ಕಾಂಗ್ರೆಸ್‌ನಿಂದ ಕಳಲೆ ಕೇಶವಮೂರ್ತಿ

Team Udayavani, Mar 21, 2017, 1:19 PM IST

mys2.jpg

ನಂಜನಗೂಡು: ಕಾಂಗ್ರೆಸ್‌ ಹಾಗೂ ಬಿಜೆಪಿ ಪಾಲಿಗೆ ಅತ್ಯಂತ ಪ್ರತಿಷ್ಠೆಯಾಗಿರುವ ನಂಜನ ಗೂಡಿನ ಉಪಚುನಾವಣೆಗೆ ಸೋಮವಾರ ಎರಡೂ ಪಕ್ಷಗಳ ಅಭ್ಯರ್ಥಿಗಳಾದ ವಿ. ಶ್ರೀನಿವಾಸ ಪ್ರಸಾದ್‌ ಹಾಗೂ ಕಳಲೆ ಕೇಶವ ಮೂರ್ತಿ ನಾಮಪತ್ರ ಸಲ್ಲಿಸಿದರು.

ಸೋಮವಾರ ಬೆಳಗ್ಗೆ ನಗರದ ಊಟಿ ರಸ್ತೆಯಲ್ಲಿರುವ ಚಿಂತಾಮಣಿ ಗಣಪತಿ ದೇವಾಲಯಕ್ಕೆ ಬೆಳಗ್ಗೆ 11ಗಂಟೆಗೆ ಕಾಂಗ್ರೆಸ್‌ ಅಭ್ಯರ್ಥಿ ಕೇಶವ ಮೂರ್ತಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ, ಸಂಸದ ಆರ್‌ ಧ್ರುವನಾರಾಯಣ ಹಾಗೂ ಪ್ರದೇಶ ಕಾಂಗ್ರೆಸ್‌ ಕಾರ್ಯಾಧ್ಯಕ್ಷ  ದಿನೇಶಗುಂಡುರಾವ್‌  ಅವರೊಂದಿಗೆ ಚಿಂತಾಮಣಿ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.

ನಂತರ ಕಾಂಗ್ರೆಸ್‌ ಬೆಂಬಲಿಗರು ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸುತ್ತಾ ವಿಶ್ವೇಶ್ವರಯ್ಯ ವೃತ್ತವನ್ನೂ ಹಾದು ಮಹಾತ್ಮ ಗಾಂಧಿ ರಸ್ತೆಯ ಮೂಲಕ ತಾಲೂಕು ಕಚೇàರಿಯತ್ತ ಕೇಶವ ಮೂರ್ತಿ ಹಾಗೂ ಪಕ್ಷದ ನಾಯಕರೊಂದಿಗೆ  ಮೆರವಣಿಗೆಯಲ್ಲಿ ಸಾಗಿದರು.

ತೆರದ ವಾಹನದಲ್ಲಿ ನಾಯಕರು: ಕೈ ಅಭ್ಯರ್ಥಿ ಕೇಶವ ಮೂರ್ತಿ ಹಾಗೂ ಮುಖಂ ಡರು ತೆರದ ವಾಹನದಲ್ಲಿ ಬುರುತ್ತಿರು ವಾಗಲೇ ಗುಂಡುರಾವ್‌ ಹಾಗೂ ಎಚ್‌.ಸಿ ಮಹದವೇಪ್ಪ ಪಕ್ಷಕ್ಕೆ ಬೆಂಬಲ ಕೋರಿದರು.

100 ಮೀ. ದೂರದಲ್ಲೆ ಮೆರವಣಿಗೆ ತಡೆದರು: ಮೆರವಣಿಗೆ  ಎಂಜಿಎಸ್‌ ರಸ್ತೆಯಲ್ಲಿ ತಾಲೂಕು ಕಚೇರಿಯ ಬಳಿ ಬುರುತ್ತಿದ್ದಾಗ 100 ದೂರದಲ್ಲೆ  ಪೊಲೀಸರು ತಡೆದು ಮುಂದೆೆ ಮೆರವಣಿಗೆಗೆ ಅವಕಾಶವಿಲ್ಲ ಎಂದು ಹೇಳಿ ಮುಖಂಡರನ್ನು ಮಾತ್ರ ಒಳ ಬಿಟ್ಟರು.

