30 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ
Team Udayavani, Sep 22, 2020, 2:09 PM IST
ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ತೀವ್ರತೆ ಮುಂದುವರಿದಿದ್ದು, ಸೋಂಕಿತರ ಸಂಖ್ಯೆ 30 ಸಾವಿರದ ಗಡಿ ದಾಟಿದೆ. ಸೋಮವಾರ 524 ಹೊಸ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,308ಕ್ಕೆ ಏರಿಕೆಯಾಗಿದೆ.
ಸೋಂಕಿತರ ಪೈಕಿ ಪಾಸಿಟಿವ್ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 278, ವಿಷಮಶೀತ ಜ್ವರವಿರುವ 134, ಉಸಿರಾಟದ ಸಮಸ್ಯೆ ಹೊಂದಿರುವ 23 ಹಾಗೂ ಪ್ರವಾಸದ ಹಿನ್ನೆಲೆಯ 89 ಮಂದಿಗೆ ಸೋಂಕು ತಗುಲಿದೆ.ಅಲ್ಲದೇವಿವಿಧಆಸ್ಪತ್ರೆಗಳಲ್ಲಿಚಿಕಿತ್ಸೆಪಡೆಯುತ್ತಿದ್ದ 15 ಮಂದಿ ಸೋಂಕಿತರು ತೀವ್ರ ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ706ಕ್ಕೆ ಏರಿಕೆಯಾಗಿದೆ.
25 ಸಾವಿರಕ್ಕೇರಿದ ಗುಣಮುಖರ ಸಂಖ್ಯೆ: ಒಂದೆಡೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಪ್ರತಿದಿನವೂ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದರೆ, ಮತ್ತೂಂದೆಡೆ ಸೋಂಕಿನಿಂದ ಚೇತರಿಸಿಕೊಂಡು ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸೋಮವಾರ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 633 ಮಂದಿ ಸೋಂಕಿತರು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು,ಇದರೊಂದಿಗೆಗುಣಮುಖರಾದವರ ಸಂಖ್ಯೆ25,115ಕ್ಕೆ ಏರಿಕೆಯಾಗಿದೆ.
ಸದ್ಯ ಜಿಲ್ಲೆಯಲ್ಲಿ4,487 ಸೋಂಕಿತರಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 314, ಕೋವಿಡ್ ಹೆಲ್ತ್ ಕೇರ್ ಸೆಂಟರ್‌ಗಳಲ್ಲಿ 785, ಖಾಸಗಿ ಆಸ್ಪತ್ರೆಗಳಲ್ಲಿ 299, ಹೋಂ ಐಸೊಲೇಷನ್‌ನಲ್ಲಿ 2,903 ಹಾಗೂ ಖಾಸಗಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 186 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.