರೂ. ದೇಣಿಗೆ ನೀಡಿದರು. ಸೆಸ್ಕ್ ನಿವೃತ್ತ ನೌಕರ ರಾಜಪ್ಪ 10 ಸಾವಿರ ರೂ. ವೈಯಕ್ತಿಕ ದೇಣಿಗೆ ನೀಡಿದರು. 

ಪಕ್ಷ ಸೇರ್ಪಡೆ: ಗ್ರಾಪಂ ಸದಸ್ಯ ಶಿವಕುಮಾರ್‌, ಯಜಮಾನರಾದ ಮಹದೇವನಾಯ್ಕ, ಚೌಡನಾಯ್ಕ, ಸಿದ್ದನಾಯ್ಕ, ಬೋಳನಹಳ್ಳಿಯ ರವಿಕುಮಾರ್‌, ಮಾಜಿ ಅಧ್ಯಕ್ಷ ಚೌಡನಾಯ್ಕ, ಮಣಿಲಾಸಿದ್ದನಾಯ್ಕ ನೂರಾರು ಮಂದಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರು.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.