ಜಿಲ್ಲಾ ಪೊಲೀಸ್‌ ಅಧಿಕಾರಿ ರವಿ ಚೆನ್ನಣ್ಣನವರ್‌ ಹಾಜರಿದ್ದು ನಾಮಪತ್ರ ಸಲ್ಲಿಸಲು ಕೇವಲ ಐದು ಜನರಿಗೆ ಮಾತ್ರ ಅವಕಾಶ ಎಂದು ಹೇಳಿದಾಗ ಅಭ್ಯರ್ಥಿ ಕೇಶವಮೂರ್ತಿ, ಉಸ್ತುವಾರಿ ಸಚಿವ ಡಾ ಎಚ್‌.ಸಿ ಮಹದೇವಪ್ಪ, ದಿನೇಶ ಗುಂಡುರಾವ್‌ ಹಾಗೂ ಕಾಗಲಾವಾಡಿ ಮಾದಪ್ಪ ಒಳಹೋಗಿ ಚುನಾವಣಾಧಿಕಾರಿ ಜಗದೀಶ್‌ ಅವರಿಗೆ ನಾಮ ಪತ್ರ ಸಲ್ಲಿಸಿದರು.

ಕಾಂಗ್ರೆಸ್‌ ಗೆಲ್ಲುವ ವಿಶ್ವಾಸ: ನಂತರ ಡಾ ಎಚ್‌.ಸಿ ಮಹದೇವಪ್ಪ ಮಾತನಾಡಿ, ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಜಯ ಗಳಿಸಲಿದೆ ಎಂದರು. 8 ವರ್ಷದ ಅಧಿಕಾರದ ಕೆಲಸ ಹಾಗೂ 6 ತಿಂಗಳಿನ ಅಭಿವೃದ್ಧಿ ಕ್ಷೇತ್ರದ ಜನತೆಯ ಮುಂದಿದೆ ಇದನ್ನು ಮುಂದಿಟ್ಟುಕೊಂಡೆ ತಾವು ಹಾಗೂ ಸಂಸದ ಆರ್‌ ಧ್ರುವ ನಾರಾಯಣ ಎರಡೆರಡು ಬಾರಿ ತಾಲೂಕನ್ನು ಸುತ್ತಿದ್ಧೇವೆ. ಜನತೆಗೆ ಕೆಲಸ ಮಾಡುವವರು ಯಾರು ಸೋಮಾರಿಗಳು ಯಾರು ಎನ್ನುವುದು ತಿಳಿದಿದೆ.

ಜನತೆ ಕಾಂಗ್ರೆಸ್‌ನ್ನೆ ಬೆಂಬಲಿಸಲಿದ್ದಾರೆ ಎಂದು ತಿಳಿಸಿದರು. ಕಳಲೆ ಕೇಶವಮೂರ್ತಿ ಮಾತನಾಡಿ, 2 ಬಾರಿ ಜೆಡಿಎಸ್‌ ನಿಂದ ನಿಂತು ಸೋತು ಬಳಲಿದ್ದೆœàನೆ ಇದೊಂದು ಬಾರಿ ಅಧಿಕಾರ ಬೇಡುತ್ತಿದ್ದೆœàನೆ ಜನತೆ ಆಶೀರ್ವಾದ ಮಾಡಲಿದ್ದಾರೆ ಎಂದರು.

ಚಾಮರಾಜನಗರ ಉಸ್ತುವಾರಿ ಸಚಿವ ಯು.ಟಿ ಖಾದರ್‌, ಮಾಜಿ ಸಚಿವ ಸತೀಶ್‌ ಜಾರಕಿಹೊಳಿ, ಶಾಸಕ ವಾಸು, ಸೋಮಣ್ಣ, ಪುಟ್ಟರಂಗಶೆಟ್ಟಿ, ಕಾಂಗ್ರೆಸ್‌ ಯುವ ಮುಖಂಡ ಸುನಿಲ್‌ ಬೋಸ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ|ವಿಜಯ್‌ ಕುಮಾರ್‌, ಮುಖಂಡರಾದ ಕೆ.ಮರಿಗೌಡ, ಮೂಗಶೆಟ್ಟಿ, ಕೆ.ಮಾರುತಿ, ಸೀತಾರಾಮ್‌, ಇಂಧನ್‌ ಬಾಬು, ಗುರುಪಾದಸ್ವಾಮಿ ಇತರರು ಇದ್ದರು.

ಟಾಪ್ ನ್ಯೂಸ್

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.