ನಾಗನಹಳ್ಳಿಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಹೊಡೆದಾಟ

Team Udayavani, May 7, 2018, 2:50 PM IST

mk3-naganahalli.jpg

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ಗುಂಪುಗಳ ನಡುವೆ ಮಾರಾಮಾರಿ ನಡೆದು ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಚುನಾವಣೆಗೆ ಕೆಲವು ದಿನಗಳಷ್ಟೇ ಬಾಕಿಯಿರುವ ಹಿನ್ನೆಲೆಯಲ್ಲಿ ನಟ ದರ್ಶನ್‌ ಶನಿವಾರ ಸಿಎಂ ಸಿದ್ದರಾಮಯ್ಯ ಪರವಾಗಿ ಪ್ರಚಾರ ನಡೆಸಿದ್ದರು. ದರ್ಶನ್‌ ಗ್ರಾಮಕ್ಕೆ ಬಂದಾಗಲೇ ಜೆಡಿಎಸ್‌ ಕಾರ್ಯಕರ್ತರು ಪ್ರತಿರೋಧ ತೋರಿ ವಿರೋಧಿಸಿದ್ದರು.

ಇದೇ ವಿಚಾರವಾಗಿ ಶನಿವಾರ ರಾತ್ರಿ ಎರಡು ಪಕ್ಷದ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಗಿದೆ. ಅಲ್ಲದೆ ಮಾರಾಕಾಸ್ತ್ರಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮೇಟಗಳ್ಳಿ ಠಾಣೆ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಲ್ಲದೆ ಎರಡು ಗುಂಪಿನ ಕಡೆಯವರು ನೀಡಿದ ದೂರು-ಪ್ರತಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿರುವ ಪೊಲೀಸರು, ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಿದ್ದಾರೆ. ಘಟನೆಯಲ್ಲಿ ಗ್ರಾಮದ ನಿವಾಸಿಗಳಾದ ಜಯದೇವ, ವಿದ್ಯಾಶಂಕರ್‌, ಲೋಹಿತ್‌, ಅರ್ಜುನ್‌, ಅಭಿಷೇಕ್‌, ಉಮಾ ಶಂಕರ್‌, ಅನಿಲ್‌ ಕುಮಾರ್‌, ರಜತ್‌ ಗಾಯಗೊಂಡಿದ್ದಾರೆ. ಈ ಗಾಯಾಳುಗಳನ್ನು ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಶಾಸಕ ಜಿಟಿಡಿಗೆ ತರಾಟೆ: ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಜೆಡಿಎಸ್‌ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವ ವಿಷಯ ತಿಳಿದ ಶಾಸಕ ಜಿ.ಟಿ.ದೇವೇಗೌಡ ಭಾನುವಾರ ಬೆಳಗ್ಗೆ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಅವರ ಕಾರನ್ನು ಅಡ್ಡಗಟ್ಟಿದ ಗ್ರಾಮದ ಮಹಿಳೆಯರು ಶಾಸಕ ಜಿ.ಟಿ. ದೇವೇಗೌಡರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ, ನಿಮ್ಮ ಕುಮ್ಮಕ್ಕಿನಿಂದಲೇ ನಮ್ಮ ಹುಡುಗರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಿದರು.

ಈ ವೇಳೆ ಜಿಟಿಡಿ ಕೂಡ ಚುನಾವಣೆ ವೇಳೆ ಗ್ರಾಮದಲ್ಲಿ ಗಲಾಟೆ ಸರಿಯಲ್ಲ ಎಂದು ಗ್ರಾಮಸ್ಥರನ್ನು ಸಮಾಧಾನಪಡಿಸುವ ಪ್ರಯತ್ನ ಮಾಡಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರ ನೆರವಿನಿಂದ ಗ್ರಾಮದಿಂದ ತೆರಳಿದರು. ಸದ್ಯ ಗ್ರಾಮದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.