ಎಲ್ಲ ಜಿಲ್ಲೆಗಳಲ್ಲೂ ಸೈಬರ್ ಪೊಲೀಸ್ ಠಾಣೆ: ಪರಮೇಶ್ವರ್
Team Udayavani, Apr 8, 2017, 10:28 AM IST
ಮೈಸೂರು: ಸೈಬರ್ ಕ್ರೈಂಗೆ ಸಂಬಂಧಿಸಿದ ದೂರು ನೀಡಲು ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಶೀಘ್ರದಲ್ಲೇ ಸೈಬರ್ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಇತ್ತೀಚೆಗೆ ಲಂಡನ್‌ನಲ್ಲಿ ನಡೆದ ಪೊಲೀಸ್ ಇಲಾಖೆಯಲ್ಲಿ ತಂತ್ರಜಾnನ ಅಳವಡಿಕೆ ಕುರಿತ ವಿಚಾರಸಂಕಿರಣದಲ್ಲಿ ಪಾಲ್ಗೊಂಡ ಬಗ್ಗೆ ಮಾಹಿತಿ ನೀಡಿದ ಅವರು, ಸೈಬರ್ ಕ್ರೈಂ ಇಂದು ಪ್ರಪಂಚದಲ್ಲಿ ಸವಾಲಾಗಿದೆ. ಪೊಲೀಸ್ ಇಲಾಖೆಗೆ ತಂತ್ರಜಾnನ ಅಳವಡಿಕೆ ಅಗತ್ಯವಾಗಿದೆ. ಆಯ್ದ ಪೊಲೀಸ್ ಅಧಿಕಾರಿಗಳಿಗೆ ತಂತ್ರಜಾnನ ಬಳಕೆ ಕುರಿತು ತರಬೇತಿ ಕೊಡಿಸಲಾಗುತ್ತಿದೆ. ಪೇದೆಗಳಿಗೂ ಕಂಪ್ಯೂಟರ್ ತರಬೇತಿ ಕೊಡಿಸಲಾಗುತ್ತಿದೆ.
ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ತಂತ್ರಜಾnನ ಅಳವಡಿಕೆಗೆ ಮುಂದಾಗಿದ್ದು, ಮೊದಲು ಬೆಂಗಳೂರು ನಗರದಲ್ಲಿ ಅನುಷ್ಠಾನಕ್ಕೆ ತರಲಾಗುವುದು. ಇದಕ್ಕಾಗಿ 60 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ನಂತರ ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತಾಲಯಗಳ ವ್ಯಾಪ್ತಿಗೆ ವಿಸ್ತರಣೆ ಮಾಡಲಾಗುವುದು. ಬಳಿಕ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು ಎಂದರು.
ಸರ್ಕಾರ ಸಮರ್ಥವಾಗಿದೆ: ಕರಾವಳಿ ಭಾಗದಲ್ಲಿ ಕೋಮು ಸಂಘರ್ಷವನ್ನು ಹತ್ತಿಕ್ಕಲು ಸರ್ಕಾರ ಸಮರ್ಥವಾಗಿದೆ. ಮಂಗಳೂರು ನಗರದಲ್ಲಿ ಪೊಲೀಸರ ದೌರ್ಜನ್ಯದಿಂದ ಯುವಕನೊಬ್ಬನ ಮೂತ್ರಪಿಂಡ ವೈಫಲ್ಯವಾಗಿದೆ ಎಂದು ಪ್ರತಿಭಟನೆಗೆ ಹೊರಟವರು ಜಿಲ್ಲಾಧಿಕಾರಿಗೆ ಮನವಿ ಕೊಡುವ ಬದಲು, ಪೊಲೀಸ್ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿದ್ದರಿಂದ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಪೊಲೀಸರನ್ನು ಸಮರ್ಥಿಸಿಕೊಂಡ ಸಚಿವ ಪರಮೇಶ್ವರ್, ಪೊಲೀಸರ ತಪ್ಪಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು