ಕಾಂಗ್ರೆಸ್ಸಿಗರು ನಿಜವಾದ ಹಿಂದೂಗಳು: ವಿ.ಎಸ್.ಉಗ್ರಪ್ಪ
Team Udayavani, Nov 30, 2022, 9:00 PM IST
ಮೈಸೂರು: ಕಾಂಗ್ರೆಸ್ಸಿಗರು ನಿಜವಾದ ಹಿಂದೂಗಳು. ಆರೆಸ್ಸೆಸ್ ಮತ್ತು ಬಿಜೆಪಿ ಹಿಂದುತ್ವದ ವಿರೋಧಿಗಳು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಕಿಡಿಕಾರಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದುತ್ವದ ತತ್ವ ಸರ್ವೇ ಜನಾ ಸುಖೀನ ಭವಂತು, ವಸುದೈವ ಕುಟುಂಬಕಂನಲ್ಲಿ ನಂಬಿಕೆ ಇಟ್ಟಿದೆ. ಆದರೆ ಸಂಘ ಪರಿವಾರ, ಬಿಜೆಪಿಯವರಿಗೆ ಮನುವಾದದಲ್ಲಿ ನಂಬಿಕೆ ಇದೆ. ಹಾಗಾಗಿ ಇವರು ಹಿಂದೂಗಳಲ್ಲ. ಬದಲಿಗೆ ಮನುವಾದಿಗಳು ಎಂದು ಕುಟುಕಿದರು.
ಮೇಲ್ವರ್ಗದ ಬಡವರಿಗೆ ಶೇ. 10 ಮೀಸಲು ನೀಡಿರುವುದು ಸಂವಿಧಾನ ಮತ್ತು ಅಂಬೇಡ್ಕರ್ ವಿಚಾರಕ್ಕೆ ದ್ರೋಹ ಎಸಗಿದಂತೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ಯಾವ ಆಧಾರದಲ್ಲಿ ಮೀಸಲು ಕೊಡಬೇಕೆಂದು ಸ್ಪಷ್ಟವಾಗಿ ಬರೆದಿದ್ದಾರೆ. ಅದರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲು ನೀಡಬೇಕೆಂದು ಇಲ್ಲ ಎಂದು ತಿಳಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಅವರು ಚುನಾವಣೆ ವೇಳೆ ಏಕರೂಪ ನಾಗರಿಕ ಸಂಹಿತೆ ಜಾರಿ ಸಂಬಂಧ ಪ್ರಸ್ತಾಪ ಮಾಡುತ್ತಿದ್ದಾರೆ. ಆದರೆ, ವಿಚಾರ ಪಾರ್ಲಿಮೆಂಟಿನಲ್ಲಿ ಚರ್ಚೆಯಾಗಿ ಅಂಗೀಕರಿಸಬೇಕು. ಬಿಜೆಪಿಯವರು ನಿಜ ಹಿಂದುತ್ವವಾದಿಗಳಾಗಿದ್ದರೆ ಪಾರ್ಲಿಮೆಂಟಿನಲ್ಲಿ ಅಂಗೀಕಾರ ಮಾಡಬೇಕು.
– ವಿ.ಎಸ್.ಉಗ್ರಪ್ಪ, ಮಾಜಿ ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಗವಂತನಿಗಿಂತ ಮೊದಲೇ ಕುಮಾರಸ್ವಾಮಿಗೆ ತಿಳಿಯುತ್ತದೆ: ಸಿ.ಸಿ.ಪಾಟೀಲ್
ಗಂಗಾವತಿ: ಪೊಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ 6 ಯುವಕರ ಬಂಧನ
ಹೊಳಲ್ಕೆರೆಯಲ್ಲಿ ಮೊಳಗಲಿದೆ ಪ್ರಜಾಧ್ವನಿ… ಬಿಜೆಪಿ ನಾಯಕರಲ್ಲಿ ನಡುಕ
ಜಿಪಂ-ತಾಪಂ ಚುನಾವಣೆ: ಫೆ.14ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಯಲ್ಲಾಪುರ: ಹೆಣ್ಣು ಚಿರತೆ ಅಸಹಜ ಸಾವು, ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