ಜಲಮೂಲ ಮರುಹೂರಣಕ್ಕೆ ಕೈಜೋಡಿಸಿ


Team Udayavani, Sep 14, 2019, 3:00 AM IST

jalamoola

ಹುಣಸೂರು: ಪ್ರಾಚೀನ ಕಾಲದಿಂದಲೂ ಕೆರೆ, ಕೊಳ, ಪುಷ್ಕರಣಿ, ಬಾವಿಗಳು ಜನರ ಕುಡಿಯುವ ನೀರಿನ ಬೇಡಿಕೆಗಳನ್ನು ನೀಗಿಸುತ್ತಿದ್ದವು. ಪ್ರಸಕ್ತ ಕಾಲಘಟ್ಟದಲ್ಲಿ ಈ ಜಲ ಮೂಲಗಳು ವಿವಿಧ ಕಾರಣಗಳಿಂದ ಬಳಕೆಗೆ ಯೋಗ್ಯವಿಲ್ಲದಂತಾಗಿವೆ. ಪುನರುಜ್ಜೀವನ ಗೊಳಿಸದಿದ್ದರೆ ಮುಂದೆ ಜೀವಜಲಕ್ಕೆ ಹಾಹಾಕಾರ ಎದುರಾಗಲಿದೆ ಎಂದು ನಗರಸಭೆ ಪೌರಾಯುಕ್ತ ಎಸ್‌.ಶಿವಪ್ಪನಾಯಕ ಆತಂಕ ವ್ಯಕ್ತಪಡಿಸಿದರು. ನಗರದ ಮಹಿಳಾ ಪದವಿ ಕಾಲೇಜಿನಲ್ಲಿ ಶುಕ್ರವಾರ ಜಲಶಕ್ತಿ ಅಭಿಯಾನ ಯೋಜನೆ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.

ಅಭಿಯಾನ ಯಶಸ್ವಿಗೊಳಿಸಿ: ಜಲಮೂಲಗಳ ಒತ್ತುವರಿ, ಅನಾವಶ್ಯಕವಾಗಿ ಹೆಚ್ಚಿನ ಬಳಕೆ, ಅಕ್ರಮ ಬೋರ್‌ವೆಲ್‌ ಕೊರೆಯುವಿಕೆಯಿಂದಲೂ ಜಲಮೂಲಗಳು ಬರಿದಾಗುತ್ತಿವೆ. ನೀರಿನ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಹೀಗಾಗಿ ಜಲಶಕ್ತಿ ಅಭಿಯಾನದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಜಲಮೂಲಗಳ ರಕ್ಷಣೆಗೆ ಸರ್ಕಾರಗಳು ಮುಂದಾಗಿವೆ. ಈ ಕುರಿತು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಶಾಲಾ ವಿದ್ಯಾರ್ಥಿಗಳು, ಸಂಘ, ಸಂಸ್ಥೆಯವರು ಭಾಗವಹಿಸುವ ಮೂಲಕ ಜಲಶಕ್ತಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ರಸಪ್ರಶ್ನೆ ಸ್ಪರ್ಧೆ: ನಂತರ ನಗರಸಭೆ ಅವರಣದಲ್ಲಿ ಮಳೆ ನೀರು ಕೊಯ್ಲು, ಸಂಸ್ಕರಿಸಿದ ಕೊಳಚೆ ನೀರಿನ ಮರುಬಳಕೆ, ನೀರಿನ ಮೂಲಗಳ ಜೀರ್ಣೋದ್ಧಾರ, ಪುನಶ್ಚೇತನ, ಹಸಿರೀಕರಣ-ಗಿಡ ನೆಡುವ ವಿಷಯ ಕುರಿತು ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ರಸಪ್ರಶ್ನೆ ಸ್ಪರ್ಧೆಯಲ್ಲಿ ಬ್ರಿಲಿಯನ್ಸ್‌ ಸ್ಕೂಲ್‌ 45 ಅಂಕ ಪಡೆದು ಪ್ರಥಮ ಸ್ಥಾನ, ನ್ಯೂ ಕೇಂಬ್ರಿಡ್ಜ್ ಸ್ಕೂಲ್‌ 25 ಅಂಕದೊಂದಿಗೆ ದ್ವಿತೀಯ ಸ್ಥಾನ ಹಾಗೂ ಮಾಧವ ಪ್ರೌಢಶಾಲೆ ತೃತೀಯ ಸ್ಥಾನ ಪಡೆಯಿತು.

ಚರ್ಚಾ ಸ್ಪರ್ಧೆಯಲ್ಲಿ ಮಾಧವ ಪ್ರೌಢಶಾಲೆಯ ವಿದ್ಯಾರ್ಥಿ ಅಂಕೇಶ (ಪ್ರಥಮ), ಬ್ರಿಲಿಯನ್ಸ್‌ ಸ್ಕೂಲ್‌ನ ಐಶ್ವರ್ಯ (ದ್ವಿತೀಯ), ಚಿತ್ರಕಲಾ ಸ್ಪರ್ಧೆಯಲ್ಲಿ ಪೃಥ್ವಿನ್‌ ಕೆಂಡಗಣ್ಣ (ಪ್ರಥಮ) ನ್ಯೂ ಕೇಂಬ್ರಿಡ್ಜ್ ಸ್ಕೂಲ್‌, ಸರ್ಕಾರಿ ಪದವಿ ಪೂರ್ವ ಬಾಲಕರ ಪ್ರೌಢಶಾಲೆಯ ಸುಬ್ರಹ್ಮಣ್ಯ. ಆರ್‌, (ದ್ವಿತೀಯ), ಮಾಧವ ಪ್ರೌಢಶಾಲೆ ಅಂಕೇಶ್‌ ತೃತೀಯ ಸ್ಥಾನಗಳಿಸಿ ಬಹುಮಾನ ಹಾಗೂ ಪ್ರಶಂಸನೀಯ ಪತ್ರ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಮಹಿಳಾ ಕಾಲೇಜಿ ಪ್ರಾಚಾರ್ಯ ಜ್ಞಾನಪ್ರಕಾಶ್‌, ಅಧ್ಯಾಪಕರಾದ ಪುಟ್ಟಶೆಟ್ಟಿ, ನಗರಸಭೆ ಎಂಜಿನಿಯರ್‌ ಸಿ.ಎನ್‌.ಅನುಪಮಾ, ಆರೋಗ್ಯ ನಿರೀಕ್ಷಕರಾದ ಸತೀಶ, ಮೋಹನ್‌, ರಾಜೇಂದ್ರ, ಜಲಶಕ್ತಿ ಅಭಿಯಾನದ ಸಂಪನ್ಮೂಲ ವ್ಯಕ್ತಿ ಜಿ.ಎಸ್‌.ಜಗದೀಶ್‌, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿವಿಧ ಶಾಲೆಗಳ ಮಕ್ಕಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.